ETV Bharat / city

ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಸಿಲಿಂಡರ್ ಸ್ಫೋಟ: ಮೂವರಿಗೆ ಗಾಯ - ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಸಿಲಿಂಡರ್ ಸ್ಫೋಟ

ಬಿಮ್ಸ್​​​ ಆಸ್ಪತ್ರೆಯಲ್ಲಿ ಸಿಲಿಂಡರ್​​​​ ಸ್ಟೋಟಗೊಂಡು ವೈದ್ಯಕೀಯ ವಿದ್ಯಾರ್ಥಿ ಹಾಗೂ ಇಬ್ಬರು ಡಿ-ದರ್ಜೆ ನೌಕರರು ಗಾಯಗೊಂಡ ಘಟನೆ ಜರುಗಿದೆ.

cylinder-explosion-in-bims
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಸಿಲಿಂಡರ್ ಸ್ಫೋಟ
author img

By

Published : Jul 26, 2020, 5:35 PM IST

ಬೆಳಗಾವಿ: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿದ್ದು ವೈದ್ಯಕೀಯ ವಿದ್ಯಾರ್ಥಿ ಹಾಗೂ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.

ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಈ ಅವಘಡ ಸಂಭವಿಸಿದ್ದು, ಆಕ್ಸಿಜನ್ ಸಿಲಿಂಡರ್ ಬದಲಿಸುವ ವೇಳೆ ಸ್ಫೋಟವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ತಾಂತ್ರಿಕ ದೋಷವೇ ಆಕ್ಸಿಜನ್ ಸಿಲಿಂಡರ್ ಸ್ಫೋಟವಾಗಲು ಮುಖ್ಯ ಕಾರಣ ಎನ್ನಲಾಗುತ್ತಿದೆ. ಘಟನೆಯಲ್ಲಿ ಓರ್ವ ವೈದ್ಯಕೀಯ ವಿದ್ಯಾರ್ಥಿ ಹಾಗೂ ಇಬ್ಬರು ಡಿ-ದರ್ಜೆ ನೌಕರರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಬಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.