ETV Bharat / city

ಮತಾಂತರ ನಿಷೇಧ ಕಾಯ್ದೆ ಜಾರಿ ವಿರೋಧಿಸಲು ಕಾಂಗ್ರೆಸ್ ತೀರ್ಮಾನ - ಮತಾಂತರ ನಿಷೇಧ ಕಾಯ್ದೆಗೆ ಸಿದ್ದರಾಮಯ್ಯ ​ ವಿರೋಧ

ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಇದು ಆ ಪಕ್ಷದ ರಹಸ್ಯ ಕಾರ್ಯಸೂಚಿಯಾಗಿದೆ. ಈ ಹಿನ್ನೆಲೆಯಲ್ಲಿ ಕಾಯ್ದೆಯನ್ನು ವಿರೋಧಿಸಬೇಕಿದೆ ಎಂದು ಸಿದ್ದರಾಮಯ್ಯ ಹೇಳಿದಾಗ ಕಾಂಗ್ರೆಸ್​ ಶಾಸಕರೆಲ್ಲ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು..

congress meeting in belgavi
ಬೆಳಗಾವಿಯಲ್ಲಿ ಕಾಂಗ್ರೆಸ್​ ಸಭೆ
author img

By

Published : Dec 15, 2021, 12:22 PM IST

ಬೆಳಗಾವಿ : ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸಲು ಕಾಂಗ್ರೆಸ್ ನಿರ್ಧರಿಸಿದೆ. ಸುವರ್ಣಸೌಧದಲ್ಲಿ ಇಂದು ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ರಾಜಕೀಯ ಕಾರಣಕ್ಕಾಗಿ ಈ ಕಾಯ್ದೆ : ಸಭೆಯ ಆರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇದು ಭಾವನಾತ್ಮಕ ವಿಷಯ. ಒಂದು ಜಾತಿ ಹಾಗೂ ಧರ್ಮವನ್ನು ಗುರಿಯಾಗಿಟ್ಟುಕೊಂಡು ಸರ್ಕಾರ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ಇದನ್ನು ತೀವ್ರವಾಗಿ ವಿರೋಧಿಸಬೇಕಾಗಿದೆ. ರಾಜಕೀಯ ಕಾರಣಕ್ಕಾಗಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಹೊರಟಿದೆ ಎಂದರು.

ಕಾಯ್ದೆ ವಿರೋಧಿಸಲು ಸಮ್ಮತಿಸಿದ ಸಭೆ : ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಇದು ಆ ಪಕ್ಷದ ರಹಸ್ಯ ಕಾರ್ಯಸೂಚಿಯಾಗಿದೆ. ಈ ಹಿನ್ನೆಲೆಯಲ್ಲಿ ಕಾಯ್ದೆಯನ್ನು ವಿರೋಧಿಸಬೇಕಿದೆ ಎಂದು ಸಿದ್ದರಾಮಯ್ಯ ಹೇಳಿದಾಗ ಸಭೆಯಲ್ಲಿ ಕಾಂಗ್ರೆಸ್‌ ಶಾಸಕರೆಲ್ಲ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು.

ಪರಿಹಾರ ನೀಡುವಲ್ಲಿ ವಿಳಂಬ : ರಾಜ್ಯದಲ್ಲಿ ಮೂರು ಬಾರಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಇದರಿಂದ ತೀವ್ರ ಹಾನಿ ಆಯಿತು. ಜೊತೆಗೆ 23 ಜಿಲ್ಲೆಗಳಲ್ಲಿ ರೈತರ ಬೆಳೆ ಹಾನಿಗೊಳಗಾಗಿದೆ. ಲಕ್ಷಾಂತರ ಮನೆಗಳು ಮಳೆಯಿಂದಾಗಿ ಕುಸಿದಿವೆ. ಆದರೆ, ಸರ್ಕಾರ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದರು.

ಕೇಂದ್ರದಿಂದ ಮೋಸ?: ರಾಜ್ಯ ಸರ್ಕಾರ ನಾಲ್ಕು ಬಾರಿ ಮನವಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ಈವರೆಗೆ ನಯಾಪೈಸೆ ಪರಿಹಾರ ಕೊಟ್ಟಿಲ್ಲ. ಈ ಬಗ್ಗೆಯೂ ಮುಂದಿನ ದಿನಗಳಲ್ಲಿ ಹೋರಾಟ ಕೈಗೆತ್ತಿಕೊಳ್ಳಬೇಕಿದೆ. 18 ಸಾವಿರ ಕೋಟಿ ರೂ.ಗಳಷ್ಟು ಹಾನಿಯಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಹಾ ಮೋಸ ಮಾಡಿದೆ. ಆದರೂ ರಾಜ್ಯ ಸರ್ಕಾರ ಪರಿಹಾರ ನೀಡುವ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ. ಸತ್ಯಾಂಶವನ್ನು ಜನರ ಮುಂದಿಡುವ ಕೆಲಸವನ್ನು ನಮ್ಮ ಶಾಸಕರು ಮಾಡಬೇಕಿದೆ ಎಂದರು.

ಜೊತೆಗೆ ಎಪಿಎಂಸಿ, ಭೂ ಸುಧಾರಣೆ ಮತ್ತು ಜಾನುವಾರು ನಿಷೇಧ ಹತ್ಯೆಗೆ ಸಂಬಂಧಿಸಿದ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಲು ಸಭೆ ತೀರ್ಮಾನಿಸಿತು. ಈ ಕುರಿತು ನಿಲುವಳಿ ಸೂಚನೆ ಮಂಡಿಸುವುದಾಗಿ ಸಿದ್ದರಾಮಯ್ಯು ಅವರು ಸಭೆಗೆ ತಿಳಿಸಿದರು. ವಿಧಾನ ಮಂಡಲದ ಕಲಾಪಗಳಲ್ಲಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಿದ್ದರಾಮಯ್ಯ ಅವರು ಇದೇ ವೇಳೆ ಮನವಿ ಮಾಡಿದರು.

ಪಾದಯಾತ್ರೆ : ಮೇಕೆದಾಟು ಯೋಜನೆ ಜಾರಿಗೆ ತರುವಂತೆ ಸರ್ಕಾರವನ್ನು ಒತ್ತಾಯಿಸಿ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಪಾದಯಾತ್ರೆಯ ರೂಪುರೇಷೆ ವಿವರಿಸಿದ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು, ಶೀಘ್ರದಲ್ಲಿಯೇ ಪಾದಯಾತ್ರೆಯ ದಿನಾಂಕ ಘೋಷಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ವಿಚಾರ ಕ್ಯಾಬಿನೆಟ್​ನಲ್ಲಿ ಚರ್ಚೆ : ಸಚಿವ ಮಾಧುಸ್ವಾಮಿ

ಸಭೆಯಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಹಿರಿಯ ಮುಖಂಡರಾದ ರಮೇಶ್ ಕುಮಾರ್, ಡಾ. ಪರಮೇಶ್ವರ್​, ಹೆಚ್.ಕೆ. ಪಾಟೀಲ್, ಸಿಎಂ ಇಬ್ರಾಹಿಂ, ಬಿ.ಕೆ. ಹರಿಪ್ರಸಾದ್ ಮತ್ತಿತರರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.