ETV Bharat / city

ವೀರಜ್ಯೋತಿಯನ್ನು ಅದ್ಧೂರಿಯಾಗಿ ಸ್ವಾಗತಿಸುವ ಮೂಲಕ ಕಿತ್ತೂರು ಉತ್ಸವಕ್ಕೆ ಚಾಲನೆ - ಕಿತ್ತೂರು ಉತ್ಸವಕ್ಕೆ ಚಾಲನೆ

ವೀರಜ್ಯೋತಿಯನ್ನು ಅದ್ಧೂರಿಯಾಗಿ ಸ್ವಾಗತಿಸುವ ಮೂಲಕ ಕಿತ್ತೂರು ಉತ್ಸವ-2020ಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ಶಾಸಕ ಮಹಾಂತೇಶ ದೊಡ್ಡಗೌಡರ ಚಾಲನೆ ನೀಡಿದರು.

DC MG Hiremath Drive to Kittur ustav 2020
ವೀರಜ್ಯೋತಿಯನ್ನು ಅದ್ಧೂರಿಯಾಗಿ ಸ್ವಾಗತಿಸುವ ಮೂಲಕ ಕಿತ್ತೂರು ಉತ್ಸವಕ್ಕೆ ಚಾಲನೆ
author img

By

Published : Oct 23, 2020, 3:23 PM IST

ಬೆಳಗಾವಿ: ವಿಜಯದ ದ್ಯೋತಕವಾಗಿರುವ ವೀರಜ್ಯೋತಿಯನ್ನು ಅದ್ಧೂರಿಯಾಗಿ ಸ್ವಾಗತಿಸುವ ಮೂಲಕ ಕಿತ್ತೂರು ಉತ್ಸವ-2020ಕ್ಕೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ಶಾಸಕ ಮಾಹಾಂತೇಶ ದೊಡ್ಡಗೌಡರ ಚಾಲನೆ ನೀಡಿದರು.

ವೀರಜ್ಯೋತಿಯನ್ನು ಅದ್ಧೂರಿಯಾಗಿ ಸ್ವಾಗತಿಸುವ ಮೂಲಕ ಕಿತ್ತೂರು ಉತ್ಸವಕ್ಕೆ ಚಾಲನೆ

ನಗರದ ಬೈಲಹೊಂಗಲ ಚೆನ್ನಮ್ಮ ಸಮಾಧಿ ಸ್ಥಳದಿಂದ ಆಗಮಿಸಿದ ವೀರಜ್ಯೋತಿಯನ್ನು ಚನ್ನಮ್ಮ ವೃತ್ತದಲ್ಲಿ ಬರಮಾಡಿಕೊಳ್ಳಲಾಯಿತು. ಈ ವೇಳೆ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಅವರು ಜ್ಯೋತಿ ಹೊತ್ತುಬಂದ ವಾಹನಕ್ಕೆ ಪೂಜೆ ಸಲ್ಲಿಸಿ ಜ್ಯೋತಿಯನ್ನು ಸ್ವಾಗತಿಸಿದರು. ಇದಾದ ಬಳಿಕ ಬೈಲೂರಿನ ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಹಾಗೂ ನಿಚ್ಚಣಿಕೆಯ ಶ್ರೀ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಠದ ಸ್ವಾಮೀಜಿ ಧ್ವಜಾರೋಹಣ ನೆರವೇರಿಸಿದರು.

ಚನ್ನಮ್ಮ ವೃತ್ತದಲ್ಲಿರುವ ಕಿತ್ತೂರು ಚನ್ನಮ್ಮ ಪುತ್ಥಳಿ, ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಮೂರ್ತಿ, ಅಮಟೂರ ಬಾಳಪ್ಪನವರ ಮೂರ್ತಿಗೆ ಸ್ವಾಮೀಜಿಗಳು, ಗಣ್ಯರು ಹಾಗೂ ಜನಪ್ರತಿನಿಧಿಗಳು ಮಾಲಾರ್ಪಣೆ ಮಾಡಿದರು. ಚನ್ನಮ್ಮ ವೃತ್ತದಿಂದ ಆರಂಭಗೊಂಡ ವೀರಜ್ಯೋತಿಯ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತ ನಿಚ್ಚಣಿಕಿ ಶ್ರೀ ಮಡಿವಾಳೇಶ್ವರ ಮಠದವರೆಗೆ ತೆರಳಿ ಸಂಪನ್ನವಾಯಿತು.

ಪ್ರತಿ ವರ್ಷ ಮೂರು‌ ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಕಿತ್ತೂರು ಉತ್ಸವ ಆಚರಿಸಲಾಗುತ್ತಿತ್ತು. ಕೋವಿಡ್-19 ಕಾರಣಕ್ಕೆ ಈ ಬಾರಿ ಕುಸ್ತಿಹಬ್ಬ, ಕ್ರೀಡಾ ಸ್ಪರ್ಧೆಗಳು, ವಿಚಾರ ಸಂಕಿರಣ ಹಾಗೂ ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.