ಬೆಳಗಾವಿ : ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಿದ್ದು. ಇನ್ನೂ ಮೂರು ದಿನಗಳ ಕಾಲ ಕಿತ್ತೂರು ಕೋಟೆ ಆವರಣದಲ್ಲಿ ಈ ಉತ್ಸವ ನಡೆಯಲಿದೆ.
ಬೈಲಹೊಂಗಲದ ಚನ್ನಮ್ಮ ಸಮಾಧಿಯಿಂದ ಆಗಮಿಸಿದ ವೀರ ಜ್ಯೋತಿಗೆ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪೂಜೆ ಸಲ್ಲಿಸಿ ಸ್ವಾಗತಿಸಿದರು. ಬಳಿಕ ಚನ್ನಮ್ಮಳ ಪ್ರತಿಮೆಗೆ ಸಚಿವ ಶೆಟ್ಟರ್ ಮಾರ್ಲಾಪಣೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಜಾನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿದರು.