ಬೆಳಗಾವಿ: ದಿ.ಸುರೇಶ್ ಅಂಗಡಿ ಅವರು ಗೆದ್ದ ರೀತಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಅವರು ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ನಿರಂತರವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕೆಲಸ ಮಾಡ್ತಿದಾರೆ. ಎರಡು ವಿಧಾನಸಭೆ ಉಪಚುನಾವಣೆಯಲ್ಲಿ ದೊಡ್ಡ ಅಂತರದಿಂದ ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆಶಿ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರಿಗೆಲ್ಲಾ ಮತದಾರರು ಉತ್ತರ ಕೊಡ್ತಾರೆ ಎಂದರು.
ಇನ್ನು ತಮ್ಮ ಆರೋಗ್ಯದ ಕುರಿತು ಮಾಹಿತಿ ನೀಡಿದ ಅವರು, ಕೈ ಸನ್ನೆ ಮೂಲಕ ಅರಾಮಾಗಿದ್ದೇನೆ ಎಂದರು.