ETV Bharat / city

ಬೆಳಗಾವಿಯ ಪೀರನವಾಡಿ ಗ್ರಾಮದಲ್ಲಿ ಕೊರೊನಾ: ನಿಷೇಧಿತ ಪ್ರದೇಶವೆಂದು ಘೋಷಣೆ - ಕೊರೊನಾ ವೈರಸ್​​ ಅಪ್​ಡೇಟ್​​

ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ಪ್ರದೇಶ ಎಂದು ಘೋಷಿಸಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ
ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ
author img

By

Published : Apr 14, 2020, 9:31 PM IST

ಬೆಳಗಾವಿ: ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ನಿಷೇಧಿತ ಪ್ರದೇಶ (ಕಂಟೈನ್ಮೆಂಟ್ ಝೋನ್) ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

ಗ್ರಾಮದ ನಿವಾಸಿಗಳ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಿಷೇಧಿತ ಪ್ರದೇಶದ ಹೊರಗಿನ 2 ಕಿ.ಮೀ. ವ್ಯಾಪ್ತಿಯನ್ನು ಬಫರ್​​ ಝೋನ್​​ ಎಂದು ಘೋಷಿಸಲಾಗಿದೆ. ಗ್ರಾಮದ 3 ಕಿ.ಮೀ. ವ್ಯಾಪ್ತಿಯಲ್ಲಿ ಓಡಾಡುವುದು, ವಾಹನಗಳ ಮೂಲಕ ಒಳ ಪ್ರವೇಶಿಸುವುದು ಹಾಗೂ ನಿರ್ಗಮಿಸುವುದನ್ನು ನಿರ್ಬಂಧಿಸಲಾಗಿದೆ.

ನಿಷೇಧಿತ ಪ್ರದೇಶಗಳ 3 ಕಿ.ಮೀ. ವ್ಯಾಪ್ತಿಯಲ್ಲಿ ಬರುವ ನಿವಾಸಿಗಳು ತಮ್ಮ ಬಡಾವಣೆಯ ಗಲ್ಲಿಯಲ್ಲಿ ಶುಚಿತ್ವವನ್ನು ತಪ್ಪದೆ ಕಾಪಾಡಿಕೊಂಡು ಬರಬೇಕು. ಐದಕ್ಕೂ ಹೆಚ್ಚು ಮಂದಿ ಗುಂಪು ಸೇರುವುದು, ಮೆರವಣಿಗೆ, ಸಭೆ, ಧಾರ್ಮಿಕ ಉತ್ಸವ, ಉರುಸ್​, ಮದುವೆ, ಕ್ರೀಡೆ, ಸಂತೆ, ಜಾತ್ರೆ, ಸಮ್ಮೇಳನ, ನಾಟಕೋತ್ಸವ, ವಿಚಾರ ಗೋಷ್ಠಿ ಸೇರಿದಂತೆ ಎಲ್ಲವನ್ನೂ ನಿಷೇಧಿಸಲಾಗಿದೆ.

ಆದೇಶ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕಾರ ಕ್ರಮ‌ ಕೈಗೊಳ್ಳಲಾಗುವುದು ಎಂದು ಡಾ. ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.