ಬೆಳಗಾವಿ : ಜಿಲ್ಲೆಯಲ್ಲಿ ಜನಪ್ರತಿನಿಧಿಗಳು ಕೊರೊನಾ ರೂಲ್ಸ್ ಬ್ರೇಕ್ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಅವರ ಮಕ್ಕಳ ಸರದಿ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಪುತ್ರ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ ಆರೋಪ ಕೇಳಿ ಬಂದಿದೆ.
ಗೋಕಾಕ್ ಕ್ಷೇತ್ರದಲ್ಲಿ ಮಾಜಿ ಸಚಿವರ ಅನುಪಸ್ಥಿತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಅಮರನಾಥ ಜಾರಕಿಹೊಳಿ ಚಾಲನೆ ನೀಡಿದರು. ಈ ವೇಳೆ ನೂರಾರು ಜನರು ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಭಾಗವಹಿಸಿದ್ದರು.
ಕೊರೊನಾ ಉಲ್ಬಣವಾಗುತ್ತಿರುವ ಕಾರಣ ಜಿಲ್ಲೆಯಲ್ಲಿ ಕಠಿಣ ನಿರ್ಬಂಧಗಳನ್ನು ಹೇರಿದ್ದರ ಮಧ್ಯೆಯೂ ಜನಪ್ರತಿನಿಧಿಗಳು ಮತ್ತು ಅವರ ಮಕ್ಕಳು ರೂಲ್ಸ್ ಬ್ರೇಕ್ ಮಾಡುವ ಘಟನೆಗಳು ನಿಲ್ಲುತ್ತಿಲ್ಲ.
ಇದನ್ನೂ ಓದಿ: ವಾರಾಂತ್ಯ, ನೈಟ್ ಕರ್ಫ್ಯೂ.. ಸರ್ಕಾರದ ನಿರ್ಧಾರಕ್ಕೆ ಸ್ವಪಪಕ್ಷಿಯರು ಸೇರಿ ಕೈ, ಜೆಡಿಎಸ್ ನಾಯಕರ ಆಕ್ಷೇಪ