ETV Bharat / city

ಇದು ರಮೇಶ್ ಜಾರಕಿಹೊಳಿ ಮಾತಿಗೆ ಉತ್ತರ ಕೊಡುವ ಸಮಯವಲ್ಲ: ಚನ್ನರಾಜ್ ಹಟ್ಟಿಹೊಳಿ

author img

By

Published : Nov 26, 2021, 2:28 PM IST

Updated : Nov 26, 2021, 2:49 PM IST

ಇತ್ತೀಚಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಕೇಳುತ್ತಿದ್ದಂತೆ ಥೂ.. ಥೂ.. ಎಂದು ವ್ಯಂಗ್ಯವಾಡಿರುವುದಕ್ಕೆ ಪ್ರತಿಕ್ರಿಯಿಸಿ, ಇದು ಅವರ ಹೇಳಿಕೆಗೆ ಉತ್ತರ ಕೊಡುವ ಸಮಯವಲ್ಲ, ನಮಗೆ ಸಮಯವೂ ಇಲ್ಲ. ನಾವು ಯಾವುದೇ ಪತಿಕ್ರಿಯೆ ನೀಡುವುದಿಲ್ಲ..

congress candidate channaraj hattiholi
ಕಾಂಗ್ರೆಸ್​ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ

ಅಥಣಿ : ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಒಲವು ಇರುವುದರಿಂದ ನಾನು ಗೆದ್ದು ಬರುತ್ತೇನೆ ಎಂದು ಕಾಂಗ್ರೆಸ್​ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ತಿಳಿಸಿದರು.

ಅಥಣಿ ಪಟ್ಟಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಕೈಗೊಂಡ ಸಮಯದಲ್ಲಿ ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಕಾಗವಾಡ, ಅಥಣಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್​​ ಸದಸ್ಯರ ಪೈಕಿ ಶೇ.50ರಷ್ಟು ಕಾಂಗ್ರೆಸ್ ಅಭ್ಯರ್ಥಿಗಳಿದ್ದಾರೆ. ನಮಗೆ ಈ ಭಾಗದಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ.

ಈಟಿವಿ ಭಾರತ ಜತೆಗೆ ಕಾಂಗ್ರೆಸ್​ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಮಾತನಾಡಿರುವುದು..

ಮೊದಲನೇ ಸುತ್ತಿನಲ್ಲಿ ಜಯ ಸಾಧಿಸುತ್ತೇವೆ. ಅಥಣಿ ತಾಲೂಕಿನ ಕಾಂಗ್ರೆಸ್ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಹೇಳಿದರು.

ಇತ್ತೀಚಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಕೇಳುತ್ತಿದ್ದಂತೆ ಥೂ.. ಥೂ.. ಎಂದು ವ್ಯಂಗ್ಯವಾಡಿರುವುದಕ್ಕೆ ಪ್ರತಿಕ್ರಿಯಿಸಿ, ಇದು ಅವರ ಹೇಳಿಕೆಗೆ ಉತ್ತರ ಕೊಡುವ ಸಮಯವಲ್ಲ, ನಮಗೆ ಸಮಯವೂ ಇಲ್ಲ. ನಾವು ಯಾವುದೇ ಪತಿಕ್ರಿಯೆ ನೀಡುವುದಿಲ್ಲ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ, ಇಸ್ತ್ರಿ ಪೆಟ್ಟಿಗೆ ಹಂಚಿಕೆ ಮಾಡಲಾಗುತ್ತಿದೆ ಎಂಬ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ. ಇದು ವಿರೋಧ ಪಕ್ಷಗಳು ಮಾಡುತ್ತಿರುವ ಕುತಂತ್ರ. ಚುನಾವಣೆ ಎಂದರೆ ಇದು ಸಹಜವಾಗಿ ಕೇಳಿ ಬರುತ್ತದೆ.

ನಮ್ಮ ಕಾಂಗ್ರೆಸ್ ಪಕ್ಷ ಗೆಲ್ಲಬೇಕೆಂಬುದು ಮಾತ್ರ ನಮ್ಮ ಗುರಿ. ಇದರಲ್ಲಿ ಯಾವುದೇ ಆಮಿಷ ತೋರಿಸಿ ನಾವು ಮತಗಳನ್ನು ಪಡೆಯುತ್ತಿಲ್ಲ. ಅತಿ ಸರಳವಾದ ಚುನಾವಣೆ ಎದುರಿಸುತ್ತಿದ್ದೇವೆ ಎಂದು ತಿಳಿಸಿದರು.

Last Updated : Nov 26, 2021, 2:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.