ETV Bharat / city

ಕೊರೊನಾ ಲಕ್ಷಣ ಕಂಡು ಬಂದರೆ ತಕ್ಷಣ ಮಾಹಿತಿ ನೀಡಿ: ಬೆಳಗಾವಿ ಜಿಲ್ಲಾಧಿಕಾರಿ - ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ

ಬೆಳಗಾವಿ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕೊರೊನಾ ಸೋಂಕು ಕಂಡುಬಂದಿದ್ದು, ಯಾರಿಗಾದರೂ ಸೋಂಕಿನ ಲಕ್ಷಣ ಕಂಡು ಬಂದರೆ ತಕ್ಷಣ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಮನವಿ ಮಾಡಿಕೊಂಡಿದ್ದಾರೆ.

If corona symptoms occur, immediately inform:District Commissioner Dr. Bommanahalli
ಕೊರೊನಾ ಲಕ್ಷಣ ಕಂಡುಬಂದರೆ ತಕ್ಷಣ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಮನವಿ
author img

By

Published : Apr 8, 2020, 10:29 PM IST

ಬೆಳಗಾವಿ: ಜಿಲ್ಲೆಯ ಹಿರೇಬಾಗೇವಾಡಿ, ಬೆಳಗುಂದಿ ಹಾಗೂ ಕ್ಯಾಂಪ್ ಕಸಾಯಿ ಗಲ್ಲಿಯಲ್ಲಿ ಕೊರೊನಾ ಸೋಂಕು ಲಕ್ಷಣ ಕಂಡು ಬಂದರೆ ‌ತಕ್ಷಣ ಮಾಹಿತಿ‌ ನೀಡಬೇಕೆಂದು ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಜಿಲ್ಲೆಯ ಹಿರೇಬಾಗೇವಾಡಿ, ಬೆಳಗುಂದಿ ಗ್ರಾಮಗಳು ಮತ್ತು ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಕ್ಯಾಂಪ್​ ಕಸಾಯಿ ಗಲ್ಲಿ, ಕುಡಚಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಕೋವಿಡ್​-19 ಪ್ರಕರಣಗಳು ಪತ್ತೆಯಾಗಿದ್ದು, ಸದರಿ ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಈಗಾಗಲೇ ಘೋಷಿಸಲಾಗಿದೆ‌.

ಅಲ್ಲದೇ ಸೋಂಕು ಪತ್ತೆಯಾದ ಈ ಸ್ಥಳಗಳಲ್ಲಿ ವಾಸಿಸುತ್ತಿರುವ ಮತ್ತು ಸೋಂಕಿತ ವ್ಯಕ್ತಿಗಳ ಜೊತೆ ದೈನಂದಿನ ಚಟುವಟಿಕೆಗಳಲ್ಲಿ ನೇರವಾಗಿ ಸಂಪರ್ಕ ಹೊಂದಿದ್ದ ಸಾರ್ವಜನಿಕರಿಗೆ ಕೊರೊನಾ ಲಕ್ಷಣಗಳಾದ ಜ್ವರ, ಕೆಮ್ಮು, ಶೀತ ಹಾಗೂ ಉಸಿರಾಟದ ತೊಂದರೆಗಳು ಕಂಡು ಬಂದಲ್ಲಿ ಕೂಡಲೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ಅಥವಾ ಪ್ರಸ್ತುತವಾಗಿ ಚಾಲನೆಯಲ್ಲಿರುವ ಕೋವಿಡ್​-19 ಸಮೀಕ್ಷಾ ತಂಡದವರಿಗೆ ಮಾಹಿತಿ ನೀಡಬೇಕು.

ಇಲ್ಲವೇ ಸಹಾಯವಾಣಿ ಸಂಖ್ಯೆ 0831-242485ಕ್ಕೆ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.