ETV Bharat / city

ಮಹಾರಾಷ್ಟ್ರದಲ್ಲಿ ವರುಣಾರ್ಭಟ... ಕೃಷ್ಣಾ ನದಿ ಒಳ ಹರಿವು ಹೆಚ್ಚಳ - ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿ

ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ಒಳಹರಿವು ಒಂದು ಲಕ್ಷ ಕ್ಯೂಸೆಕ್​ಕಿಂತ ಹೆಚ್ಚಿದೆ ಎಂದು ಚಿಕ್ಕೋಡಿ ತಹಶೀಲ್ದಾರ್ ಶುಭಾಸ ಸಂಪಗಾಂವಿ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ವರುಣನಾರ್ಭಟ, ಕೃಷ್ಣಾ ನದಿ ಒಳ ಹರಿವು ಹೆಚ್ಚಳ

author img

By

Published : Aug 16, 2020, 11:47 AM IST

Updated : Aug 16, 2020, 12:34 PM IST

ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ‌ ನದಿ ಒಳ ಹರಿವು ಏರಿಕೆಯಾಗಿದೆ‌. ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ಒಳಹರಿವು ಒಂದು ಲಕ್ಷ ಕ್ಯೂಸೆಕ್‌ಗಿಂತ ಹೆಚ್ಚಿದೆ ಎಂದು ಚಿಕ್ಕೋಡಿ ತಹಶೀಲ್ದಾರ್ ಶುಭಾಸ್​ ಸಂಪಗಾಂವಿ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ವರುಣಾರ್ಭಟ, ಕೃಷ್ಣಾ ನದಿ ಒಳ ಹರಿವು ಹೆಚ್ಚಳ

ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ನಿಂದ 90,000ಕ್ಯೂಸೆಕ್ ನೀರು, ದೂಧಗಂಗಾ ನದಿಯಿಂದ 15,840 ಕ್ಯೂಸೆಕ್ ನೀರು ಹೀಗೆ ಒಟ್ಟು ಒಂದು ಲಕ್ಷ ಕ್ಯೂಸೆಕ್​ಗೂ ಅಧಿಕ ನೀರು ರಾಜ್ಯದ ಕೃಷ್ಣಾ ನದಿಗೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾ - 182 ಮಿ.ಮೀ, ನವಜಾ - 324 ಮಿ.ಮೀ, ಮಹಾಬಲೇಶ್ವರ - 203 ಮಿ.ಮೀ, ವಾರಣಾ - 78 ಮಿ.ಮೀ, ಕಾಳಮ್ಮವಾಡಿ - 119 ಮಿ.ಮೀ, ರಾಧಾನಗರಿ - 104 ಮಿ.ಮೀ, ಪಾಟಗಾಂವ್​ - 175 ಮಿ.ಮೀ ಮಳೆ ವರದಿಯಾಗಿದೆ. ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಾಗಿ‌ ಮಳೆಯಾಗಿರುವ ವರದಿಯಾಗಿದೆ‌.

ಚಿಕ್ಕೋಡಿ ಉಪವಿಭಾಗದಲ್ಲಿ ಚಿಕ್ಕೋಡಿ - 20.8 ಮಿ.ಮೀ, ಅಂಕಲಿ - 28.4 ಮಿ.ಮೀ, ನಾಗರಮುನ್ನೋಳಿ 18.4 ಮಿ.ಮೀ ಹಾಗೂ ಸದಲಗಾ - 31.6 ಮಿ.ಮೀ ಮಳೆಯಾಗಿರುವ ವರದಿಯಾಗಿದೆ. ಸದ್ಯ ಕೊಯ್ನಾ ಜಲಾಶಯ 86%, ವಾರಣಾ ಜಲಾಶಯ 90%, ರಾಧಾನಗರಿ ಜಲಾಶಯ 100%, ಕಣೇರ ಜಲಾಶಯ 92%, ಧೂಮ ಜಲಾಶಯ 81%, ಪಾಟಗಾಂವ 98% ಧೂದಗಂಗಾ 92%, ತುಂಬಿದೆ.

ಹಿಪ್ಪರಗಿ ಬ್ಯಾರೆಜ್‌ನಿಂದ 99,500 ಹಾಗೂ ಆಲಮಟ್ಟಿ ಜಲಾಶಯದಿಂದ 1,50,000 ಕ್ಯೂಸೆಕ್ ನೀರನ್ನು ಹೊರಗಡೆ ಬಿಡಲಾಗುತ್ತಿದೆ ಎಂದು ಚಿಕ್ಕೋಡಿ ತಹಶೀಲ್ದಾರ್ ತಿಳಿಸಿದ್ದಾರೆ.

Last Updated : Aug 16, 2020, 12:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.