ETV Bharat / city

ಬೀಮ್ಸ್‌ನಲ್ಲಿ ಕೊರೊನಾ ಸೋಂಕಿತ ಸಾವು: ಆ್ಯಂಬುಲೆನ್ಸ್​ಗೆ ಬೆಂಕಿ ಹಚ್ಚಿ ಸಂಬಂಧಿಕರ ಆಕ್ರೋಶ - belgaum latest news

ಬೆಳಗಾವಿಯ ಬೀಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಕೊರೊನಾ ರೋಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕೋಪಗೊಂಡ ಮೃತ ವ್ಯಕ್ತಿಯ ಸಂಬಂಧಿಕರು ಆ್ಯಂಬುಲೆನ್ಸ್ ವಾಹನಕ್ಕೆ ಬೆಂಕಿ ಹಚ್ಚಿ ಗಲಾಟೆ ಮಾಡಿದ್ದಾರೆ.

Corona-infected death in Beams.. Relatives who set fire to an ambulance
ಬೀಮ್ಸ್ ಐಸಿಯುನಲ್ಲಿದ್ದ ಕೊರೊನಾ ಸೋಂಕಿತ ಸಾವು..ಆ್ಯಂಬುಲೆನ್ಸ್​ಗೆ ಬೆಂಕಿ ಹಚ್ಚಿದ ಸಂಬಂಧಿಕರು
author img

By

Published : Jul 22, 2020, 11:00 PM IST

ಬೆಳಗಾವಿ: ನಗರದ ಬೀಮ್ಸ್ ತುರ್ತು ನಿಗಾ ಘಟಕದಲ್ಲಿ ಕೊರೊನಾ ರೋಗಿ ಸಾವನ್ನಪ್ಪಿದ್ದು, ಮೃತ ವ್ಯಕ್ತಿಯ ಸಂಬಂಧಿಕರು ಆ್ಯಂಬುಲೆನ್ಸ್ ವಾಹನಕ್ಕೆ ಬೆಂಕಿ ಹಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೀಮ್ಸ್ ಐಸಿಯುನಲ್ಲಿದ್ದ ಕೊರೊನಾ ಸೋಂಕಿತ ಸಾವು, ಆ್ಯಂಬುಲೆನ್ಸ್​ಗೆ ಬೆಂಕಿ ಹಚ್ಚಿದ ಸಂಬಂಧಿಕರು

ನಗರದ ಕ್ಯಾಂಪ್ ಪ್ರದೇಶದ ಕೊರೊನಾ ಸೋಂಕಿತ ಜುಲೈ 19ರಂದು ಬೀಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ, ಇಂದು‌ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದರಿಂದ ಕೋಪಗೊಂಡ ಮೃತ ವ್ಯಕ್ತಿಯ ಸಂಬಂಧಿಕರು ಆ್ಯಂಬುಲೆನ್ಸ್​ಗೆ ಬೆಂಕಿ ಹಚ್ಚಿ, ಪೊಲೀಸ್ ಜೀಪ್ ಹಾಗು ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಇದರ ಜೊತೆಗೆ ಬೀಮ್ಸ್ ಆಸ್ಪತ್ರೆಯೊಳಗೆ ನುಗ್ಗಿದ ಕೆಲವರು ಸಿಬ್ಬಂದಿಯ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಆ್ಯಂಬುಲೆನ್ಸ್​ಗೆ ಬೆಂಕಿ ಬಿದ್ದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ‌ ನಂದಿಸುವಲ್ಲಿ ಯಶಸ್ವಿಯಾದರು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಎಸ್​ಪಿ ಲಕ್ಷಣ ನಿಂಬರಗಿ, ನಗರ ಪೊಲೀಸ್ ಆಯುಕ್ತ ತ್ಯಾಗರಾಜನ್ ಪರಿಶೀಲನೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.