ETV Bharat / city

ರಾಜ್ಯದ ಮೊದಲ ಕೋಕಾ ಪ್ರಕರಣದ ತೀರ್ಪಿಗೆ ಕ್ಷಣಗಣನೆ.. ಕೋರ್ಟ್​ಗೆ ಆಗಮಿಸಿದ ವಿಶೇಷ ಅಭಿಯೋಜಕರು - nayaka murder case judgement

ರಾಜ್ಯದ ಮೊದಲ ಕೋಕಾ ಪ್ರಕರಣದ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು, ಸರ್ಕಾರಿ ವಿಶೇಷ ಅಭಿಯೋಜಕರು ನ್ಯಾಯಾಲಯಕ್ಕೆ ಆಗಮಿಸಿದ್ದಾರೆ..

Countdown started to the state's first coca case judgement
ಬೆಳಗಾವಿ ಕೋರ್ಟ್​ಗೆ ಆಗಮಿಸಿದ ವಿಶೇಷ ಅಭಿಯೋಜಕರು
author img

By

Published : Mar 30, 2022, 12:13 PM IST

ಬೆಳಗಾವಿ : ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಅದಿರು ಉದ್ಯಮಿ ಆರ್.ಎನ್. ನಾಯಕ ಕೊಲೆ ಪ್ರಕರಣದ ತೀರ್ಪು ಬೆಳಗಾವಿಯ ಕೋಕಾ ನ್ಯಾಯಾಲಯದಲ್ಲಿಂದು ಮಧ್ಯಾಹ್ನ 2:45ಕ್ಕೆ ಪ್ರಕಟವಾಗಲಿದೆ. ರಾಜ್ಯದ ಮೊದಲ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಪ್ರಕರಣದ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು, ಸರ್ಕಾರಿ ವಿಶೇಷ ಅಭಿಯೋಜಕರು ನ್ಯಾಯಾಲಯಕ್ಕೆ ಆಗಮಿಸಿದ್ದಾರೆ. ಸರ್ಕಾರಿ ವಿಶೇಷ ಅಭಿಯೋಜಕ ಕೆ.ಜಿ. ಪುರಾಣಿಕಮಠ, ಹೆಚ್ಚುವರಿ ವಿಶೇಷ ಅಭಿಯೋಜಕ ಶಿವಪ್ರಸಾದ್ ಆಲ್ವಾ ಈಗಾಗಲೇ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.

ಮಧ್ಯಾಹ್ನ 2.45ಕ್ಕೆ ತೀರ್ಪು ಪ್ರಕಟಿಸುವುದಾಗಿ ಬೆಳಗಾವಿ ಕೋಕಾ ನ್ಯಾಯಾಲಯದ ನ್ಯಾಯಾಧೀಶ ಸಿ ಎಂ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 3 ಕೋಟಿ ಹಫ್ತಾ ನೀಡದ ಹಿನ್ನೆಲೆ ಸುಪಾರಿ ನೀಡಿ ಆರ್ ಎನ್ ನಾಯಕ್ ಹತ್ಯೆಗೈಯಲಾಗಿತ್ತು ಎನ್ನುವ ಆರೋಪ ಕೇಳಿ ಬಂದಿತ್ತು. ಭೂಗತ ಪಾತಕಿ ಬನ್ನಂಜೆ ರಾಜಾ ವಿರುದ್ಧ ಕೋಕಾ ಕಾಯ್ದೆಯಡಿ ಕರ್ನಾಟಕ ಪಶ್ಚಿಮ ವಲಯದ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕೋರ್ಟ್​ಗೆ ಆಗಮಿಸಿದ ವಿಶೇಷ ಅಭಿಯೋಜಕರು..

ಈ ಹಿನ್ನೆಲೆ ಭೂಗತ ಪಾತಕಿ ಬನ್ನಂಜೆ ‌ರಾಜಾ ಸೇರಿ 13 ಪಾತಕಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಘಟನೆ ನಡೆದು ಬರೋಬ್ಬರಿ 9 ವರ್ಷಗಳ ಬಳಿಕ ತೀರ್ಪು ಪ್ರಕಟವಾಗುತ್ತಿದೆ. 7 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಇಂದು ಅಂತಿಮ ತೀರ್ಪು ಪ್ರಕಟವಾಗಲಿದೆ.

ಇದನ್ನೂ ಓದಿ: ಇಂದು ಉದ್ಯಮಿ ನಾಯಕ ಕೊಲೆ ಪ್ರಕರಣದ ತೀರ್ಪು ಪ್ರಕಟ: ಬನ್ನಂಜೆ ‌ರಾಜಾ ಸೇರಿ 13 ಆರೋಪಿಗಳ ಭವಿಷ್ಯ ನಿರ್ಧಾರ!

ಅದಿರು ಉದ್ಯಮಿ ಆರ್.ಎನ್. ನಾಯಕ ಅವರು 2013ರ ಡಿಸೆಂಬರ್ 21ರಂದು ಕೊಲೆಯಾಗಿದ್ದರು. ಈ ಪ್ರಕರಣದಲ್ಲಿ ಒಟ್ಟು 16 ಆರೋಪಿಗಳಿದ್ದಾರೆ. ಮೂವರು ತಲೆಮರಿಸಿಕೊಂಡಿದ್ದು, 13 ಮಂದಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.