ETV Bharat / city

ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ, ಕಬ್ಬಿನ ದರ ಪಾತಾಳಕ್ಕೆ: ಸರ್ಕಾರದ ವಿರುದ್ಧ ರೈತರು ಆಕ್ರೋಶ

ಸರ್ಕಾರ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ ಆಯುಕ್ತರು, ಸಚಿವರು ಸಕ್ಕರೆ ಕಾರ್ಖಾನೆಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಕಬ್ಬು ಬೆಳೆಗಾರರು ಆರೋಪಿಸಿದ್ದಾರೆ.

ಸರ್ಕಾರದ ವಿರುದ್ಧ ರೈತರು ಆಕ್ರೋಶ
ಸರ್ಕಾರದ ವಿರುದ್ಧ ರೈತರು ಆಕ್ರೋಶ
author img

By

Published : Oct 27, 2021, 9:46 AM IST

ಅಥಣಿ: ಅವೈಜ್ಞಾನಿಕವಾಗಿ ಕಬ್ಬಿನ ದರ ನಿಗದಿಮಾಡಲಾಗಿದೆ ಎಂದು ಅಥಣಿ ಕಬ್ಬು ಬೆಳೆಗಾರರು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ ಆಯುಕ್ತರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಥಣಿ ತಾಲೂಕಿನಲ್ಲಿ ರೈತರು ಹೆಚ್ಚಾಗಿ ಕಬ್ಬನ್ನು ಬೆಳೆಯುತ್ತಾರೆ. ಈ ಭಾಗದ ಕಬ್ಬು ಸರಾಸರಿ 11 ರಿಂದ 12.5 ರಷ್ಟು ಸಕ್ಕರೆ ಅಂಶವನ್ನು ಹೆಚ್ಚಾಗಿ ಹೊಂದಿದ್ದು, ಹಾಗಾಗಿ ಕಬ್ಬಿಗೆ ಸರಿ ಸುಮಾರು 4000 ರೂಪಾಯಿ ದರವನ್ನು ಸರ್ಕಾರ ಘೋಷಣೆ ಮಾಡಬೇಕಾಗಿತ್ತು. ಆದರೆ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ ಆಯುಕ್ತರು, ಸರ್ಕಾರ, ಸಚಿವರು ಸಕ್ಕರೆ ಕಾರ್ಖಾನೆ ಜೊತೆ ಹೊಂದಾಣಿಕೆ ಮಾಡಿಕೊಂಡು ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಕಬ್ಬು ಬೆಳೆಗಾರರು ಆರೋಪಿಸಿದ್ದಾರೆ.

ಸರ್ಕಾರದ ವಿರುದ್ಧ ರೈತರು ಆಕ್ರೋಶ

ಈ ವರ್ಷದ ಹಂಗಾಮಿಗೆ 12 ರಿಕವರಿ ಇರುವ ಒಂದು ಟನ್ ತೂಕದ ಕಬ್ಬಿಗೆ ಸರ್ಕಾರ 3,200 ರೂಪಾಯಿ ಘೋಷಣೆ ಮಾಡಿದೆ. ಆದರೆ ಕಾರ್ಖಾನೆಯವರು ಕಬ್ಬು ಬೆಳೆಗಾರರಿಗೆ 2,500/2,700 ರೂಪಾಯಿ ಮನಬಂದಂತೆ ದರವನ್ನು ನೀಡುತ್ತಿದ್ದಾರೆ. ಕಾರ್ಖಾನೆ ಆಡಳಿತ ಮಂಡಳಿ ಆಡಿದ್ದೇ ಆಟವಾಗಿದೆ. ಸರ್ಕಾರ ಸೂಕ್ತ ಬೆಲೆ ಘೋಷಿಸುವ ಮೂಲಕ ಈ ಭಾಗದ ಕಬ್ಬು ಬೆಳೆಗಾರರ ಹಿತಕಾಯಬೇಕಿದೆ ಎಂದು ರೈತರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳು ಅಧಿಕವಾಗಿರುವುದರಿಂದ ಈ ಭಾಗದ ರಸ್ತೆ ಅಭಿವೃದ್ಧಿ ಪಡಿಸುವಂತೆ ಸರ್ಕಾರಕ್ಕೆ ಪ್ರತಿ ವರ್ಷ ಒತ್ತಾಯಿಸಲಾಗುತ್ತದೆ. ಸಕ್ಕರೆ ಕಾರ್ಖಾನೆ ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿಗೆ ಪ್ರತಿ ವರ್ಷ ಸರ್ಕಾರ ಆಯವ್ಯಯ ಮಂಡನೆ ಮಾಡುತ್ತದೆ. ನೂರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ರೂ ಕೂಡ ಇದುವರೆಗೆ ಅಥಣಿ ಭಾಗದಲ್ಲಿ ಹಾಗೂ ಕಬ್ಬು ಪೂರೈಕೆ ಮಾಡುವ ಹಳ್ಳಿಗಳು ಕಾರ್ಖಾನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಅಭಿವೃದ್ಧಿ ಕಂಡಿಲ್ಲ. ಅಧಿಕಾರಿಗಳು ಆ ಹಣವನ್ನು ಎಲ್ಲಿ ಖರ್ಚು ಮಾಡುತ್ತಿದ್ದಾರೆ ಎಂದು ರೈತರು ಪ್ರಶ್ನಿಸಿದರು.

ತೂಕದಲ್ಲಿ ಮೋಸ:

ಜಿಲ್ಲೆಯಲ್ಲಿ ಖಾಸಗಿ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಹಲವಾರು ಸಕ್ಕರೆ ಕಾರ್ಖಾನೆಗಳು ಪ್ರತಿ ಹಂಗಾಮಿನಲ್ಲಿ ಲಕ್ಷಾಂತರ ಟನ್ ಕಬ್ಬನ್ನು ಅರೆಯುತ್ತಾರೆ. ರೈತರು ಕಾರ್ಖಾನೆಗೆ ಕಬ್ಬು ತಂದಾಗ ತೂಕದಲ್ಲಿ ವ್ಯತ್ಯಾಸ ಕಂಡುಬಂದಿದೆ. ದರದಲ್ಲಿ ಹಾಗೂ ತೂಕದಲ್ಲಿ ರೈತರಿಗೆ ಕೆಲವು ಕಾರ್ಖಾನೆಗಳು ಮೋಸ ಮಾಡುತ್ತಿದ್ದಾರೆ. ಇಂತವರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅನೇಕ ಸಕ್ಕರೆ ಕಾರ್ಖಾನೆಗಳು ರಾಜಕಾರಣಿಗಳ ಮಾಲೀಕತ್ವದಲ್ಲಿವೆ:

ಬೆಳಗಾವಿ ಜಿಲ್ಲೆಯಲ್ಲಿರುವ ಕಾರ್ಖಾನೆಗಳು ಎಲ್ಲವೂ ರಾಜಕಾರಣಿಗಳ ಒಡೆತನದಲ್ಲಿವೆ. ಹಾಗಾಗಿ ಅವರಿಗೆ ಹೇಳೋರೋ, ಕೇಳೋರು ಯಾರೂ ಇಲ್ಲದಂತಾಗಿದೆ. ಹಲವಾರು ಸಕ್ಕರೆ ಕಾರ್ಖಾನೆಗಳು ರೈತರ ಕಬ್ಬು ಪೂರೈಕೆ ಮಾಡಿದ ಕೋಟ್ಯಂತರ ರೂಪಾಯಿ ಹಣವನ್ನು ಇದುವರೆಗೂ ಸಂದಾಯ ಮಾಡಿಲ್ಲ. ಸುಪ್ರೀಂಕೋರ್ಟ್ ಹದಿನಾಲ್ಕು ದಿನದಲ್ಲಿ ರೈತರ ಕಬ್ಬಿನ ಹಣವನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ. ಆದರೆ ರಾಜಕಾರಣಿಗಳ ಕಾರ್ಖಾನೆಗಳು ಇರುವುದರಿಂದ ಅಧಿಕಾರಿಗಳು ಜಾಣಕುರುಡರಂತೆ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸುಪ್ರೀಂಕೋರ್ಟ್ ಕಬ್ಬು ಬೆಳೆಗಾರರ ಹಿತ ಕಾಪಾಡಬೇಕು:

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಮೇಲೆ ನಂಬಿಕೆ ಇಲ್ಲದಂತಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಾಗಿ ಕಬ್ಬು ಬೆಳೆಗಾರರು ಇರುವುದರಿಂದ ಸುಪ್ರೀಂಕೋರ್ಟ್ ನ್ಯಾಯಾಧೀಶರು ವಿಶೇಷ ತಂಡ ರಚಿಸಿ, ತೂಕದಲ್ಲಿ ಹಾಗೂ ದರದಲ್ಲಿ ಅನ್ಯಾಯವಾಗದಂತೆ ಬೆಳೆಗಾರರಿಗೆ ನ್ಯಾಯ ಒದಗಿಸಿಕೊಡಬೇಕೆಂದು ನ್ಯಾಯಾಧೀಶರಿಗೆ ಕಬ್ಬು ಬೆಳೆಗಾರರು ಮನವಿ ಮಾಡಿಕೊಂಡರು.

ಮಹಾರಾಷ್ಟ್ರದಲ್ಲಿ ಕಬ್ಬಿಗೆ ಉತ್ತಮ ದರ:

ಮಹಾರಾಷ್ಟ್ರದಲ್ಲಿ ಪ್ರತಿ ಒಂದು ಟನ್ ಕಬ್ಬಿಗೆ 3,200/3,400 ರೂಪಾಯಿ ದರ ನಿಗದಿ ಪಡಿಸಿಲಾಗಿದೆ. ನಮ್ಮ ರಾಜ್ಯದ ಕಾರ್ಖಾನೆಗಳು 2,500/2700 ರೂಪಾಯಿ ರೈತರಿಗೆ ನೀಡುತ್ತಿವೆ. ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದಲ್ಲಿ ಪ್ರತಿ ಒಂದು ಟನ್ ಕಬ್ಬಿಗೆ 500 ರೂಪಾಯಿ ವ್ಯತ್ಯಾಸ ಕಂಡುಬರುತ್ತಿದೆ. ಯಾಕೆ ರಾಜ್ಯ ಸರ್ಕಾರ ಈ ಭಾಗದ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ರೈತರು ಸರ್ಕಾರದ ವಿರುದ್ಧ ಹರಿಹಾಯ್ದರು.

ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ, ಕಬ್ಬಿನ ದರ ಪಾತಾಳಕ್ಕೆ:

ದಿನನಿತ್ಯ ಬಳಕೆಯ ವಸ್ತುಗಳ ದರ ಹೆಚ್ಚಳದಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಒಂದು ಚೀಲ ರಸ ಗೊಬ್ಬರದ ಬೆಲೆ 1,500 ರೂಪಾಯಿ ಆಗಿದೆ. ಆದರೆ ಕಬ್ಬಿನ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಇದರಿಂದಾಗಿ ರೈತರಿಗೆ ಸರ್ಕಾರಗಳು ಮೊಸ ಮಾಡುತ್ತಿವೆ. ತಕ್ಷಣ ಸರ್ಕಾರ ಪ್ರತಿ ಒಂದು ಟನ್ ಕಬ್ಬಿಗೆ ಕನಿಷ್ಠ 4000 ರೂಪಾಯಿ ಘೋಷಣೆ ಮಾಡಲಿ ಎಂದು ರೈತ ಮುಖಂಡರು ಒತ್ತಾಯಿಸಿದರು.

ಬೊಮ್ಮಾಯಿ ಸಿಎಂ ಆದ್ರೂ ನಮ್ಮ ಕನಸು ಮರೀಚಿಕೆ:

ಹಲವಾರು ವರ್ಷಗಳಿಂದ ಉತ್ತರ ಕರ್ನಾಟಕ ಭಾಗದವರು ಸಿಎಂ ಆಗಬೇಕು, ಆಗ ಮಾತ್ರ ಕಬ್ಬು ಬೆಳೆಗಾರರ ಸಮಸ್ಯೆಗಳು ಬಗೆಹರಿಯುತ್ತವೆ ಎಂಬುದು ರೈತರ ಮಹದಾಸೆಯಾಗಿತ್ತು. ಆದರೆ ನಮ್ಮೂರಿನವರಾದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾರೆ. ಅವರಿಗೆ ಕಬ್ಬು ಬೆಳೆಗಾರರ ಸಮಸ್ಯೆ ಏನೆಂಬುದು ಸಂಪೂರ್ಣವಾಗಿ ಮಾಹಿತಿ ಇದೆ. ಆದರೂ ಮುಖ್ಯಮಂತ್ರಿ ಈ ವಿಷಯದಲ್ಲಿ ಮೌನವಾಗಿರುವುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ಕಬ್ಬು ಬೆಳೆಗಾರರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.