ETV Bharat / city

ಕೋವಿಡ್​ ನಿಯಮಗಳಿಗಿಲ್ಲ ಕಿಮ್ಮತ್ತು: ಬೆಳಗಾವಿಯ ಹಣ್ಣಿನ ಮಾರುಕಟ್ಟೆಯಲ್ಲಿ ಜನಸ್ತೋಮ - ಕೊರೊನಾ ಎರಡನೇ ಅಲೆ

ಬೆಳಗಾವಿಯ ಗಾಂಧಿನಗರದಲ್ಲಿರುವ ಹಣ್ಣಿನ ಮಾರುಕಟ್ಟೆಯಲ್ಲಿ ಜನರು ಮಾಸ್ಕ್​ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ನಡೆಸುತ್ತಿದ್ದಾರೆ.

Belgaum
ಬೆಳಗಾವಿಯ ಹಣ್ಣಿನ ಮಾರುಕಟ್ಟೆಯಲ್ಲಿ ಜನಜಂಗುಳಿ
author img

By

Published : May 24, 2021, 10:46 AM IST

ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಜೊತೆಗೆ ಸಾವಿನ ಪ್ರಮಾಣ ಹೆಚ್ಚುತ್ತಲೇ ಇದ್ದರೂ ಕೂಡ ಜನರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಗುಂಪು ಸೇರುತ್ತಿದ್ದಾರೆ.

ಬೆಳಗಾವಿಯ ಹಣ್ಣಿನ ಮಾರುಕಟ್ಟೆಯಲ್ಲಿ ಜನಜಂಗುಳಿ

ಇಲ್ಲಿನ ಗಾಂಧಿನಗರದಲ್ಲಿರುವ ಹಣ್ಣಿನ ಮಾರುಕಟ್ಟೆಯಲ್ಲಿ ಜನರು ಮಾಸ್ಕ್​ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಮತ್ತಷ್ಟು ಕೊರೊನಾ‌ ಸೋಂಕು ಹರಡುವ ಭೀತಿ ಹೆಚ್ಚಾಗಿದೆ.

ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನ:

ಗಾಂಧಿನಗರದ ಮಾರ್ಕೆಟ್​ನಲ್ಲಿ ಸಾಮಾಜಿಕ ಅಂತರ ಮರೆತು ವ್ಯಾಪಾರ ನಡೆಸುತ್ತಿರುವವರ ಚಿತ್ರೀಕರಣ ಮಾಡುತ್ತಿದ್ದ ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮಾಳಮಾರುತಿ ಸಿಪಿಐ ಸುನೀಲ ಪಾಟೀಲ್, ಪಿಎಸ್ಐ ಹೊನ್ನಪ್ಪ ತಳವಾರ ಆರೋಪಿಗಳನ್ನು ವಶಕ್ಕೆ ಪಡೆದರು. ಬಳಿಕ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳನ್ನು ಬಂದ್ ಮಾಡಿಸಿದರು.

ಇದನ್ನೂ ಓದಿ: ರಸ್ತೆಯಲ್ಲೇ ಯುವಕನ ಜೀವನ್ಮರಣದ ಹೋರಾಟ: ವಿಡಿಯೋ ಮಾಡುತ್ತಿದ್ದ ಜನ ನೆರವಿಗೆ ಧಾವಿಸಲಿಲ್ಲ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.