ETV Bharat / city

ಗುತ್ತಿಗೆದಾರ ಆತ್ಮಹತ್ಯೆ ಕೇಸ್: ಬೆಳಗಾವಿಗೆ ಮತ್ತೆ ಉಡುಪಿ ಪೊಲೀಸರ ಎಂಟ್ರಿ, ಹಿಂಡಲಗಾ ‌ಗ್ರಾಪಂ ಅಧ್ಯಕ್ಷನ ಮೊಬೈಲ್ ಜಪ್ತಿ

ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಮೊಬೈಲ್​ ವಶಕ್ಕೆ ಪಡೆದಿದ್ದಾರೆ.

ಗುತ್ತಿಗೆದಾರ ಆತ್ಮಹತ್ಯೆ ಕೇಸ್
ಗುತ್ತಿಗೆದಾರ ಆತ್ಮಹತ್ಯೆ ಕೇಸ್
author img

By

Published : Apr 30, 2022, 8:03 AM IST

ಬೆಳಗಾವಿ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಉಡುಪಿ ಪೊಲೀಸರು ಮತ್ತೆ ಬೆಳಗಾವಿಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ಸ್‌ಪೆಕ್ಟರ್ ಶರಣಗೌಡ ಪಾಟೀಲ್ ನೇತೃತ್ವದ ತಂಡ ಮತ್ತೆ ತನಿಖೆ ಚುರುಕುಗೊಳಿಸಿದೆ. ಹಿಂಡಲಗಾ ಗ್ರಾ.ಪಂ.ಅಧ್ಯಕ್ಷ ನಾಗೇಶ್ ಮನ್ನೋಳಕರ್ ಮೊಬೈಲ್‌ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತೋಷ್​ ಪಾಟೀಲ್ ಮನೆಯನ್ನು ನಾಗೇಶ್ ಮನ್ನೋಳಕರ್, ಗ್ರಾ.ಪಂ.ಸದಸ್ಯ ಎನ್.ಎಸ್.ಪಾಟೀಲ್ ಸೇರಿ ಜಿಪಿಎ ಮಾಡಿಸಿಕೊಂಡಿದ್ದರು.

ಜಿಪಿಎ ಮಾಡಿಸಿಕೊಂಡಿದ್ದೇಕೆ? ಜಿಪಿಎ ಮಾಡಿಸಿಕೊಂಡು ಎಷ್ಟು ಹಣ ಕೊಟ್ಟಿದ್ರಿ? 108 ಕಾಮಗಾರಿ ಆರಂಭಿಸಲು ಹೇಳಿದ್ದು ಯಾರು? ಎಂಬ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಮತ್ತೊಂದೆಡೆ ಉಡುಪಿ ಪೊಲೀಸರು ನಾಗೇಶ್ ಮನ್ನೋಳಕರ್ ಮೊಬೈಲ್‌ನ್ನು ಅನಾಲಿಸಿಸ್‌ಗೆ ಕಳಿಸಿದ್ದಾರೆ. ಹಿಂಡಲಗಾ ಗ್ರಾ‌ಪಂ 35 ಸದಸ್ಯರಿಗೂ ವಿಚಾರಣೆಗೆ ಹಾಜರಾಗಲು ಸೂಚ‌ನೆ ನೀಡಿದ್ದಾರೆ. ಪ್ರತಿಯೊಬ್ಬ ಸದಸ್ಯರನ್ನು ಪ್ರತ್ಯೇಕವಾಗಿ ಒನ್ ಟು ಒನ್ ವಿಚಾರಣೆ ನಡೆಸಲು ನಿರ್ಧರಿಸಿದ್ದಾರೆ.

ನಿಮ್ಮ ವಾರ್ಡ್‌ನಲ್ಲಿ ಸಂತೋಷ ಪಾಟೀಲ್ ಕಾಮಗಾರಿ ಮಾಡಿದ್ದಾರಾ? ಕಾಮಗಾರಿ ಮಾಡಿದ್ರೆ ಎಷ್ಟು ವೆಚ್ಚದಲ್ಲಿ ಕಾಮಗಾರಿ ಮಾಡಿದ್ದಾರೆ? ಯಾವ ಅನುದಾನದಲ್ಲಿ ಕಾಮಗಾರಿ ಮಾಡುತ್ತಿರುವುದಾಗಿ ಹೇಳಿದ್ದರು, ಸಂತೋಷ ಪಾಟೀಲ್‌ರವರೇ ಕಾಮಗಾರಿ ಮಾಡಿದ್ದಾರೋ? ಉಪಗುತ್ತಿಗೆದಾರರು ಮಾಡಿದ್ದಾರೋ? ಹೀಗೆ ಎಲ್ಲ ಮಾಹಿತಿ ಪಡೆದು ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಮಹಿಳಾ ಗ್ರಾ.ಪಂ. ಸದಸ್ಯರ ವಿಚಾರಣೆಗೆ ಮಹಿಳಾ ಪೇದೆಗಳ ನಿಯೋಜನೆ ಮಾಡಲಾಗಿದೆ. ಸಂತೋಷ್​ ಪಾಟೀಲ್‌ನಿಂದ ಉಪಗುತ್ತಿಗೆ ಪಡೆದ 12 ಉಪಗುತ್ತಿಗೆದಾರರಿಂದಲೂ ಮಾಹಿತಿ ಸಂಗ್ರಹಿಸಲಿದ್ದಾರೆ. ಉಪಗುತ್ತಿಗೆ ಪಡೆದು ಕಾಮಗಾರಿ ಮಾಡಿದ ವೆಚ್ಚ, ಕಾಮಗಾರಿಗೆ ಸಾಮಗ್ರಿ ಖರೀದಿಸಿದ್ದ ರಸೀದಿ ಎಲ್ಲ ದಾಖಲೆ ನೀಡುವಂತೆಯೂ ಸೂಚನೆ ನೀಡಲಾಗಿದೆ.

(ಇದನ್ನೂ ಓದಿ: ಹಿಂಡಲಗಾ ಅಭಿವೃದ್ಧಿಗೆ ಲೆಟರ್ ಕೊಟ್ಟಿದ್ದು ನಾನೇ, ಅನುಮೋದನೆ ಬಗ್ಗೆ ಮಾಹಿತಿ ಇಲ್ಲ: ಜಿ.ಪಂ ಮಾಜಿ ಅಧ್ಯಕ್ಷೆ ಆಶಾ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.