ಬೆಳಗಾವಿ: ಗೋಕಾಕ್, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಯಲ್ಲಿ ಒಂದು ವಾರಗಳ ಕಾಲ ಜಾರಿಯಲ್ಲಿದ್ದ ಲಾಕ್‌ಡೌನ್ ಅನ್ನು ತೆರವುಗೊಳಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಆದೇಶ ಹೊರಡಿಸಿದ್ದಾರೆ.
ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.