ETV Bharat / city

ಪ್ರತಿಭಟನೆ ನಡುವೆಯೇ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಅಂತ್ಯಕ್ರಿಯೆ - Suicide case of contractor santhosh

ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್​ ಪಾಟೀಲ್ ಅವರ ಅಂತ್ಯಕ್ರಿಯೆ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದಲ್ಲಿ ಇಂದು ನಡೆಯಿತು. ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ‌.

funeral-of-contractor-santosh
ಪ್ರತಿಭಟನೆ ನಡುವೆಯೇ ಗುತ್ತಿಗೆದಾರ ಸಂತೋಷ ಪಾಟೀಲ್​ ಅಂತ್ಯಕ್ರಿಯೆ
author img

By

Published : Apr 14, 2022, 9:48 AM IST

Updated : Apr 14, 2022, 1:45 PM IST

ಬೆಳಗಾವಿ: ಡೆತ್​ನೋಟ್​ ಬರೆದಿಟ್ಟು ಉಡುಪಿಯ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಅವರ ಅಂತ್ಯಕ್ರಿಯೆ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದಲ್ಲಿ ಇಂದು ನಡೆಯಿತು. ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ‌. ಸಂತೋಷ್ ಪಾಟೀಲ್​ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಪ್ರತಿಭಟನೆ ನಡುವೆಯೇ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಅಂತ್ಯಕ್ರಿಯೆ

ಇಂದು ಗ್ರಾಮದಲ್ಲಿ ಮೂರು ಮದುವೆ ಇದ್ದ ಕಾರಣ ಬೇಗ ಅಂತ್ಯಕ್ರಿಯೆ ಮುಗಿಸುವಂತೆ ಗ್ರಾಮಸ್ಥರು ಕೋರಿದ್ದರು. ಜೊತೆಗೆ ಮೃತ ಸಂತೋಷ್ ಸಂಬಂಧಿಕರು ಮೃತದೇಹದ ಮುಂದೆ ಪ್ರತಿಭಟನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ನ್ಯಾಯಕ್ಕಾಗಿ ಹೋರಾಟ ಮಾಡೋಣ. ಬಾಕಿ ಬಿಲ್ ಮಂಜೂರಾತಿ ಹಾಗೂ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸೋಣ ಎಂದು ಪ್ರತಿಭಟನಾಕರರಿಗೆ ಹೇಳಿದ್ದಾರೆ. ಬಳಿಕ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಜಮೀನಿಗೆ ತಂದು, ಲಿಂಗಾಯತ ವಿಧಿವಿಧಾನಗಳಂತೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಶವದ ಮುಂದೆ ಕಾಂಗ್ರೆಸ್ ಧರಣಿ: ವಿಧಿವಿಧಾನಗಳು ಮುಗಿಯುತ್ತಿದ್ದಂತೆ ಅಂತ್ಯಸಂಸ್ಕಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಆಪ್ತ ಅಡಿವೇಶ ಇಟಗಿ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿದ್ದು, ಪರಿಹಾರ ಘೋಷಣೆ ಮಾಡಬೇಕು ಹಾಗೂ ಬಾಕಿ ಬಿಲ್ ಮಂಜೂರಾತಿ ಮಾಡಿಸಬೇಕು ಎಂದು ಇದೇ ವೇಳೆ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲೇ ಇರುವ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಇಲ್ಲವೇ ಬಿಜೆಪಿ ಮುಖಂಡರು ಸ್ಥಳಕ್ಕೆ ಬರಬೇಕು ಎಂದು ಶಾಸಕಿ ಹೆಬ್ಬಾಳ್ಕರ್ ಪಟ್ಟು ಹಿಡಿದಿದ್ದರು. ಗ್ರಾಮಸ್ಥರು ಇವರ ಪ್ರತಿಭಟನೆಗೆ ವಿರೋಧಿಸಿದ್ದು, ನ್ಯಾಯಕ್ಕಾಗಿ ಹೋರಾಡೋಣ, ಈಗ ಅಂತ್ಯಕ್ರಿಯೆ ನೆರವೇರಿಸೋಣ ಎಂದರು. ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಓದಿ : ಹುಟ್ಟೂರಿಗೆ ಗುತ್ತಿಗೆದಾರ ಸಂತೋಷ್​ ಮೃತದೇಹ.. ಆರೋಪಿಗಳ ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸದಿರಲು ಕುಟುಂಬಸ್ಥರ ಪಟ್ಟು

Last Updated : Apr 14, 2022, 1:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.