ಬೆಳಗಾವಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಬೆಳಗಾವಿ ನಗರ, ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.
ಭಾರಿ ಮಳೆಯಿಂದ ಮತ್ತೊಮ್ಮೆ ಬಳ್ಳಾರಿ ನಾಲೆ ತುಂಬಿ ಹರಿಯುತ್ತಿದೆ. ಪರಿಣಾಮ ತಾಲೂಕಿನ ಯಳ್ಳೂರು, ದಾಮಣೆ, ವಡಗಾಂವಿ, ಆನಗೋಳ, ಜುನೇ ಬೆಳಗಾವಿ ಸೇರಿ ನಾಲಾ ಸುತ್ತಮುತ್ತಲಿನ ಪ್ರದೇಶದ ಜಮೀನಿನಲ್ಲಿ ಬೆಳೆದ ಭತ್ತದ ಬೆಳೆ ಮತ್ತೆ ಜಲಾವೃತವಾಗಿದೆ. ಕಳೆದ 15 ದಿನಗಳ ಹಿಂದೆ ಸುರಿದಿದ್ದ ಮಳೆಯಿಂದ ಜಮೀನು ಜಲಾವೃತವಾಗಿ ಬೆಳೆ ಕೊಳೆತು ಹೋಗಿತ್ತು. ಇದೀಗ ಎರಡನೇ ಬಾರಿಗೆ ರೈತರು ಮತ್ತೆ ನಾಟಿ ಮಾಡಿದ್ದರು. ಆದರೆ ಮತ್ತೆ ಜಲಾವೃತವಾಗಿದ್ದರಿಂದ ರೈತರು ಸಂಕಷ್ಟ ಎದುರಿಸುವಂತಾಗಿದೆ.
ಇದನ್ನೂ ಓದಿ: ಮಳೆ ಹಾನಿ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವ ಕಾರಜೋಳ ಸೂಚನೆ