ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬರಬೇಕು ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅಭಿಪ್ರಾಯಪಟ್ಟಿದ್ದಾರೆ.
ಬೆಳಗಾವಿ ಸುವರ್ಣಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾರು ನೋವು, ಕಷ್ಟ ಅನುಭವಿಸಿದ್ದಾರೋ ಅವರಿಗೆ ಮಾತ್ರ ಗೊತ್ತು. ಅದರ ನೋವನ್ನ ನಾನು ಹತ್ತಿರದಿಂದ ಬಲ್ಲವನು. ಬಹಳಷ್ಟು ನಮ್ಮವರಿಗೆ ತೊಂದರೆಯಾಗಿದೆ. ಹಾಗಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುವುದಾಗಿ ಹೇಳಿದ್ರು.
ರಾಜ್ಯ ಸರ್ಕಾರ ಇದೇ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಗೆ ತರಲು ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಸಂಪುಟದ ಬಹುತೇಕ ಸದಸ್ಯರು ಕಾಯ್ದೆ ಜಾರಿಗೆ ಒಲವು ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳ ವಿರೋಧದ ನಡುವೆಯೂ ಚಳಿಗಾಲದ ಅಧಿವೇಶನದಲ್ಲಿ ಕಾಯ್ದೆ ಜಾರಿಗೆ ಬರುವುದು ಬಹುತೇಕ ಖಚಿತವಾಗಿದೆ.