ಬೆಳಗಾವಿ: ಯಾವುದೇ ಕಾರಣಕ್ಕೂ ಮತಾಂತರ ನಿಷೇಧ ವಿಧೇಯಕಕ್ಕೆ ವಿರೋಧ ಮಾಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪ್ರತಿಪಕ್ಷಗಳ ನಾಯಕರಿಗೆ ಮನವಿ ಮಾಡಿದ್ದಾರೆ.
ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಹಲವು ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಯಲ್ಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ವಿಧೇಯಕ ಅಂಗೀಕಾರಕ್ಕೆ ಅವಕಾಶ ನೀಡಬೇಕು. ವಿಧೇಯಕಕ್ಕೆ ವಿರೋಧ ಮಾಡುವ ಕೆಲಸ ಆಗಬಾರದು ಎಂದರು.
ಸರ್ವಾನುನತದಿಂದ ವಿಧೇಯಕ ಅಂಗೀಕಾರ ಮಾಡಲು ಸಹಕಾರ ಕೊಡಬೇಕು. ರಾಜ್ಯದ ಜನರ ಹಿತದೃಷ್ಟಿಯಿಂದ ಈ ಕಾನೂನು ತರಲಾಗುತ್ತಿದೆ. ಭಾವನಾತ್ಮಕ ವಿಚಾರ ಇದರಲ್ಲಿ ಏನೂ ಇಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಇದು ಈಗಾಗಲೇ ಜಾರಿಯಲ್ಲಿದೆ ಎಂದು ಹೇಳಿದರು.
ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಧಿಕ್ಕರಿಸಲು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಗಂಭೀರ ಚರ್ಚೆ