ಚಿಕ್ಕೋಡಿ : ಸರ್ಕಾರ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿಲ್ಲ. ಲಾಕ್‌ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ರಾಜ್ಯವನ್ನು ಶನಿವಾರ-ರವಿವಾರ ಜನರ ಸುರಕ್ಷತೆಗಾಗಿ ಲಾಕ್ ಮಾಡಲಾಗುವುದು. ಆದ್ರೆ ಶನಿವಾರ ಲಾಕ್ ಡೌನ್ ಮಾಡುವ ವಿಚಾರವನ್ನು ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಪ್ರವಾಸಿ ಮಂದಿರ ಹಾಗೂ ಅಂಬೇಡ್ಕರ ಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮದುವೆ ಕಾರ್ಯಕ್ರಮಗಳಿಂದ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಅಂತಹ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ. ಸರ್ಕಾರ ಸಂಪೂರ್ಣ ಜವಾಬ್ದಾರಿಯುತ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದರು.