ಅಥಣಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರ್ಎಸ್ಎಸ್ ಮುಖಂಡ ಅರವಿಂದ್ ದೇಶಪಾಂಡೆ ಅವರನ್ನು ಭೇಟಿ ಮಾಡಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆಂದು ತಿಳಿದು ಬಂದಿದೆ.
ಆರ್ಎಸ್ಎಸ್ ಹಿರಿಯ ಮುಖಂಡ ಅರವಿಂದ್ ದೇಶಪಾಂಡೆ ಅವರ ನಿವಾಸದಲ್ಲಿ ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾಗಿ ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಅರವಿಂದ್ ದೇಶಪಾಂಡೆ ಹಾಗೂ ರಮೇಶ್ ಜಾರಕಿಹೊಳಿ ಅವರು ಗುಪ್ತವಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ನಾನು ಸಿಎಂ ಬೊಮ್ಮಾಯಿ ಕ್ಲೋಸ್ ಫ್ರೆಂಡ್: ಶಾಸಕ ರಾಮದಾಸ್
ಜಾರಕಿಹೊಳಿ ಅವರ ಕುಟುಂಬಕ್ಕೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಆರ್ಎಸ್ಎಸ್ ಮುಖಂಡರ ಭೇಟಿ ಮಾಡಿ ಸದ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಗುಪ್ತ ಚರ್ಚೆ ನಂತರ ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.