ETV Bharat / city

ಬೈರತಿ ರಾಜೀನಾಮೆಗೆ ಆಗ್ರಹಿಸಿ ಸಭಾತ್ಯಾಗ: ಭಂಡ ಸರ್ಕಾರ ಎಂದು ಸಿದ್ದರಾಮಯ್ಯ ಕಿಡಿ

ಕಳಂಕ ಹೊತ್ತಿರುವ ವ್ಯಕ್ತಿಯನ್ನು ಉಳಿಸಿಕೊಳ್ಳಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿದೆ. ಅವರನ್ನು ಉಳಿಸಿಕೊಂಡರೆ ಸರ್ಕಾರ ಮುಂದುವರೆಯಲು ಯಾವುದೇ ನೈತಿಕ ಹಕ್ಕುಗಳು ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೈರತಿ ರಾಜೀನಾಮೆಗೆ ಆಗ್ರಹಿಸಿ ಸಭಾತ್ಯಾಗ
ಬೈರತಿ ರಾಜೀನಾಮೆಗೆ ಆಗ್ರಹಿಸಿ ಸಭಾತ್ಯಾಗ
author img

By

Published : Dec 20, 2021, 9:57 PM IST

ಬೆಳಗಾವಿ: ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ಸಚಿವ ಬೈರತಿ ಬಸವರಾಜ್ ರಾಜೀನಾಮೆಗೆ ಆಗ್ರಹಿಸಿ ವಿಧಾನಸಭೆಯಲ್ಲಿಂದು ಕಾಂಗ್ರೆಸ್ ನಾಯಕರು ಸಭಾತ್ಯಾಗ ಮಾಡಿದರು. ಭೋಜನ ವಿರಾಮದ ನಂತರ ಸದನ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಬಾವಿಗೆ ಇಳಿದು ಬೈರತಿ ಬಸವರಾಜ್ ರಾಜೀನಾಮೆಗೆ ಪಟ್ಟು ಹಿಡಿದರು.

ಇದೆ ವೇಳೆ ಎಂಇಎಸ್ ಪುಂಡಾಟಿಕೆ ಹಾಗೂ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಮಯಾವಕಾಶ ನೀಡುವಂತೆ ಜೆಡಿಎಸ್ ಸದಸ್ಯರು ಪಟ್ಟು ಹಿಡಿದರು. ಈ ವೇಳೆ ಸದನದಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಭೈರತಿ ಬಸವರಾಜ್ ವಿರುದ್ಧ ಜೆಎಂಎಫ್‍ಸಿ ನ್ಯಾಯಾಲಯ ಆದೇಶ ನೀಡಿದೆ. ಇಂಥ ಆರೋಪ ಬಂದಾಗ ಈ ಹಿಂದೆ ಕೆ.ಜೆ. ಜಾರ್ಜ್ ಕೂಡ ರಾಜೀನಾಮೆ ನೀಡಿದ್ದರು.

ಆದರೆ, ರಾಜ್ಯದಲ್ಲಿ ಈಗಿರುವುದು ಭಂಡ ಸರ್ಕಾರ. ಭ್ರಷ್ಟಾಚಾರಿಗಳೇ ಈ ಸರ್ಕಾರದಲ್ಲಿದ್ದಾರೆ. ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಚರ್ಚೆ ಆಗಬೇಕಿದೆ. ಹೀಗಾಗಿ ನಾವು ಸಭಾತ್ಯಾಗ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. ಎಲ್ಲ ಕಾಂಗ್ರೆಸ್ ಶಾಸಕರು ಸಭಾತ್ಯಾಗ ಮಾಡಿದರು. ನಂತರ ಆರಂಭವಾದ ಎಂಇಎಸ್ ಪುಂಡರ ಪುಂಡಾಟಿಕೆ ಹಾಗೂ ಉತ್ತರ ಕರ್ನಾಟಕ ಭಾಗದ ಚರ್ಚೆಯಲ್ಲಿ ಎಲ್ಲ ಕಾಂಗ್ರೆಸ್ ಸದಸ್ಯರು ಪಾಲ್ಗೊಂಡರು.

(ಇದನ್ನೂ ಓದಿ: ಸಿಎಂ ಬೊಮ್ಮಾಯಿ 1 ತಿಂಗಳಲ್ಲಿ ತಮ್ಮ ಅಸ್ತಿತ್ವ ಕಳೆದುಕೊಳ್ಳಲಿದ್ದಾರೆ.. ನಮ್ಮ ಶಾಪ ತಟ್ಟದೇ ಇರಲ್ಲ.. ಬಸವಪ್ರಕಾಶ ಸ್ವಾಮೀಜಿ)

ಕಳಂಕ ಹೊತ್ತಿರುವ ವ್ಯಕ್ತಿಯನ್ನು ಉಳಿಸಿಕೊಳ್ಳಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿದೆ: ಸಿದ್ದರಾಮಯ್ಯ

ಬೆಳಗಾವಿ ಸುವರ್ಣ ಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಕಳಂಕ ಹೊತ್ತಿರುವ ವ್ಯಕ್ತಿಯನ್ನು ಉಳಿಸಿಕೊಳ್ಳಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿದೆ. ಅವರನ್ನು ಉಳಿಸಿಕೊಂಡರೆ ಸರ್ಕಾರ ಮುಂದುವರೆಯಲು ಯಾವುದೇ ನೈತಿಕ ಹಕ್ಕುಗಳು ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರದ ಸಚಿವರಾಗಿರುವ ಬೈರತಿ ಬಸವರಾಜ್ ಅವರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಾಗಿ, ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ತನಿಖೆ ನಡೆಸಬೇಕು ಎಂದು ನ್ಯಾಯಾಲಯ ಆದೇಶ ನೀಡಿರುವ ಕುರಿತು ಶುಕ್ರವಾರ ನಾನು ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೆ. ಈ ಪ್ರಕರಣದಲ್ಲಿ ಇಬ್ಬರು ರಾಜಕಾರಣಿಗಳು ಆರೋಪಿ ಸ್ಥಾನದಲ್ಲಿದ್ದಾರೆ‌.

ಒಬ್ಬರು ಬೈರತಿ ಬಸವರಾಜ್, ಇನ್ನೊಬ್ಬರು ವಿಧಾನ ಪರಿಷತ್ ಸದಸ್ಯ ಶಂಕರ್. ಇವರ ವಿರುದ್ಧ ನಕಲಿ ಸಹಿ, ಆಸ್ತಿ ಕಬಳಿಕೆ, ಕ್ರಿಮಿನಲ್ ಚಟುವಟಿಕೆ ಮುಂತಾದ ಗಂಭೀರ ಪ್ರಕರಣವಿದೆ ಎಂದರು. ಈ ಹಿಂದೆ ಡಿ.ವೈ.ಎಸ್.ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾಗ ಪ್ರಕರಣದ ನೈತಿಕ ಹೊಣೆ ಹೊತ್ತು ತಮ್ಮ ತಪ್ಪಿಲ್ಲದಿದ್ದರೂ ಕೆ.ಜೆ ಜಾರ್ಜ್ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರು ನ್ಯಾಯಾಲಯದ ಆದೇಶ ಇದ್ದರೂ ಭಂಡತನದಿಂದ ಇನ್ನೂ ರಾಜೀನಾಮೆ ನೀಡಿಲ್ಲ,

ಈ ನಾಚಿಕೆಗೆಟ್ಟ ಸರ್ಕಾರ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕಿತ್ತು. ಅದನ್ನೂ ಮಾಡಿಲ್ಲ. ಈ ಪ್ರಕರಣವನ್ನು ತಾತ್ವಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕೆಂದು ತೀರ್ಮಾನ ಮಾಡಿದ್ದೆವು. ಆದರೆ, ನಮ್ಮ ನಿಲುವಳಿ ಸೂಚನೆಯನ್ನು ತಿರಸ್ಕಾರ ಮಾಡಿದ್ದಾರೆ. ನಾವು ಚರ್ಚೆಗೆ ಅವಕಾಶ ನೀಡಿಲ್ಲ, ಮತ್ತು ಬೈರತಿ ಬಸವರಾಜ್ ರಾಜೀನಾಮೆ ಪಡೆಯಲಿಲ್ಲ ಎಂಬ ಕಾರಣಕ್ಕೆ ಶುಕ್ರವಾರ ಧರಣಿ ಪ್ರಾರಂಭ ಮಾಡಿದ್ದೆವು.

ರಾಜ್ಯದಲ್ಲಿ ಸಾಕಷ್ಟು ಗಂಭೀರ ಸಮಸ್ಯೆಗಳಿವೆ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ದ್ವಂಸ ಮಾಡಲಾಗಿದೆ, ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಲಾಗಿದೆ, ಶಿವಾಜಿ ಪ್ರತಿಮೆಗೆ ಮಸಿ ಬಳಿಯಲಾಗಿದೆ, ಉತ್ತರ ಕರ್ನಾಟಕದ ಮಹದಾಯಿ, ಕೃಷ್ಣ ನದಿನೀರಿನ ವಿಚಾರ, ಎತ್ತಿನಹೊಳೆ ಯೋಜನೆ, ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ, ಬಿಟ್ ಕಾಯಿನ್, ಶೇ 40ರಷ್ಟು ಕಮಿಷನ್ ವಿಚಾರ ಮುಂತಾದ ಗಂಭೀರ ವಿಷಯಗಳ ಚರ್ಚೆ ನಡೆಸುವ ಉದ್ದೇಶದಿಂದ ಧರಣಿ ಕೈಬಿಟ್ಟಿದ್ದೇವೆ ಎಂದು ತಿಳಿಸಿದರು.

(ಇದನ್ನೂ ಓದಿ: ನಾಗ್ಪುರದಲ್ಲಿ ತಿಂಡಿಗೆ ಕಪ್ಪು ಇಡ್ಲಿ ಸ್ಪೆಶಾಲಿಟಿ ; ಟೇಸ್ಟ್‌ ಮಾಡಲು ಜನವೋ ಜನ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.