ETV Bharat / city

ಈಶ್ವರಪ್ಪ ವಿರುದ್ಧ ಕಮಿಷನ್​ ಆರೋಪ ಮಾಡಿದ್ದ ಗುತ್ತಿಗೆದಾರ.. ಬೆಳಗಾವಿಯ ಸಂತೋಷ್​ ಪಾಟೀಲ್​ ಆತ್ಮಹತ್ಯೆ

ಮಾಧ್ಯಮದವರಿಗೆ ಡೆತ್ ನೋಟ್ ಕಳಿಸಿ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈಶ್ವರಪ್ಪ ವಿರುದ್ಧ ಕಮಿಷನ್​ ಆರೋಪ ಮಾಡಿದ್ದ ಗುತ್ತಿಗೆದಾರ

author img

By

Published : Apr 12, 2022, 1:06 PM IST

Updated : Apr 12, 2022, 3:33 PM IST

ಬೆಳಗಾವಿ/ಉಡುಪಿ: ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40 ರಷ್ಟು ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ವಾಟ್ಸಪ್​ನಲ್ಲಿ ಡೆತ್ ನೋಟ್ ಕಳಿಸಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿಯ ಲಾಡ್ಜ್​ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ನೇಣು ಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಉಡುಪಿ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ ಸಂತೋಷ್​ ಪಾಟೀಲ್​ ಸದ್ಯ ವಿಜಯ ನಗರದಲ್ಲಿ ವಾಸವಾಗಿದ್ದರು‌. ಬಿಜೆಪಿ ಸದಸ್ಯರೂ ಆಗಿರುವ ಇವರು ಕೆ.ಎಸ್. ಈಶ್ವರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗಿದೆ. ಸಂತೋಷ ಅವರು ಹಿಂಡಲಗಾ ಗ್ರಾಮದಲ್ಲಿ 4 ಕೋಟಿ ರೂಪಾಯಿ ವೆಚ್ಚದಲ್ಲಿ 108 ಕಾಮಗಾರಿ ನೆರವೇರಿಸಿದ್ದರು. ಇದರ ಬಿಲ್ ಪಡೆಯಲು ಈಶ್ವರಪ್ಪ ಶೇ.40 ಕಮಿಷನ್ ಕೇಳುತ್ತಿರುವ ಬಗ್ಗೆ ಸಂತೋಷ ಆರೋಪ ಮಾಡಿದ್ದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಈ ಬಗ್ಗೆ ದೂರು ಸಲ್ಲಿಸಿದ್ದರು. ಬಳಿಕ ಈಶ್ವರಪ್ಪ ಅವರು ಸಂತೋಷ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಡೆತ್‌ನೋಟ್‌ನಲ್ಲಿ ಏನಿದೆ?: 'ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ. ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ, ಮಗುವಿಗೆ ಸರ್ಕಾರ ಅಂದರೆ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳು ಮತ್ತು ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಸಹಾಯಹಸ್ತ ನೀಡಬೇಕೆಂದು ಕೈಮುಗಿದು ಕೇಳಿಕೋಳುತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು. ನನ್ನ ಜೊತೆ ಬಂದ ನನ್ನ ಗೆಳೆಯರಾದ ಸಂತೋಷ ಮತ್ತು ಪ್ರಶಾಂತಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡ ಬಂದಿರುತ್ತೇನೆ ಅಷ್ಟೇ. ಅವರಿಗೂ ಮತ್ತು ನನ್ನ ಸಾವಿಗೂ ಯಾವುದೇ ಸಂಬಂಧ ಇರುವುದಿಲ್ಲ' ಎಂದು ಮಾಧ್ಯಮದವರಿಗೆ ಸಂತೋಷ್​ ಕಳಿಸಿದ್ದರೆನ್ನಲಾದ ವಾಟ್ಸಪ್​ನಲ್ಲಿ ಡೆತ್ ನೋಟ್​ನಲ್ಲಿದೆ.

ಡೆತ್ ನೋಟ್ ಬಂದ ತಕ್ಷಣವೇ ಬೆಳಗಾವಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಆಗ ಸಂತೋಷ ಮೊಬೈಲ್ ಉಡುಪಿಯಲ್ಲಿ ಇರುವುದು ಪತ್ತೆಯಾಗಿತ್ತು. ತಕ್ಷಣವೇ ಉಡುಪಿ ಪೊಲೀಸರ ಗಮನಕ್ಕ ತರಲಾಗಿತ್ತು.

Last Updated : Apr 12, 2022, 3:33 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.