ಬೆಳಗಾವಿ: ರಾಜ್ಯ ಸರ್ಕಾರದ ನಿರ್ದೇಶನದಂತೆ ಸಕಾಲ ಸಪ್ತಾಹ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಈವರೆಗೆ ನಾಲ್ಕು ಇಲಾಖೆಗಳು ಸೇರಿ 16,457 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕಾಲ ಸಪ್ತಾಹ ಯೊಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ವಿವಿಧ ಇಲಾಖೆಗಳಲ್ಲಿ ಬಹಳ ದಿನಗಳಿಂದ ಬಾಕಿ ಉಳಿಸಿಕೊಂಡಿಸಿರುವ ಪ್ರಕರಣಗಳನ್ನು ಶೀಘ್ರ ವಿಲೇ ಮಾಡುವ ಉದ್ದೇಶವಿದೆ. ಇದರ ಜೊತೆಗೆ ಸಾರ್ವಜನಿಕರಲ್ಲಿ ಸಕಾಲ ಯೋಜನೆಯ ಕುರಿತು ಅರಿವು ಮೂಡಿಸುವ ಕೆಲಸವೂ ನಡೆಯುತ್ತಿದೆ. ಮೊದಲನೇ ಹಂತದಲ್ಲಿ ಕಂದಾಯ, ನಗರಾಭಿವೃದ್ಧಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಸಾರಿಗೆ ಇಲಾಖೆಗಳಲ್ಲಿ ನ. 30ರಿಂದ ಡಿ.5ರವರೆಗೆ ಸಕಾಲ ಸಪ್ತಾಹವನ್ನು ಆಚರಿಸಲಾಗಿದೆ ಎಂದರು.
ಓದಿ: ಅಥಣಿ: ಹಣ ದ್ವಿಗುಣಗೊಳಿಸುವುದಾಗಿ ವಂಚಿಸಿದ್ದ ಆರೋಪಿ ಬಂಧನ
ವಿಲೇವಾರಿ ಮಾಡಲಾದ ಅರ್ಜಿಗಳ ಸಂಖ್ಯೆ:
- ಕಂದಾಯ ಇಲಾಖೆ - 2,975
- ನಗರಾಭಿವೃದ್ಧಿ ಇಲಾಖೆ -1,352
- ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ- 7,069
- ಸಾರಿಗೆ ಇಲಾಖೆ -5,061