ETV Bharat / city

ಆದ್ಯತೆ ಮೇರೆಗೆ ಎರಡನೇ ಡೋಸ್ ಲಸಿಕೆ ನೀಡಿ ; ಡಿಸಿಎಂ ಕಾರಜೋಳ ಸೂಚನೆ - ಡಿಸಿಎಂ ಕಾರಜೋಳ ಸಭೆ

ಮನೆಯಲ್ಲಿಯೇ ಇರುವ ಲಕ್ಷಣರಹಿತ ಸೋಂಕಿತರಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಉಚಿತವಾಗಿ ‌ಔಷಧ ಕಿಟ್ ನೀಡಬೇಕು. ಆರೋಗ್ಯ ಇಲಾಖೆಯ ತಂಡಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪ್ರತಿದಿನ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಳ್ಳಬೇಕು..

ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
author img

By

Published : May 12, 2021, 5:54 PM IST

ಬೆಳಗಾವಿ : ಜಿಲ್ಲೆಗೆ ಅಗತ್ಯವಿರುವ ಕೋವಿಡ್ ಲಸಿಕೆ ಪೂರೈಕೆಯಾದ ತಕ್ಷಣವೇ ಈಗಾಗಲೇ ಮೊದಲ ಡೋಸ್ ಪಡೆದುಕೊಂಡವರಿಗೆ ಆದ್ಯತೆ ಮೇರೆಗೆ ಎರಡನೇ ಡೋಸ್ ನೀಡಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮ ಕಿತ್ತೂರಿನ ಕೋಟೆ ಆವರಣದಲ್ಲಿ ಬುಧವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೊದಲ ಡೋಸ್ ಲಸಿಕೆ ಪಡೆದುಕೊಂಡಿರುವವರು ಲಸಿಕೆಯ ನಿರೀಕ್ಷೆಯಲ್ಲಿದ್ದಾರೆ.

ಆದ್ದರಿಂದ ಲಸಿಕೆ ಸರಬರಾಜು ಆದ ಕೂಡಲೇ ಅವರಿಗೆ ಲಸಿಕೆ ನೀಡಬೇಕು. ಕೋವಿಡ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಪ್ರತಿ ತಾಲೂಕಿನಲ್ಲಿ ಮಾದರಿ ತಪಾಸಣಾ ಪ್ರಮಾಣ ಹೆಚ್ಚಿಸುವ ಮೂಲಕ ಸೋಂಕಿತರನ್ನು ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ಅಥವಾ ಹೋಮ್ ಐಸೋಲೇಷನ್‌ಗೆ ಕ್ರಮಕೈಗೊಳ್ಳಬೇಕು ಎಂದರು.

ಸೋಂಕಿತರ ಆರೋಗ್ಯದ ಮೇಲೆ ನಿಗಾ‌ ಇರಲಿ : ಲಕ್ಷಣರಹಿತ ಸೋಂಕಿತರನ್ನು ತಾಲೂಕುಗಳಲ್ಲಿರುವ ಕೋವಿಡ್ ಕೇರ್ ಕೇಂದ್ರ ಹಾಗೂ ಹೋಮ್ ಐಸೋಲೇಷನ್‌ನಲ್ಲಿ ಇರಿಸಲಾಗುತ್ತಿದೆ.

ಈ ರೀತಿಯ ಐಸೋಲೇಷನ್‌ನಲ್ಲಿ ಇರುವಂತಹ‌ ಸೋಂಕಿತರ ಆರೋಗ್ಯದ ಮೇಲೆ ಪ್ರತಿದಿನ ನಿಗಾವಹಿಸಬೇಕು ಎಂದು‌ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ಗೋವಿಂದ ಕಾರಜೋಳ ನಿರ್ದೇಶನ ನೀಡಿದರು.

ಮನೆಯಲ್ಲಿಯೇ ಇರುವ ಲಕ್ಷಣರಹಿತ ಸೋಂಕಿತರಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಉಚಿತವಾಗಿ ‌ಔಷಧ ಕಿಟ್ ನೀಡಬೇಕು. ಆರೋಗ್ಯ ಇಲಾಖೆಯ ತಂಡಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪ್ರತಿದಿನ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಳ್ಳಬೇಕು.

ತುರ್ತು ಚಿಕಿತ್ಸೆಯ ಅಗತ್ಯವಿರುವವರನ್ನು ಸಕಾಲಕ್ಕೆ ಆಸ್ಪತ್ರೆಗೆ ಕಳುಹಿಸಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.