ETV Bharat / city

ಅಥಣಿ-ಕಾಗವಾಡ ಮಧ್ಯೆ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣ: ಸಚಿವ ಶ್ರೀಮಂತ ಪಾಟೀಲ್

ನೆರೆ ಸಂತ್ರಸ್ತರ ಪರಿಹಾರ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇಶದಲ್ಲಿ ಯಾವುದೇ ರಾಜ್ಯ ಸರ್ಕಾರ ನೆರೆ ಪರಿಹಾರ ಯೋಜನೆಗಳಿಗೆ ನೀಡದೆ ಇರುವಷ್ಟು ಹಣವನ್ನು ನೆರೆ ಸಂತ್ರಸ್ತರಿಗೆ ಯಡಿಯೂರಪ್ಪನವರು ಕಲ್ಪಿಸಿದ್ದಾರೆ. ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸುವ ಪ್ರಕ್ರಿಯೆ ಮುಂದುವರೆದಿದ್ದು, ಹಂತ ಹಂತವಾಗಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯವನ್ನು ಸನ್ಮಾನ್ಯ ಮುಖ್ಯಮಂತ್ರಿಗಳು ಮಾಡಲಿದ್ದಾರೆ.

Minister Shrimanth Patil
ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಸಚಿವ ಶ್ರೀಮಂತ ಪಾಟೀಲ್
author img

By

Published : Mar 8, 2020, 7:57 PM IST

ಅಥಣಿ: ಅಥಣಿ ಭಾಗದ ಅನೇಕ ಜನ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕೇಳುತ್ತಿದ್ದಾರೆ. ಅಥಣಿ-ಕಾಗವಾಡ ಮಧ್ಯೆ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣ ಮಾಡುವ ಮೂಲಕ ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸಿ ಕೊಡುವ ಯೋಜನೆ ಹಾಕಿಕೊಂಡಿದ್ದೇನೆ ಎಂದು ಜವಳಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಖಾತೆ ಸಚಿವ ಶ್ರೀಮಂತ ಪಾಟೀಲ್ ಹೇಳಿದ್ದಾರೆ.

ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಸಚಿವ ಶ್ರೀಮಂತ ಪಾಟೀಲ್..

ಅಥಣಿ ಪಟ್ಟಣದಲ್ಲಿ ಅಬ್ದುಲ್ ಬಾರಿ ಮುಲ್ಲಾ ಪರಿವಾರದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಮಸ್ಯೆಗಳನ್ನು ಹೊತ್ತುಕೊಂಡು ಕಷ್ಟವಿದೆ ಎಂದು ನನ್ನೆಡೆಗೆ ಬರುವ ಪ್ರತಿಯೊಬ್ಬರು ನನ್ನ ಪಾಲಿನ ದೇವರು ಎಂದು ಭಾವಿಸುತ್ತೇನೆಂದರು. ಅಥಣಿಗೆ ನನಗೆ ಅವಿನಾಭಾವ ಸಂಬಂಧವಿದೆ, ನಾನು ಯಾವತ್ತೂ ಅಥಣಿ ಪೇಟೆಯ ಒಡನಾಟದಲ್ಲಿ ಇದ್ದವನು. ಹಲವಾರು ವರ್ಷಗಳವರೆಗೆ ಸಂಪರ್ಕದಲ್ಲಿದ್ದುದರಿಂದ ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ನನ್ನ ಮೇಲಿದೆ. ಇಂದು ತಾವೆಲ್ಲಾ ಆಗಮಿಸಿ, ನನಗೆ ಪ್ರೀತಿ ಪೂರ್ವಕ ಸನ್ಮಾನ ನೀಡಿದ್ದು ಸಂತಸ ತಂದಿದೆ. ಮುಂದಿನ ದಿನಮಾನದಲ್ಲಿ ಕೂಡ ತಮ್ಮ ಪ್ರೀತಿ, ವಿಶ್ವಾಸ ಯಾವತ್ತೂ ಇರಲಿ ಎಂದರು.

ನೆರೆ ಸಂತ್ರಸ್ತರ ಪರಿಹಾರ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇಶದಲ್ಲಿ ಯಾವುದೇ ರಾಜ್ಯ ಸರ್ಕಾರ ನೆರೆ ಪರಿಹಾರ ಯೋಜನೆಗಳಿಗೆ ನೀಡದೆ ಇರುವಷ್ಟು ಹಣವನ್ನು ನೆರೆ ಸಂತ್ರಸ್ತರಿಗೆ ಯಡಿಯೂರಪ್ಪನವರು ಕಲ್ಪಿಸಿದ್ದಾರೆ. ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸುವ ಪ್ರಕ್ರಿಯೆ ಮುಂದುವರೆದಿದ್ದು, ಹಂತ ಹಂತವಾಗಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯವನ್ನು ಸನ್ಮಾನ್ಯ ಮುಖ್ಯಮಂತ್ರಿಗಳು ಮಾಡಲಿದ್ದಾರೆ.

ನನ್ನ ಜವಳಿ ಇಲಾಖೆಯ ಕಾಮಗಾರಿಗಳನ್ನು ಪರಿಶೀಲಿಸಿ ಗುಣಮಟ್ಟದ ಕಾಮಗಾರಿ ನಡೆಸುವಂತೆ ಕ್ರಮ ಕೈಗೊಳ್ಳುತ್ತೇನೆ. ಹೀಗಾಗಿ ಪ್ರತಿಯೊಬ್ಬ ನಾಗರಿಕರು ಸರ್ಕಾರಿ ಯೋಜನೆಗಳು ಸರಿಯಾದ ರೀತಿಯಲ್ಲಿ ಗುಣಮಟ್ಟ ಕಾಯ್ದುಕೊಂಡು ಸಾಗುತ್ತಿವೆಯೋ, ಇಲ್ಲವೋ ಎಂದು ಪರಿಶೀಲಿಸುವುದು ಕರ್ತವ್ಯವಾಗಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.