ಚಿಕ್ಕೋಡಿ (ಬೆಳಗಾವಿ): ಜಿಲ್ಲೆಯ ಹುಕ್ಕೇರಿ ಪಟ್ಟಣದ ಅಂಗನವಾಡಿ ಕಾರ್ಯಕರ್ತೆ ಪತಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಅಂಗನವಾಡಿ ಕಾರ್ಯಕರ್ತೆ ಪತಿ ಉಸಿರಾಟದ ತೊಂದರೆಯಿಂದ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಸೋಂಕು ದೃಢಪಟ್ಟಿದೆ. ಸೋಂಕಿತ ವಾಸಿಸುತ್ತಿದ್ದ ಏರಿಯಾವನ್ನ ಆರೋಗ್ಯ ಇಲಾಖೆ ಅಧಿಕಾರಿಗಳು ಸೀಲ್‌ಡೌನ್ ಮಾಡಿದ್ದಾರೆ.
ಪತಿಗೆ ಸೋಂಕು ದೃಢಪಟ್ಟ ಹಿನ್ನೆಲೆ, ಅಂಗನವಾಡಿ ಕಾರ್ಯಕರ್ತೆಯ ಗಂಟಲು ದ್ರವ ಪರೀಕ್ಷೆಗೆ ರವಾನಿಸಲಾಗಿದೆ.