ETV Bharat / city

BREAKING NEWS ಬೆಳಗಾವಿ: ಮಳೆಗೆ ಮನೆ ಕುಸಿದು ಒಂದೇ ಕುಟುಂಬದ 7 ಜನರ ದುರ್ಮರಣ - belagavi news

ಮಳೆಯಿಂದ ಮನೆ ಕುಸಿದು ಬಿದ್ದಿರುವ ಪರಿಣಾಮ ಒಂದೇ ಕುಟುಂಬದ 7 ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮನೆ ಕುಸಿದು ಐವರು ದುರ್ಮರಣ
ಮನೆ ಕುಸಿದು ಐವರು ದುರ್ಮರಣ
author img

By

Published : Oct 6, 2021, 9:01 PM IST

Updated : Oct 6, 2021, 10:20 PM IST

ಬೆಳಗಾವಿ: ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಇದರಿಂದ ಅನೇಕರು ತೊಂದರೆಗೊಳಗಾಗಿದ್ದಾರೆ. ಇದರ ಬೆನ್ನಲ್ಲೇ ಭಾರಿ ಮಳೆಗೆ ಮನೆ ಕುಸಿದು‌ ಒಂದೇ ಕುಟುಂಬದ ಏಳು ಮಂದಿ ದುರ್ಮರಣ ಹೊಂದಿರುವ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದಿದೆ.

ಇಂದು ಸಂಜೆ ಸುರಿದ ಮಳೆಗೆ ಮನೆ ಕುಸಿದಿದೆ. ಮನೆಯಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ಅವಶೇಷಗಳಡಿ ಸಿಲುಕಿದ್ದ ಮೂವರನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮನೆ ಕುಸಿದಿದ್ದರಿಂದ ಐವರು ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತರಲ್ಲಿ ಮೂವರು ಮಕ್ಕಳು ಸೇರಿದ್ದಾರೆ. ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ದೌಡಾಯಿಸಿದ್ದಾರೆ.

ಮಳೆಗೆ ಮನೆ ಕುಸಿದು ಒಂದೇ ಕುಟುಂಬದ 7 ಜನರ ದುರ್ಮರಣ

ಮೃತರನ್ನ ಗಂಗವ್ವ ಖನಗಾವಿ(50), ಸತ್ಯವಾ ಖನಗಾವಿ(45), ಪೂಜಾ(8), ಸವಿತಾ(28), ಕೇಶವ್​​(8), ಲಕ್ಷ್ಮೀ(15) ಹಾಗೂ ಅರ್ಜುನ್​ ಎಂದು ಗುರುತಿಸಲಾಗಿದೆ. ಮಳೆ ವೇಳೆ ಎಲ್ಲರೂ ಮನೆಯಲ್ಲಿದ್ದರು. ಈ ವೇಳೆ ಮನೆ ಕುಸಿದಿರುವ ಪರಿಣಾಮ ಎಲ್ಲರೂ ದುರ್ಮರಣಕ್ಕೀಡಾಗಿದ್ದಾರೆ.

ಗೋಡೆ ಕುಸಿದು ಸಾವನ್ನಪ್ಪಿದ ಕುಟುಂಬಸ್ಥರು

ಬಡಾಲ ಅಂಕಲಗಿ ಗ್ರಾಮದಲ್ಲಿ ವಾಸವಾಗಿದ್ದ ಕುಟುಂಬವೊಂದು ಮನೆಯ ಛಾವಣಿ ಬಿಚ್ಚಿ ಹೊಸ ಛಾವಣಿ ಹಾಕುವ ಸಿದ್ಧತೆ ನಡೆಸಿತ್ತು. ಹೀಗಾಗಿ ಪಕ್ಕದಲ್ಲಿಯೇ ತಗಡಿನ ಶೆಡ್ ಹಾಕಿ ವಾಸಮಾಡಿತ್ತು. ಆದರೆ, ಭಾರಿ ಮಳೆ ಬೀಳುತ್ತಿದ್ದ ಕಾರಣ ಎಲ್ಲರೂ ಅಲ್ಲೇ ನಿಂತುಕೊಂಡಿದ್ದಾರೆ. ಈ ವೇಳೆ ಮನೆಯ ಗೋಡೆ ದಿಢೀರ್​ ಕುಸಿದು ಅವರ ಮೇಲೆ ಬಿದ್ದಿದ್ದು, ಪರಿಣಾಮ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.

ಶಾಸಕಿ ಹೆಬ್ಬಾಳ್ಕರ್ ಸ್ಥಳಕ್ಕೆ ದೌಡು

ಮಳೆಗೆ ಮನೆ ಕುಸಿದು ಏಳು ಜನರು ದುರ್ಮರಣದಿಂದ ಕರಾಳ ಘಟನೆಗೆ ಸಾಕ್ಷಿಯಾದ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ.

ಸಂಬಂಧಿಕರಿಗೆ ಸಾಂತ್ವಾನ ಹೇಳಿದ ಹೆಬ್ಬಾಳ್ಕರ್ ಶವ ಹೊರತೆಗೆಯುವ ಕಾರ್ಯಾಚರಣೆಗೆ ಸಿದ್ಧತೆ ಮಾಡುತ್ತಿದ್ದಾರೆ. ಸ್ಥಳೀಯ ‌ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದಾರೆ. ಸ್ಥಳದಲ್ಲೇ ಠಿಕಾಣಿ ಹೂಡಿರುವ ಹೆಬ್ಬಾಳ್ಕರ್ ಕಾರ್ಯಾಚರಣೆಗೆ ಕೈ ಜೋಡಿಸಿದ್ದಾರೆ

Last Updated : Oct 6, 2021, 10:20 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.