ETV Bharat / city

ನ.1ಕ್ಕೆ ಕಲಬುರಗಿ ಏರ್​ಪೋರ್ಟ್ ಉದ್ಘಾಟನೆ: ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಜಾಧವ್​ ಸೂಚನೆ

author img

By

Published : Oct 1, 2019, 8:29 AM IST

Updated : Oct 1, 2019, 9:07 AM IST

ನವೆಂಬರ್​ 1 ಕರ್ನಾಟಕ ರಾಜ್ಯೋತ್ಸವ ದಿನದಂದೇ ಕಲಬುರಗಿ ವಿಮಾನ ನಿಲ್ದಾಣದ ಉದ್ಘಾಟನೆಗಾಗಿ ಮಾನ್ಯ ಪ್ರಧಾನಮಂತ್ರಿಯವರನ್ನು ಆಹ್ವಾನಿಸುವ ಉದ್ದೇಶದಿಂದ, ಶೀಘ್ರವೇ ವಿಮಾನ ನಿಲ್ದಾಣದ ಎಲ್ಲ ಮೂಲಭೂತ ಸೌಕರ್ಯಗಳು ಹಾಗೂ ಪ್ರಗತಿಯಲ್ಲಿರುವ ಸಣ್ಣಪುಟ್ಟ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಂಸದ ಡಾ. ಉಮೇಶ್​ ಜಾಧವ್​ ಸೂಚನೆ ನೀಡಿದ್ದಾರೆ.

ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಕರ್ನಾಟಕ ರಾಜ್ಯೋತ್ಸವ ದಿನದಂದೇ ಕಲಬುರಗಿ ವಿಮಾನ ನಿಲ್ದಾಣದ ಉದ್ಘಾಟನೆಗಾಗಿ ಪ್ರಧಾನಿ ಮೋದಿಯವರನ್ನು ಆಹ್ವಾನಿಸಲಾಗುತ್ತಿದೆ. ಹೀಗಾಗಿ ಶೀಘ್ರವೇ ವಿಮಾನ ನಿಲ್ದಾಣದ ಎಲ್ಲ ಮೂಲಭೂತ ಸೌಕರ್ಯಗಳು ಹಾಗೂ ಪ್ರಗತಿಯಲ್ಲಿರುವ ಸಣ್ಣಪುಟ್ಟ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ್​ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದ ಕಲಬುರಗಿ ವಿಮಾನ ನಿಲ್ದಾಣದ ಭೂಸ್ವಾಧೀನ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಸಂಬಂಧಪಟ್ಟ ದೆಹಲಿ ಮಟ್ಟದಲ್ಲಿ ವಿಳಂಬವಿರುವ ಕೆಲಸಗಳನ್ನು ನೋಡಿಕೊಳ್ಳುವೆ ಎಂದು ಭರವಸೆ ನೀಡಿದ್ರು.

kalaburgi district news
ಕಲಬುರಗಿ ವಿಮಾನ ನಿಲ್ದಾಣದ ಭೂಸ್ವಾಧೀನ ಮತ್ತು ಪ್ರಗತಿ ಪರಿಶೀಲನಾ ಸಭೆ

ವಿಮಾನ ನಿಲ್ದಾಣದ ಸುತ್ತಮುತ್ತ ನಿರ್ಮಿಸಿದ ಕಂಪೌಂಡಅನ್ನು ಪರಿಶೀಲಿಸಿ ಕಂಪೌಂಡ ದುರಸ್ತಿ ಹಂತದಲ್ಲಿ ಇಲ್ಲದಿದ್ದರೆ, ದುರಸ್ತಿಗೊಳಿಸಿ. ಯಾವುದೇ ಪ್ರಾಣಿಗಳು ಒಳಗಡೆ ಪ್ರವೇಶಿಸದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸಂಸದ ಜಾಧವ್​ ಸೂಚಿಸಿದರು.

ಪ್ರಾದೇಶಿಕ ಆಯುಕ್ತ ಸುಬೋಧ ಯಾಧವ್​ ಮಾತನಾಡಿ, ವಿಮಾನ ನಿಲ್ದಾಣದಲ್ಲಿ ಪ್ರಗತಿಯಲ್ಲಿರುವ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ಕುರಿತು ಮಾಹಿತಿ ಪಡೆದು, ಅಕ್ಟೋಬರ್ 15 ರೊಳಗಾಗಿ ವಿಮಾನ ನಿಲ್ದಾಣದ ಬಾಕಿ ಉಳಿದಿರುವ ಫುಟ್​ಪಾತ್, ಶೌಚಾಲಯ, ನೀರಿನ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಹಾಗೂ ಸೇಡಂ ರಸ್ತೆಯಿಂದ ವಿಮಾನ ನಿಲ್ದಾಣವರೆಗೆ ಬೀದಿ ದೀಪಗಳ ಅಳವಡಿಸುವ ಕೆಲಸಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

kalaburgi district news
ಕಲಬುರಗಿ ವಿಮಾನ ನಿಲ್ದಾಣ

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಅಗ್ನಿಶಾಮಕ ದಳ, ಪರಿಸರ ನಿಯಂತ್ರಣ ಮಂಡಳಿ ಹಾಗೂ ಜೆಸ್ಕಾಂ ಇಲಾಖೆಯಿಂದ ನಿರಪೇಕ್ಷಣಾ ಪತ್ರ ನೀಡುವಲ್ಲಿ ತುರ್ತಾಗಿ ಕ್ರಮವಹಿಸಬೇಕು ಎಂದು ಇಲಾಖಾ ಅಧಿಕಾರಿಗಳಿಗೆ ಆಯುಕ್ತರು ಇದೇ ವೇಳೆ ಖಡಕ್ ಸೂಚನೆ ನೀಡಿದ್ರು.

Intro:
ಕಲಬುರಗಿ:ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ದಿನದಂದೇ ಕಲಬುರಗಿ ವಿಮಾನ ನಿಲ್ದಾಣದ ಉದ್ಘಾಟನೆಗಾಗಿ ಮಾನ್ಯ ಪ್ರಧಾನಮಂತ್ರಿಯವರನ್ನು ಆಹ್ವಾನಿಸುವ ಉದ್ದೇಶ ಹೊಂದಿದ್ದು, ಶೀಘ್ರವೇ ವಿಮಾನ ನಿಲ್ದಾಣದ ಎಲ್ಲ ಮೂಲಭೂತ ಸೌಕರ್ಯಗಳು ಹಾಗೂ ಪ್ರಗತಿಯಲ್ಲಿರುವ ಸಣ್ಣಪುಟ್ಟ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮವಹಿಸಬೇಕೆಂದು ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದ ಕಲಬುರಗಿ ವಿಮಾನ ನಿಲ್ದಾಣದ ಭೂಸ್ವಾಧೀನ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ವಿಮಾನ ನಿಲ್ದಾಣಕ್ಕೆ ಸಂಬಂಧಪಟ್ಟ ದೆಹಲಿ ಹಂತದಲ್ಲಿ ವಿಳಂಬವಿರುವ ಅಲ್ಲಿನ ಕೆಲಸಗಳು ನಾನು ಫಾಲೋಅಪ್ ಮಾಡುತ್ತೇನೆ ಎಂದರು.ವಿಮಾನ ನಿಲ್ದಾಣದ ಸುತ್ತಮುತ್ತ ನಿರ್ಮಿಸಿದ ಕಂಪೌಂಡ ಗೋಡೆಯನ್ನು ಪರಿಶೀಲಿಸಿ ಕಂಪೌಂಡ ಗೋಡೆಗಳು ದುರಸ್ತಿ ಹಂತದಲ್ಲಿ ಇದ್ದರೆ ದುರಸ್ತಿಗೊಳಿಸಿ ಯಾವುದೇ ಪ್ರಾಣಿಗಳು ಒಳಗಡೆ ಪ್ರವೇಶಿಸದಂತೆ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ಪ್ರಾದೇಶಿಕ ಆಯುಕ್ತ ಸುಬೋಧ ಯಾಧವ ಮಾತನಾಡಿ, ವಿಮಾನ ನಿಲ್ದಾಣದಲ್ಲಿ ಪ್ರಗತಿಯಲ್ಲಿರುವ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ಕುರಿತು ಮಾಹಿತಿ ಪಡೆದು,ಅಕ್ಟೋಬರ್ 15 ರೊಳಗಾಗಿ ವಿಮಾನ ನಿಲ್ದಾಣದ ಬಾಕಿ ಉಳಿದಿರುವ ಫುಟ್ಟಪಾತ್, ಶೌಚಾಲಯ, ನೀರಿನ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಹಾಗೂ ಸೇಡಂ ರಸ್ತೆಯಿಂದ ವಿಮಾನ ನಿಲ್ದಾಣವರೆಗೆ ಬೀದಿ ದೀಪಗಳ ಅಳವಡಿಸುವ ಕೆಲಸಗಳು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಅಗ್ನಿಶಾಮಕದಳ, ಪರಿಸರ ನಿಯಂತ್ರಣ ಮಂಡಳಿ ಹಾಗೂ ಜೆಸ್ಕಾಂ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ನೀಡುವಲ್ಲಿ ತುರ್ತಾಗಿ ಕ್ರಮವಹಿಸಬೇಕು ಎಂದು ಸಂಬಧಪಟ್ಟ ಇಲಾಖಾ ಅಧಿಕಾರಿಗಳಿಗೆ ಆಯುಕ್ತರು ಖಡಕ್ ಸೂಚಿನೆ ನೀಡಿದರು.Body:
ಕಲಬುರಗಿ:ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ದಿನದಂದೇ ಕಲಬುರಗಿ ವಿಮಾನ ನಿಲ್ದಾಣದ ಉದ್ಘಾಟನೆಗಾಗಿ ಮಾನ್ಯ ಪ್ರಧಾನಮಂತ್ರಿಯವರನ್ನು ಆಹ್ವಾನಿಸುವ ಉದ್ದೇಶ ಹೊಂದಿದ್ದು, ಶೀಘ್ರವೇ ವಿಮಾನ ನಿಲ್ದಾಣದ ಎಲ್ಲ ಮೂಲಭೂತ ಸೌಕರ್ಯಗಳು ಹಾಗೂ ಪ್ರಗತಿಯಲ್ಲಿರುವ ಸಣ್ಣಪುಟ್ಟ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮವಹಿಸಬೇಕೆಂದು ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದ ಕಲಬುರಗಿ ವಿಮಾನ ನಿಲ್ದಾಣದ ಭೂಸ್ವಾಧೀನ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ವಿಮಾನ ನಿಲ್ದಾಣಕ್ಕೆ ಸಂಬಂಧಪಟ್ಟ ದೆಹಲಿ ಹಂತದಲ್ಲಿ ವಿಳಂಬವಿರುವ ಅಲ್ಲಿನ ಕೆಲಸಗಳು ನಾನು ಫಾಲೋಅಪ್ ಮಾಡುತ್ತೇನೆ ಎಂದರು.ವಿಮಾನ ನಿಲ್ದಾಣದ ಸುತ್ತಮುತ್ತ ನಿರ್ಮಿಸಿದ ಕಂಪೌಂಡ ಗೋಡೆಯನ್ನು ಪರಿಶೀಲಿಸಿ ಕಂಪೌಂಡ ಗೋಡೆಗಳು ದುರಸ್ತಿ ಹಂತದಲ್ಲಿ ಇದ್ದರೆ ದುರಸ್ತಿಗೊಳಿಸಿ ಯಾವುದೇ ಪ್ರಾಣಿಗಳು ಒಳಗಡೆ ಪ್ರವೇಶಿಸದಂತೆ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ಪ್ರಾದೇಶಿಕ ಆಯುಕ್ತ ಸುಬೋಧ ಯಾಧವ ಮಾತನಾಡಿ, ವಿಮಾನ ನಿಲ್ದಾಣದಲ್ಲಿ ಪ್ರಗತಿಯಲ್ಲಿರುವ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ಕುರಿತು ಮಾಹಿತಿ ಪಡೆದು,ಅಕ್ಟೋಬರ್ 15 ರೊಳಗಾಗಿ ವಿಮಾನ ನಿಲ್ದಾಣದ ಬಾಕಿ ಉಳಿದಿರುವ ಫುಟ್ಟಪಾತ್, ಶೌಚಾಲಯ, ನೀರಿನ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಹಾಗೂ ಸೇಡಂ ರಸ್ತೆಯಿಂದ ವಿಮಾನ ನಿಲ್ದಾಣವರೆಗೆ ಬೀದಿ ದೀಪಗಳ ಅಳವಡಿಸುವ ಕೆಲಸಗಳು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಅಗ್ನಿಶಾಮಕದಳ, ಪರಿಸರ ನಿಯಂತ್ರಣ ಮಂಡಳಿ ಹಾಗೂ ಜೆಸ್ಕಾಂ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ನೀಡುವಲ್ಲಿ ತುರ್ತಾಗಿ ಕ್ರಮವಹಿಸಬೇಕು ಎಂದು ಸಂಬಧಪಟ್ಟ ಇಲಾಖಾ ಅಧಿಕಾರಿಗಳಿಗೆ ಆಯುಕ್ತರು ಖಡಕ್ ಸೂಚಿನೆ ನೀಡಿದರು.Conclusion:
Last Updated : Oct 1, 2019, 9:07 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.