ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಸಾವನ್ನಪ್ಪಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳ ಶವಗಳ ಅಂತ್ಯಕ್ರಿಯೆಯನ್ನು ಮಹಾನಗರ ಪಾಲಿಕೆ ಸದಸ್ಯರು ಹಾಗೂ ಸಮಾಜ ಸೇವಕ ವಿಜಯ್ ಮೋರೆ ನೆರವೇರಿಸಿದ್ದಾರೆ.
ಮೃತರಲ್ಲಿ ಓರ್ವ ಕಲಬುರಗಿ ನಿವಾಸಿ. ಈತ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿ ಹಲವು ವರ್ಷಗಳಿಂದ ಹೊಟೇಲ್ನಲ್ಲಿ ಕೆಲಸ ಮಾಡುತ್ತಿದ್ದು, ಇದ್ದಕ್ಕಿದ್ದಂತೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಇನ್ನೋರ್ವ ಭಿಕ್ಷುಕನಾಗಿದ್ದು, ಈತ ಅನಾರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದ. ಈ ಇಬ್ಬರ ಪಾರ್ಥಿವ ಶರೀರವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿತ್ತು.
ಈ ಎರಡೂ ಶವಗಳಿಗೆ ಯಾರೂ ವಾರಸುದಾರರು ಇರದ ಕಾರಣ ಪಾಲಿಕೆ ವತಿಯಿಂದ ಸದಾಶಿವ ನಗರದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.