ಚಿಕ್ಕೋಡಿ (ಬೆಳಗಾವಿ): ಜಿಲ್ಲೆಯ ಗೋಕಾಕ್ ತಾಲೂಕಿನ ಪ್ರವಾಹಪೀಡಿತ ಪ್ರದೇಶಗಳಿಗೆ ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಲಿದ್ದಾರೆಂದು ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಚಿಕ್ಕೋಡಿ ಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೆಪಿಸಿಸಿ ಅಧ್ಯಕ್ಷರ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಪ್ರವಾಸ ನಿಗದಿ ಮಾಡಿದ್ದಾರೆ. ಸರ್ಕಾರಕ್ಕಿಂತ ವಿರೋಧ ಪಕ್ಷದ ಪಾತ್ರ ಹೆಚ್ಚಿನದ್ದು. ವಿರೋಧ ಪಕ್ಷದಲ್ಲಿದ್ದು, ಸರ್ಕಾರದ ತಪ್ಪುಗಳನ್ನು ಗಮನಕ್ಕೆ ತರುವ ಕೆಲಸ ನಾವು ಮಾಡತ್ತೇವೆ ಎಂದರು.
ಶಾಸಕ ಗಣೇಶ ಹುಕ್ಕೇರಿ ಕಾಂಗ್ರೆಸ್ ಸಭೆಯಲ್ಲಿ ಗೈರು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗಣೇಶ ಹುಕ್ಕೇರಿ ಕುಟುಂಬ ಕಳೆದ 30 ವರ್ಷಗಳಿಂದಲೂ ಪಕ್ಷದ ಸಭೆಯಿಂದ ದೂರವೇ ಇದೆ. ಹಾಗಾಗಿ ಈ ಕುರಿತು ಹೆಚ್ಚಿನ ಮಹತ್ವ ನೀಡುವ ಅವಶ್ಯಕತೆಯಿಲ್ಲ ಎಂದರು.
ಸರ್ಕಾರದ ಕೋವಿಡ್ ಟೆಸ್ಟ್ ಟಾರ್ಗೆಟ್ ನೀಡುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಈ ಕುರಿತು ಅಧಿಕಾರಿಗಳ ಜೊತೆಗೆ ಚರ್ಚೆ ಮಾಡುತ್ತೇನೆ. ಕೋವಿಡ್-19 ಕಿಟ್ ಖರೀದಿ ಹಾಗೂ ಆರ್ಟಿಒ ಚೆಕ್ ಪೋಸ್ಟ್ನಲ್ಲಿ ಭ್ರಷ್ಟಾಚಾರ ಕುರಿತು ಮಾಧ್ಯಮಗಳ ವರದಿ ಗಮನಿಸಿರುವೆ. ಹಾಗಾಗಿ ಮುಂಬರುವ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾಪಿಸುವೆ ಎಂದರು.