ETV Bharat / city

ಇಲ್ಲಿ ಮಳೆಗಾಲದ ಅಧಿವೇಶನ ನಡೆಸದಿದ್ರೆ, ಪ್ರತ್ಯೇಕ ರಾಜ್ಯದ ಹೋರಾಟ ಅನಿವಾರ್ಯ': ಇದು ಖಡಕ್​ ಎಚ್ಚರಿಕೆ!

author img

By

Published : Jul 16, 2021, 1:34 PM IST

ಮುಂಬರುವ ಮಳೆಗಾಲದ ಅಧಿವೇಶನವನ್ನು ಬೆಳಗಾವಿಯ ಸುರ್ವಣಸೌಧದಲ್ಲಿ ಮಾಡದಿದ್ದಲ್ಲಿ ಆಗಸ್ಟ್​ ಮೊದಲ ವಾರದಲ್ಲಿ ರಾಜಕೀಯ ಹೋರಾಟಕ್ಕೆ ಇಳಿಯಲಾಗುವುದು. ಅದಕ್ಕೂ ಸರ್ಕಾರ ಸ್ಪಂದಿಸದಿದ್ದರೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಹೋರಾಟ ಅನಿವಾರ್ಯ ಎಂದು ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

JDS leader Ashok Poojary
ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ

ಬೆಳಗಾವಿ: ಮುಂಬರುವ ಮಳೆಗಾಲದ ಅಧಿವೇಶನವನ್ನು ಬೆಳಗಾವಿ ಸುರ್ವಣಸೌಧದಲ್ಲಿ ಮಾಡುವ ಮೂಲಕ ಉತ್ತರ ಕರ್ನಾಟದ ಆಡಳಿತ ಶಕ್ತಿ ಕೇಂದ್ರವನ್ನಾಗಿ ಮಾಡಬೇಕು.‌ ಇಲ್ಲವಾದರೆ, ಪ್ರತ್ಯೇಕ ರಾಜ್ಯದ ಹೋರಾಟ ಅನಿವಾರ್ಯವಾಗಲಿದೆ ಎಂದು ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

'ಸುವರ್ಣಸೌಧದಲ್ಲಿ ಮಳೆಗಾಲದ ಅಧಿವೇಶನ ನಡೆಸದಿದ್ರೆ, ಪ್ರತ್ಯೇಕ ರಾಜ್ಯದ ಹೋರಾಟ ಅನಿವಾರ್ಯ'

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಜನರ ಬೇಕು, ಬೇಡಗಳಿಗೆ ಧ್ವನಿಯಾಗಬೇಕು. ಇಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಬೇಕೆಂಬ ಸದುದ್ದೇಶದಿಂದ ನಿರ್ಮಿಸಿದ್ದ ಬೆಳಗಾವಿ ಸುವರ್ಣಸೌಧದಲ್ಲಿ ಕಳೆದ ಮೂರು ವರ್ಷಗಳಿಂದ ಅಧಿವೇಶನ ಆಗಿಲ್ಲ. ಎಲ್ಲಿಯವರೆಗೆ ಸುವರ್ಣಸೌಧದಲ್ಲಿ ಅಧಿವೇಶನ ನಡೆಸುವುದಿಲ್ಲವೋ, ಅಲ್ಲಿಯವರೆಗೂ ಆಡಳಿತ ವಿಕೇಂದ್ರಿಕರಣ ಆಗೋದಿಲ್ಲ.

ಮುಂಬರುವ ಮಳೆಗಾಲದ ಅಧಿವೇಶನವನ್ನು ಎರಡು ತಿಂಗಳುಗಳ ಕಾಲ ಬೆಳಗಾವಿ ಸುವರ್ಣಸೌಧದಲ್ಲಿ ನಡೆಸುವ ಮೂಲಕ ಉತ್ತರ ಕರ್ನಾಟಕದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದ ಪ್ರದೇಶಗಳ ಬಗ್ಗೆ ಚರ್ಚೆ ನಡೆಸಿ, ಈ ಭಾಗದ ಆಶೋತ್ತರಗಳಿಗೆ ಸ್ಪಂದಿಸಬೇಕು.

ಸುವರ್ಣಸೌಧವನ್ನ ಆಡಳಿತದ ಶಕ್ತಿ ಕೇಂದ್ರ ಮಾಡಿ

ಮಳೆಗಾಲದ ಅಧಿವೇಶನ ನಡೆಸುವ ಮೂಲಕ ಸುವರ್ಣಸೌಧವನ್ನು ಆಡಳಿತದ ಶಕ್ತಿ ಕೇಂದ್ರವನ್ನಾಗಿ ಮಾಡಬೇಕು. ಈ ಬಗ್ಗೆ ನಮ್ಮ ಭಾಗದ ಜನಪ್ರತಿನಿಧಿಗಳು ಗಟ್ಟಿಯಾಗಿ ಧ್ವನಿ ಎತ್ತುವುದರ ಜೊತೆಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಆ ನೈತಿಕ ಜವಾಬ್ದಾರಿ ಈ ಭಾಗದ ಜನಪ್ರತಿನಿಧಿಗಳ ಮೇಲಿದೆ. ಒಂದು ವೇಳೆ ಮಳೆಗಾಲದ ಅಧಿವೇಶನ ನಡೆಸದೇ ಇದ್ದರೆ, ಆಗಸ್ಟ್​ ಮೊದಲ ವಾರದಲ್ಲಿ ರಾಜಕೀಯ ಹೋರಾಟಕ್ಕೆ ಇಳಿಯಲಾಗುವುದು. ಅದಕ್ಕೂ ಸರ್ಕಾರ ಸ್ಪಂದಿಸದಿದ್ರೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಹೋಟೆಲ್​ನಲ್ಲಿ ದರ್ಶನ್ ಹಲ್ಲೆ ಪ್ರಕರಣ: ಎಸಿಪಿ ತನಿಖೆ ಚುರುಕು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.