ETV Bharat / city

ಅಥಣಿಯಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್​ಗಳ ಸಂಚಾರ ಸ್ಥಗಿತ: ಈಟಿವಿ ಭಾರತ ಇಂಪ್ಯಾಕ್ಟ್ - ಅಥಣಿ ಟು ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗಿರುವುದರಿಂದ ರಾಜ್ಯದ ಜನರ ಹಿತದೃಷ್ಟಿಯಿಂದ ಬಸ್ ಸಂಚಾರ ಬಂದ್​ ಮಾಡಲಾಗಿದೆ. ದಿನನಿತ್ಯ ಅಥಣಿಯಿಂದ ಮಹಾರಾಷ್ಟ್ರಕ್ಕೆ ಸಂಚರಿಸುತ್ತಿದ್ದ ನೂರಾರು ಬಸ್​ಗಳನ್ನು ಈಟಿವಿ ಭಾರತ ವರದಿ ಬಳಿಕ ಸ್ಥಗಿತಗೊಳಿಸಲಾಗಿದೆ.

athani-to-maharashtra-buss-band
ಅಥಣಿ ಟು ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ
author img

By

Published : Mar 20, 2020, 5:19 PM IST

ಅಥಣಿ(ಬೆಳಗಾವಿ): ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಆತಂಕ ಹೆಚ್ಚಾದ ಹಿನ್ನೆಲೆ ಅಥಣಿಯಿಂದ ಮಹಾರಾಷ್ಟ್ರಕ್ಕೆ ಕರ್ನಾಟಕ ಸಾರಿಗೆ ಇಲಾಖೆ ಬಸ್ ಸಂಚಾರವನ್ನು ಬಂದ್​ ಮಾಡಿದೆ.

ಮಹಾರಾಷ್ಟ್ರದಲ್ಲಿ ಮಹಾಮಾರಿ ತನ್ನ ಕಬಂಧಬಾಹುಗಳನ್ನು ಚಾಚುತ್ತಲೇ ಇದ್ದು, ಸೋಂಕಿತರ ಸಂಖ್ಯೆ 50 ಗಡಿ ದಾಟಿದೆ. ಈ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ರಾಜ್ಯದ ನೂರಾರು ಬಸ್​ಗಳು ಸಂಚರಿಸುತ್ತಿರುವುದರಿಂದ ಇಲ್ಲಿನ ಜನರಲ್ಲಿ ಆತಂಕ ಮನೆಮಾಡಿರುವ ಕುರಿತು ಈಟಿವಿ ಭಾರತ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ಬಳಿಕ ಎಚ್ಚೆತ್ತುಕೊಂಡ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್​ಗಳ ಸಂಚಾರವನ್ನು ಇಂದಿನಿಂದ ಬಂದ್​ ಮಾಡಿದ್ದಾರೆ.

ಓದಿ:ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು: ಆತಂಕದಲ್ಲಿ ಅಥಣಿ ಜನತೆ

ಡಿಸಿಎಂ ಲಕ್ಷ್ಮಣ್​ ಸವದಿ ಹಾಗೂ ಸಾರಿಗೆ ಸಚಿವರ ಸ್ವಕ್ಷೇತ್ರ ಅಥಣಿಯಲ್ಲಿ ನಿರ್ವಾಹಕ ಮತ್ತು ಚಾಲಕರಲ್ಲಿ ಕೊರೊನಾ ವೈರಸ್ ಭೀತಿ ಉಂಟಾಗಿದೆ. ದೇಶದಲ್ಲಿ ಮಹಾರಾಷ್ಟ್ರ ರಾಜ್ಯ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ನಂಬರ್ 1 ಸ್ಥಾನದಲ್ಲಿ ಇರುವುದರಿಂದ ಪಕ್ಕದ ಅಥಣಿ ಜನತೆ ಅಕ್ಷರಶಃ ತತ್ತರಿಸಿದ್ದಾರೆ ಎಂದು ವರದಿಯಲ್ಲಿ ವಿವರಿಸಲಾಗಿತ್ತು.

ಅಥಣಿ ಟು ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ

ಇದೀಗ ಅಧಿಕಾರಿಗಳು ಎಚ್ಚೆತ್ತುಕೊಂಡು ಮಹಾರಾಷ್ಟ್ರಕ್ಕೆ ಹೋಗುವ ಬಸ್​ಗಳನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಈಟಿವಿ ಭಾರತ ವರದಿಗೆ ಸ್ಪಂದಿಸಿರುವ ಅಧಿಕಾರಿಗಳಿಗೆ ಧನ್ಯವಾದ. ಸಾರ್ವಜನಿಕರು ಮತ್ತು ರಾಜ್ಯದ ಹಿತದೃಷ್ಟಿಯಿಂದ ಅವರು ತೆಗೆದುಕೊಂಡಿರುವ ಕ್ರಮ ಶ್ಲಾಘನೀಯ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.