ETV Bharat / city

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಆಯೋಗದ ವರದಿ ಸಲ್ಲಿಕೆಯ ನಂತರ ಕ್ರಮ ಎಂದ ಸಿಎಂ

ಪಂಚಮಸಾಲಿ ಸಮಾಜದವರ ಸಭೆಯ ನಂತರ ಮಾತನಾಡಿದ ಸಿಎಂ ಹಿಂದುಳಿದ ವರ್ಗ 2ಎ ಮೀಸಲಾತಿ ಬಗ್ಗೆ ಚರ್ಚೆ ನಡೆದಿದೆ. ವರದಿ ಬಂದ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

cm bommai reaction on  2A category reservation

author img

By

Published : Dec 16, 2021, 11:55 PM IST

Updated : Dec 17, 2021, 12:05 AM IST

ಬೆಳಗಾವಿ: ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆಯೋಗದ ವರದಿ ಸಲ್ಲಿಕೆಯ ನಂತರ ಕ್ರಮ ಎಂದ ಸಿಎಂ

ನಗರದ ಖಾಸಗಿ ಹೋಟೆಲ್​​ನಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೂಡಲಸಂಗಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳು ಹಾಗೂ ಸಮಾಜದ ಶಾಸಕರೊಂದಿಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ.

cm bommai reaction on  2A category reservation
ಪಂಚಮಸಾಲಿ ಸಮಾಜದವರೊಂದಿಗೆ ಸಿಎಂ ಸಭೆ

ಇದನ್ನೂ ಓದಿರಿ: ‘‘ಅತ್ಯಾಚಾರ ತಡೆಯಲಾಗದಿದ್ರೆ.... ?’’: ರಮೇಶ್ ‌ಕುಮಾರ್ ಸಾಂದರ್ಭಿಕ ಹೇಳಿಕೆ ಹಿಂದಿನ ಮರ್ಮವೇನು?

ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಂವಿಧಾನಾತ್ಮಕವಾಗಿ ಪರಿಶೀಲಿಸಲಾಗುವುದು. ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಬಗ್ಗೆ ಶಿಫಾರಸು ಮಾಡಲಾಗಿದೆ. ವರದಿ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಲಾಗುವುದು. ಚುನಾವಣೆ ನೀತಿ ಸಂಹಿತೆ ಇದ್ದುದರಿಂದ ಎಲ್ಲೆಡೆಯಿಂದ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

Last Updated : Dec 17, 2021, 12:05 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.