ETV Bharat / city

ಪತಿಯನ್ನು ಕೊಲೆಗೈದು ಹೂತು ಹಾಕಿದ್ದ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಪತಿಯನ್ನು ಕೊಲೆ ಮಾಡಿದ ಪತ್ನಿಯು ಜೆಸಿಬಿ ಮೂಲಕ ಗುಂಡಿ ತೋಡಿಸಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಪ್ಪಾಣಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Husband murder case:  nippani police arrested Four accused
ಪತಿ ಕೊಲೆ ಪ್ರಕರಣ: ನಾಲ್ವರ ಆರೋಪಿಗಳ ಬಂಧನ
author img

By

Published : Sep 6, 2020, 7:19 PM IST

ಚಿಕ್ಕೋಡಿ (ಬೆಳಗಾವಿ): ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಪತಿಯನ್ನು ಕೊಲೆ ಮಾಡಿದ ಪತ್ನಿಯು ಜೆಸಿಬಿ ಮೂಲಕ ಗುಂಡಿ ತೋಡಿಸಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಪ್ಪಾಣಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪತಿ ಕೊಲೆ ಪ್ರಕರಣ: ನಾಲ್ವರ ಆರೋಪಿಗಳ ಬಂಧನ

ಪತ್ನಿ ಅನಿತಾ ಸಚಿನ್ ಭೋಪಳೆ (35), ಕೃಷ್ಣಾ ಅಲಿಯಾಸ್ ಪಿಂಟು ರಾಜಾರಾಮ್ ಘಾಟಗೆ (26), ವನಿತಾ ಚವ್ಹಾಣ (29), ಗಣೇಶ ರೇಡೇಕರ (21) ಬಂಧಿತ ಆರೋಪಿಗಳು. ಸೆಪ್ಟಂಬರ್​ 3 ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚನಾಳ ಗ್ರಾಮದಲ್ಲಿ ಪತ್ನಿ ಅನಿತಾ, ತನ್ನ ಶೀಲದ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದ ಪತಿ ಸಚಿನ್​ ಸದಾಶಿವ ಭೋಪಳೆ (35) ಈತನನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾಳೆ. ಬಳಿಕ ತನ್ನ ಸಹೋದರ ಹಾಗೂ ಸಹೋದರಿಯರ ಸಹಾಯದಿಂದ ರಾತ್ರೋರಾತ್ರಿ ಎಮ್ಮೆ ಸತ್ತಿದೆ ಎಂದು ಜೆಸಿಬಿ ಮೂಲಕ ಗುಂಡಿ ತೋಡಿಸಿ, ಶವವನ್ನು ಹೂತು ಪರಾರಿಯಾಗಿದ್ದರು.

https://www.etvbharat.com/kannada/karnataka/state/belgavi/wife-killed-her-husband-at-nippani/ka20200906115203381

ಘಟನೆ ಕುರಿತು ಸಂಶಯ ವ್ಯಕ್ತಪಡಿಸಿದ್ದ ಜೆಸಿಬಿ ಡ್ರೈವರ್‌ ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಶನಿವಾರ ಮಾಹಿತಿ ಪಡೆದಿದ್ದ ನಿಪ್ಪಾಣಿ ಪೊಲೀಸರು ಹಾಗೂ ಡಿವೈಎಸ್ಪಿ ಮನೋಜ್ ಕುಮಾರ್​ ನೇತೃತ್ವದ ತಂಡ, ಪ್ರಕರಣ ಕೈಗೆತ್ತಿಕೊಂಡ ಒಂದೇ ದಿನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.