ETV Bharat / city

ಬೆಳಗಾವಿ: ಅಸಭ್ಯವಾಗಿ ವರ್ತಿಸುತ್ತಿದ್ದ ಉಪನ್ಯಾಸಕನಿಗೆ ಚಪ್ಪಲಿಯಿಂದ ಥಳಿಸಿದ ಮಹಿಳಾ ಸಿಬ್ಬಂದಿ - beaten female staff of a lecturer in Belgavi

ಮದ್ಯ ಸೇವಿಸಿ ಕಾಲೇಜಿನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಉಪನ್ಯಾಸಕನಿಗೆ ಸ್ಟಾಫ್​ ರೂಮ್​ನಲ್ಲೇ ಉಪನ್ಯಾಸಕಿಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

beaten-female
ಮಹಿಳಾ ಸಿಬ್ಬಂದಿ
author img

By

Published : Apr 16, 2022, 9:25 AM IST

Updated : Apr 16, 2022, 2:22 PM IST

ಬೆಳಗಾವಿ: ಅಸಭ್ಯ ‌ವರ್ತನೆ ತೋರುತ್ತಿದ್ದ ಉಪನ್ಯಾಸಕನಿಗೆ ಕಾಲೇಜಿನ ಸ್ಟಾಫ್ ರೂಮ್‌ನಲ್ಲೇ ಉಪನ್ಯಾಸಕಿಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದೆ. ಕಾಲಿನಿಂದ ಒದ್ದು ಚಪ್ಪಲಿ ಹಾಗೂ ಕೋಲಿನಿಂದ ಧರ್ಮದೇಟು ನೀಡಲಾಗಿದೆ. ಎರಡು ದಿನಗಳ ಹಿಂದೆ ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ಈ ಘಟನೆ‌ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಸಭ್ಯವಾಗಿ ವರ್ತಿಸುತ್ತಿದ್ದ ಉಪನ್ಯಾಸಕನಿಗೆ ಚಪ್ಪಲಿಯಿಂದ ಥಳಿಸಿದ ಮಹಿಳಾ ಸಿಬ್ಬಂದಿ

ಅತಿಥಿ ಉಪನ್ಯಾಸಕಿಯರು ಉಪನ್ಯಾಸಕನನ್ನು ಹಿಗ್ಗಾಮುಗ್ಗಾ ಥಳಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂಗ್ಲಿಷ್ ವಿಭಾಗದ ಉಪನ್ಯಾಸಕ ಅಮಿತ್ ಬಸವಮೂರ್ತಿ ಅಸಭ್ಯವಾಗಿ ವರ್ತಿಸಿ ಧರ್ಮದೇಟು ತಿಂದವರು. ಉಪನ್ಯಾಸಕ ಅಮಿತ್ ನಿತ್ಯ ಮದ್ಯ ಸೇವಿಸಿ ಕಾಲೇಜಿಗೆ ಆಗಮಿಸುತ್ತಿರುವುದಲ್ಲದೆ, ಸಹ ಉಪನ್ಯಾಸಕಿಯರ ಜೊತೆ ಅಸಭ್ಯವಾಗಿ ವರ್ತನೆ ತೋರುತ್ತಿದ್ದರು ಎನ್ನಲಾಗ್ತಿದೆ.

ಅಲ್ಲದೇ ಅವಾಚ್ಯ ಶಬ್ದಗಳಿಂದ ಉಪನ್ಯಾಸಕಿಯರನ್ನು ನಿಂದಿಸುತ್ತಿದ್ದ. ಮಹಿಳಾ ಸಿಬ್ಬಂದಿ ಇರುವ ವಿಶ್ರಾಂತಿ ಕೊಠಡಿಗೆ ತೆರಳಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ. ಹಲವು ಸಲ ಮಹಿಳಾ ಸಿಬ್ಬಂದಿ ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಉಪನ್ಯಾಸಕಿಯರೇ ಹಿಡಿದು ಥಳಿಸಿದ್ದಾರೆ. ಅಲ್ಲದೇ, ಉಪನ್ಯಾಸಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳಾ‌ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಓದಿ: ವೇಶ್ಯಾವಾಟಿಕೆ: ಗ್ರಾಹಕನ ವಿರುದ್ಧ ಕ್ರಮ ಜರುಗಿಸಲಾಗದು ಎಂದ ಹೈಕೋರ್ಟ್

Last Updated : Apr 16, 2022, 2:22 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.