ETV Bharat / city

ಬೆಳಗಾವಿಯ ಕೇಶವ ನಗರದಲ್ಲಿ 20, ಶಿವಾಜಿ ನಗರದಲ್ಲಿ 30ಕ್ಕೂ ಹೆಚ್ಚು ಮನೆಗಳು ಜಲಾವೃತ

ಬೆಳಗಾವಿ ನಗರದಲ್ಲಿ ಹಲವಾರು ಮನೆಗಳು ಜಲಾವೃತವಾಗಿದ್ದು, ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

heavy-rain-in-belagavi
ಅಧಿಕ ಮನೆಗಳು ಜಲಾವೃತ
author img

By

Published : Aug 8, 2022, 5:56 PM IST

ಬೆಳಗಾವಿ : ನಗರದಲ್ಲಿ ಕಳೆದ ಮೂರು ದಿನಗಳಿಂದ ಮಳೆರಾಯ ತನ್ನ ಆರ್ಭಟ ಮುಂದುವರಿಸಿದ್ದಾನೆ. ವರುಣನ ಅಬ್ಬರಕ್ಕೆ ಕುಂದಾನಗರಿ ಜನ ಬೆಚ್ಚಿಬಿದ್ದಿದ್ದಾರೆ. ನಗರದ ವಿವಿಧ ಕಡೆಗಳಲ್ಲಿ ಮನೆಗಳು ಜಲಾವೃತವಾಗಿದ್ದು, ನಗರ ಪ್ರಮುಖ ರಸ್ತೆಗಳು ನದಿಯ ಸ್ವರೂಪ ಪಡೆದುಕೊಂಡಿವೆ. ಇಲ್ಲಿನ ಓಂನಗರದ, ಹಿಂಡಲಗಾ, ಶಿವಾಜಿ ನಗರ, ವೀರಭದ್ರ, ಕೇಶವ್ ನಗರ ಬಳಿಯ ರಸ್ತೆಯಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ನಿಂತಿದ್ದು, ಜನರು ಮನೆ ಬಿಟ್ಟು ಹೊರಗೆ ಬರಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನ ವಡಗಾವಿಯ ಕೇಶವ ನಗರದಲ್ಲಿ 20ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ನೆಲಮಹಡಿಯಲ್ಲಿ ವಾಸವಿದ್ದ ಕುಟುಂಬಗಳನ್ನು ಮೇಲ್ಮಹಡಿಗೆ ಶಿಫ್ಟ್ ಮಾಡಲಾಗಿದೆ. ಮನೆಯ ಕಾಂಪೌಂಡ್‍ಗೆ ನೀರು ನುಗ್ಗಿದ್ದರಿಂದ ಸ್ಥಳೀಯರು ಪರದಾಡುವಂತಾಗಿದೆ. ಸಮರ್ಪಕ ಚರಂಡಿ ವ್ಯವಸ್ಥೆ ಮಾಡದ ಹಿನ್ನೆಲೆ ಮಳೆನೀರು ಮನೆಗೆ ನುಗ್ಗುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲವೆಂದು ಇಲ್ಲಿನ ಜನ ಮಹಾನಗರ ಪಾಲಿಕೆಗೆ ಹಿಡಿಶಾಪ ಹಾಕಿದ್ದಾರೆ.

ಸ್ಥಳ ಪರಿಶೀಲನೆ‌ ನಡೆಸಿದ ಪಾಲಿಕೆ ಆಯುಕ್ತ ರುದ್ರೇಶ ಗಾಳಿ

ಬೆಳಗಾವಿಯಲ್ಲಿ ಚಿಕ್ಕಮಕ್ಕಳ ಆಸ್ಪತ್ರೆಗೆ ನುಗ್ಗಿದ ನೀರು: ಶ್ರೀನಗರದ ಗಾರ್ಡನ್ ಪಕ್ಕದಲ್ಲಿರುವ ಡಾ. ಮುರುಗೇಶ್ ಪಾಟೀಲ್ ಮಾಲೀಕತ್ವದ ಚಿಕ್ಕಮಕ್ಕಳ ಆಸ್ಪತ್ರೆಗೆ ಮಳೆ ನೀರು ನುಗ್ಗಿದೆ. ಆಸ್ಪತ್ರೆಯಲ್ಲಿ ನೆಲದ ಮೇಲೆ ಸುಮಾರು 6 ಇಂಚ್‍ಗಳಷ್ಟು ನೀರು ನಿಂತಿದ್ದು, ರೋಗಿಗಳು ಹಾಗೂ ವೈದ್ಯರು ಈ ನೀರಿನಲ್ಲಿಯೇ ಓಡಾಡುವ ದುಸ್ಥಿತಿ ನಿರ್ಮಾಣವಾಗಿದೆ. ಮೆಡಿಕಲ್ ಶಾಪ್‍ಗೆ ನೀರು ನುಗ್ಗಿ ಲಕ್ಷಾಂತರ ಮೌಲ್ಯದ ಔಷಧಿಗಳು ನಷ್ಟವಾಗಿವೆ.

ಶಿವಾಜಿ ನಗರದಲ್ಲೂ 30ಕ್ಕೂ ಅಧಿಕ ಮನೆಗಳಿಗೆ ನುಗ್ಗಿದ ನೀರು: ಬೆಳಗಾವಿಯ ಶಿವಾಜಿ ನಗರದಲ್ಲಿ ಮಹಾಮಳೆಗೆ 30ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಅತಿಯಾದ ಮಳೆಗೆ ಕೋಟೆ ಕೆರೆಗೆ ಹೋಗುವ ನೀರು ಕಾಲೋನಿಗೆ ನುಗ್ಗಿ ಅವಾಂತರ ಸೃಷ್ಟಿಸಿದ್ದು ಮನೆಯಲ್ಲಿದ್ದ ಆಹಾರ ಸಾಮಗ್ರಿಗಳು, ದಿನಸಿ, ಬಟ್ಟೆ ನೀರುಪಾಲಾಗಿದ್ದು ಬೆಳಗಾವಿ ಜಿಲ್ಲಾಡಳಿತದ ವಿರುದ್ಧ ಕಾಲೋನಿ ಜನರು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳ ಪರಿಶೀಲನೆ‌ ನಡೆಸಿದ ಪಾಲಿಕೆ ಆಯುಕ್ತ ರುದ್ರೇಶ ಗಾಳಿ : ಬೆಳಗಾವಿಯ ಶಿವಾಜಿ ನಗರದ ಪಂಜಿನಬಾಬಾ ಮೊಹಲ್ಲಾಗೆ ನೀರು ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಮೂರು ಅಡಿ ನೀರಲ್ಲೇ ನಡೆದುಕೊಂಡು ಬಂದು ಸ್ಥಳ ಪರಿಶೀಲಿಸಿದರು. ಈ ವೇಳೆ ಮನೆ ಒಳಗೆ ನೀರು ಹೋಗಿರುವುದನ್ನ ಪರಿಶೀಲನೆ ನಡೆಸಿದ ಕಮಿಷನರ್ ಅವರಿಗೆ ಪ್ರತಿವರ್ಷ ಮಳೆಗಾಲದಲ್ಲಿ ನೀರು ಬಂದು ಇದೇ ಪರಿಸ್ಥಿತಿ ಇದೆ. ಶಾಶ್ವತ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಮನವಿ ಮಾಡಿದರು. ಗೋಡೆ ನಿರ್ಮಿಸಿ ನೀರು ಬಾರದಂತೆ ನೋಡಿಕೊಳ್ಳುವುದಾಗಿ ಕಮೀಷನರ್ ಭರವಸೆ ನೀಡಿದ್ದಾರೆ.

ನಗರದ ಯಳ್ಳೂರ ರಸ್ತೆಯ ಕೇಶವ ನಗರ, ಭಾರತ ನಗರ, ಅನಗೋಳದ ರಘುನಾಥ ಪೇಟ ಮತ್ತಿತರ ಕಡೆಗಳಲ್ಲಿ ಸಂಚರಿಸಿದರ ಅವರು, ಯಾವುದೇ ಕಾರಣಕ್ಕೂ ಪರಿಹಾರ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್​ ಹಾಗೂ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಳೆಯ ಮನೆಗಳು ಕುಸಿಯುವ ಸಂಭವವಿದ್ದರೆ ಅಂತಹ ಮನೆಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮವಾಗಿ ಜನರನ್ನು ಸ್ಥಳಾಂತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಅತಿವೃಷ್ಟಿಯಿಂದ ನಗರದಲ್ಲಿ 10ಕ್ಕಿಂತ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, 4 ಮನೆಗಳು‌ ಸಂಪೂರ್ಣವಾಗಿ ಕುಸಿದಿವೆ. ನೀರು ನುಗ್ಗಿರುವ ಮನೆಗಳಿಗೆ 24 ಗಂಟೆಗಳಲ್ಲಿ ಪರಿಹಾರ ನೀಡಲಾಗುವುದು. ಮನೆ ಸಂಪೂರ್ಣವಾಗಿ ಕುಸಿದಿರುವುದನ್ನು ಪರಿಶೀಲಿಸಿ 48 ಗಂಟೆಗಳಲ್ಲಿ ಪರಿಹಾರ ನೀಡಲಾಗುವುದು. ಈ ನಿಟ್ಟಿನಲ್ಲಿ ತ್ವರಿತವಾಗಿ ಸಮೀಕ್ಷೆ ಪೂರ್ಣಗೊಳಿಸಿ, ದಾಖಲೆಗಳನ್ನು ಆಧರಿಸಿ ಪರಿಹಾರ ನೀಡಲಾಗುತ್ತದೆ ಎಂದರು.

ಇದನ್ನೂ ಓದಿ : ನಿರಂತರವಾಗಿ ಸುರಿಯುತ್ತಿರೋ ಮಳೆ: ನೀರಿನ ಮಟ್ಟ ಹೆಚ್ಚಳ, ಕೊಡಗುದಲ್ಲಿ ಜನ ಜೀವನ ಅಸ್ತವ್ಯಸ್ತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.