ಬೆಳಗಾವಿ : ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕ್ರಮದಲ್ಲಿ ಸರ್ಕಾರಿ ಅಧಿಕಾರಿಗಳು ಭಾಗಿಯಾಗುವ ಮೂಲಕ ಸರ್ಕಾರಿ ನಿಯಮ ಉಲ್ಲಂಘನೆ ಮಾಡಿದ್ದಾರೆ. ಅಂತಹ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಪ್ರಶಾಂತ ಬುರ್ಗೆ ಎಂಬುವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಏ.19ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕ್ರಮ ನಡೆದಿತ್ತು. ಅಂದಿನ ಕಾರ್ಯಕ್ರಮದಲ್ಲಿ ನಿಪ್ಪಾಣಿ ತಹಶೀಲ್ದಾರ್ ಮೋಹನ್ ಭಸ್ಮೆ, ಬಿಇಒ ರೇವತಿ ಮಠದ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಮಿತ್ರಾ ಡಿ. ಬಿ ಭಾಗಿಯಾಗಿದ್ದರು.

ಆ ಮೂಲಕ ಸರ್ಕಾರಿ ನೌಕರರು ರಾಜಕೀಯ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸರ್ಕಾರದ ಕಾಯ್ದೆಯನ್ನ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ, ನಿಯಮ ಉಲ್ಲಂಘನೆ ಮಾಡಿರುವ ಅಧಿಕಾರಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಪ್ರಶಾಂತ ಬುರ್ಗೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: 15 ಲಕ್ಷ ರೂ. ಲಂಚ ಪಡೆದ ಆರೋಪ ; ಹೆಚ್ಚುವರಿ ಎಸ್ಪಿಯಿಂದ ಗೋಕಾಕ್ ಪಿಎಸ್ಐ ತೀವ್ರ ವಿಚಾರಣೆ