ಬೆಳಗಾವಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ. ಜೊತೆಗೆ ಇಂದು ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಈ ಬಗ್ಗೆ ಇಂದು ಬೆಳಗಾವಿಗೆ ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು ಆಗಮಿಸುವ ಸಾಧ್ಯತೆ ಇದೆ. ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಆಗಮಿಸುವುದಾಗಿ ತಿಳಿದುಬಂದಿದೆ. ಬಳಿಕ ಸಂತೋಷ್ ಪಾಟೀಲ್ ಮನೆಗೆ ತೆರಳಿ ಕುಟುಂಬಸ್ಥರನ್ನು ಭೇಟಿ ಮಾಡಿ ಮಾಡುತ್ತಾರೆ ಎನ್ನಲಾಗ್ತಿದೆ. ನಂತರ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಜಂಟಿ ಮಾಧ್ಯಮಗೋಷ್ಟಿ ನಡೆಸುವ ಸಾಧ್ಯತೆಯಿದೆ.
ಗುತ್ತಿಗೆದಾರ ಸಚಿವರ ವಿರುದ್ಧ ಆರೋಪ ಮಾಡಿದ್ದು, ಈ ಬಗ್ಗೆ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಆರೋಪಿ ಸಚಿವರ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ನಗರದ ಕಾಂಗ್ರೆಸ್ ಭವನದಿಂದ ಡಿಸಿ ಕಚೇರಿ ವರೆಗೂ ಬೃಹತ್ ಪ್ರತಿಭಟನಾ ಱಲಿಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಕಾಂಗ್ರೆಸ್ ಪಕ್ಷದ ಹಾಲಿ ಮತ್ತು ಮಾಜಿ ಶಾಸಕರು, ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
ಓದಿ : ಸಂತೋಷ ಪಾಟೀಲ್ ಆತ್ಮಹತ್ಯೆ: ಸಚಿವ ಆರ್.ಅಶೋಕ್, ಹೆಚ್.ವಿಶ್ವನಾಥ್ ಹೇಳಿದ್ದೇನು?