ಚಿಕ್ಕೋಡಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಎಲ್ಲ ವಿಚಾರವನ್ನೂ ಬಿಚ್ಚಿಡುತ್ತಿದ್ದಾರೆ, ಅವರಿಗೆ ಒಳ್ಳೆಯದಾಗಲಿ ಎಂದರು.
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಲ್ಪಸ್ವಲ್ಪ ಉಸಿರಾಡುತ್ತಿದೆ ಎಂಬ ಬಿ.ಎಸ್.ಯಡಿಯೂರಪ್ಪ ಹೇಳಿಕೆ ಬಗ್ಗೆ ಮಾತನಾಡುತ್ತಾ, ನಮ್ಮ ಪಕ್ಷದ ವಿಚಾರ ಬಿಡಿ. ಯಡಿಯೂರಪ್ಪ ಅವರು ಯಾಕೆ ಕಣ್ಣೀರು ಹಾಕಿದರು?. ಅವರ ಮುಖ್ಯಮಂತ್ರಿಗಳ ಬಗ್ಗೆ ಮಂತ್ರಿಗಳು ಮಾತನಾಡುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಉತ್ತರ ತಿಳಿದಿದೆ ಎಂದರು.
ಪರಿಷತ್ ಚುನಾವಣೆಯಲ್ಲಿ ಎಲ್ಲಾ ವರ್ಗದವರಿಗೂ ನಾವು ಅವಕಾಶ ಮಾಡಿಕೊಟ್ಟಿದ್ದೇೆವೆ. ಅವರೇಕೆ ಹಿಂದುಳಿದ ವರ್ಗಗಳಿಗೆ ಅವಕಾಶ ಮಾಡಿಕೊಟ್ಟಿಲ್ಲ ಎಂದು ಪ್ರಶ್ನಿಸಿದ ಡಿಕೆಶಿ, ಬಿಜೆಪಿ ಮಂತ್ರಿಗಳನ್ನೇ ಕೇಳಿ. ಮುಂದಿನ ಸಲ ಕಾಂಗ್ರೆಸ್ ಸರ್ಕಾರ ಅಂತ ಅವರೇ ಹೇಳುತ್ತಿದ್ದಾರೆ. ನಾವು ಉಸಿರಾಡ್ತಿವೋ, ಸೋಲ್ತಿವೋ ಅದು ವಿಚಾರ ಅಲ್ಲ ಎಂದು ಹೇಳಿದರು.
ಇದನ್ನೂ ಓದಿ: ಡಿ.14ರ ನಂತರ ನನ್ನ-ಡಿಕೆಶಿ ಮಧ್ಯೆ ಬಹಿರಂಗ ವಾರ್ ಆಗಲಿ : ರಮೇಶ್ ಜಾರಕಿಹೊಳಿ