ETV Bharat / city

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಯುವಕರ ಮೇಲೆ ಕಠಿಣ ಕ್ರಮ : ಡಿಸಿಪಿ ವಿಕ್ರಮ ಆಮಟೆ

ಪೊಲೀಸ್ ಸಿಬ್ಬಂದಿ ‌ಮೇಲೆ ಹಲ್ಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯಾರು ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು, ಆರೋಪಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಲಾಗುವುದು..

DCP Dr. Vikram Amate
ಡಿಸಿಪಿ ವಿಕ್ರಮ ಆಮಟೆ
author img

By

Published : Jun 15, 2021, 2:37 PM IST

ಬೆಳಗಾವಿ : ಸೋಮವಾರ ತಡರಾತ್ರಿ ಹರಟೆ ಹೊಡೆಯುತ್ತಾ ರಸ್ತೆಯ ಪಕ್ಕದಲ್ಲಿ ಕುಳಿತಿದ್ದ ಯುವಕರ ಗುಂಪೊಂದು ಪೊಲೀಸರ ಮೇಲೆ ಹಲ್ಲೆ ಮಾಡಿರುವ ಘಟನೆ ನಗರ ದರ್ಬಾರ್ ಗಲ್ಲಿಯಲ್ಲಿ ನಡೆದಿದೆ. ಸೋಮವಾರ ತಡರಾತ್ರಿ ನಗರದ ದರ್ಬಾರ್ ಗಲ್ಲಿಯಲ್ಲಿ ಮಾರ್ಕೆಟ್ ಠಾಣೆ ಪೊಲೀಸರು ಗಸ್ತು ತಿರುಗುತ್ತಿದ್ದರು.

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಕುರಿತು ಡಿಸಿಪಿ ಡಾ.ವಿಕ್ರಮ್​ ಆಮಟೆ ಪ್ರತಿಕ್ರಿಯೆ

ಈ ಸಂದರ್ಭದಲ್ಲಿ ರಸ್ತೆ ಪಕ್ಕದಲ್ಲಿ ಕುಳಿತಿದ್ದ ಯುವಕರ ಗುಂಪಿಗೆ ಮನೆಗೆ ತೆರಳುವಂತೆ ಕರ್ತವ್ಯದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ನಗರದ ದರ್ಬಾರ್ ಗಲ್ಲಿಯಲ್ಲಿ ಮಾರ್ಕೆಟ್ ಠಾಣೆ ಪೊಲೀಸರು ಗಸ್ತು ತಿರುಗುತ್ತಿದ್ದರು.

ಈ ಸಂದರ್ಭದಲ್ಲಿ ರಸ್ತೆ ಪಕ್ಕದಲ್ಲಿ ಕುಳಿತಿದ್ದ ಯುವಕರ ಗುಂಪಿಗೆ ಮನೆಗೆ ತೆರಳುವಂತೆ ಕರ್ತವ್ಯದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವಕರು, ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು ಪೇದೆಯೊಬ್ಬರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಪ್ರಕರಣದ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಪಿ ಡಾ.ವಿಕ್ರಮ್​ ಆಮಟೆ, ಪೊಲೀಸ್ ಸಿಬ್ಬಂದಿ ‌ಮೇಲೆ ಹಲ್ಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಕೃತ್ಯ ಎಸಗಿದವರು ಯಾರೆಂಬ ಮಾಹಿತಿ ಸಿಕ್ಕಿದ್ದು, ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಲಾಕ್‌ಡೌನ್ ಸಂದರ್ಭದಲ್ಲಿ ಸಾರ್ವಜನಿಕರು ತುಂಬಾ ಸಹಕಾರ ನೀಡಿದ್ದಾರೆ. ಆದರೆ, ಕೆಲ ಕಿಡಿಗೇಡಿಗಳು ಇಂತಹ ಕೃತ್ಯ ಎಸಗಿದ್ದಾರೆ. ಲಾಕ್‌ಡೌನ್ ಮಾಡಿರುವುದು ಕೋವಿಡ್ ಸೋಂಕು ತಡೆಗೆ ಎಂಬುವುದನ್ನು ಸಾರ್ವಜನಿಕರು ಅರಿಯಬೇಕು.

ಅದನ್ನು ಬಿಟ್ಟು ಗಲ್ಲಿಗಳಲ್ಲಿ ಗುಂಪು ಕಟ್ಟಿ ಕುಳಿತುಕೊಂಡು ನಿಯಮ ಉಲ್ಲಂಘಿಸುವವರ ವಿರುದ್ಧ‌ ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಪೊಲೀಸ್ ಗೌರವಗಳೊಂದಿಗೆ ಸಂಚಾರಿ ವಿಜಯ್ ಅಂತ್ಯಕ್ರಿಯೆ: ಸಿಎಂ ಬಿಎಸ್​ವೈ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.