ETV Bharat / city

ಕನ್ನಡ ವಿರೋಧಿ ಪಟ್ಟ ಕಟ್ಟಿಕೊಂಡ ಕಾಗವಾಡ ಶಾಸಕರನ್ನು ಸಮರ್ಥಿಸಿಕೊಂಡ ಡಿಸಿಎಂ ಸವದಿ - ಬೆಳಗಾವಿ ಸುದ್ದಿ

ಅಲ್ಲಿ ಬಂದಿದ್ದ ಮಹಾರಾಷ್ಟ್ರದ ಸಚಿವರು ಮತ್ತು ಶಾಸಕರಿಗೆ ಅರ್ಥವಾಗುವ ಭಾಷೆಯಲ್ಲಿ ಮಾತನಾಡಿದ್ದಾರೆ. ಈ ಭಾಗದ ಜನರಿಗೆ ಉದ್ಯೋಗ ಕೊಡಿ ಎಂದು ಮರಾಠಿಯಲ್ಲಿ ಹೇಳಿದ್ದಾರೆ. ಅದನ್ನು ಅಪಾರ್ಥ ಮಾಡಿಕೊಳ್ಳುವುದು ಬೇಡ..

ಕನ್ನಡ ವಿರೋಧಿ ಪಟ್ಟ ಕಟ್ಟಿಕೊಂಡ ಕಾಗವಾಡ ಶಾಸಕರನ್ನು ಸಮರ್ಥಿಸಿಕೊಂಡ ಡಿಸಿಎಂ ಸವದಿ
author img

By

Published : Aug 3, 2020, 9:54 PM IST

ಅಥಣಿ (ಬೆಳಗಾವಿ): ತಾಲೂಕಿನ ಬಳ್ಳಿಗೇರಿ ಗ್ರಾಮದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮರಾಠಿಯಲ್ಲಿ ಭಾಷಣ ಮಾಡಿ ಕನ್ನಡಿಗರ ಹಾಗೂ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲರನ್ನು ಡಿಸಿಎಂ ಲಕ್ಷ್ಮಣ ಸವದಿ ಸಮರ್ಥಿಸಿಕೊಂಡಿದ್ದಾರೆ.

ಕನ್ನಡ ವಿರೋಧಿ ಪಟ್ಟ ಕಟ್ಟಿಕೊಂಡ ಕಾಗವಾಡ ಶಾಸಕರನ್ನು ಸಮರ್ಥಿಸಿಕೊಂಡ ಡಿಸಿಎಂ ಸವದಿ

ಅಥಣಿ ಪಟ್ಟಣದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶ್ರೀಮಂತ ಪಾಟೀಲರು ಕನ್ನಡಿಗರು. ಅಥಣಿ ತಾಲೂಕಿನ ಸಿನಾಳ ಗ್ರಾಮದವರು. ಅವರು ಕನ್ನಡದಲ್ಲಿ ಬಹಳ ಸ್ಪಷ್ಟವಾಗಿ ಮಾತನಾಡುತ್ತಾರೆ. ಅವರು ಬಳ್ಳಿಗೇರಿ ಗ್ರಾಮದ ಸಕ್ಕರೆ ಕಾರ್ಖಾನೆ ನಿರ್ಮಾಣದ ಭೂಮಿ ಪೂಜೆಯಲ್ಲಿ ಭಾಷಣ ಮಾಡಿದ್ದರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅವರ ಭಾಷಣ ಉದ್ದೇಶಪೂರ್ವಕವಾಗಿಲ್ಲ.

ಅಲ್ಲಿ ಬಂದಿದ್ದ ಮಹಾರಾಷ್ಟ್ರದ ಸಚಿವರು ಮತ್ತು ಶಾಸಕರಿಗೆ ಅರ್ಥವಾಗುವ ಭಾಷೆಯಲ್ಲಿ ಮಾತನಾಡಿದ್ದಾರೆ. ಈ ಭಾಗದ ಜನರಿಗೆ ಉದ್ಯೋಗ ಕೊಡಿ ಎಂದು ಮರಾಠಿಯಲ್ಲಿ ಹೇಳಿದ್ದಾರೆ. ಅದನ್ನು ಅಪಾರ್ಥ ಮಾಡಿಕೊಳ್ಳುವುದು ಬೇಡ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.