ETV Bharat / city

ವಿಪಕ್ಷಗಳ ವಿರೋಧದ ನಡುವೆ ಮತಾಂತರ ನಿಷೇಧ ವಿಧೇಯಕ ಮಂಡನೆ... ಮಸೂದೆಯಲ್ಲಿರುವ ಪ್ರಮುಖಾಂಶಗಳೇನು? - ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ

ವಿಪಕ್ಷಗಳ ವಿರೋಧದ ನಡುವೆಯೇ ವಿಧಾನಸಭೆ ಅಧಿವೇಶನದಲ್ಲಿ ಮತಾಂತರ ನಿಷೇಧ ಕುರಿತ ಕರ್ನಾಟಕ ಧಾರ್ಮಿಕ ಹಕ್ಕು ವಿಧೇಯಕವನ್ನು ಮಂಡಿಸಲಾಗಿದೆ.

Karnataka government anti conversion bill introduced in assembly session
ವಿಪಕ್ಷಗಳ ವಿರೋಧದ ನಡುವೆ ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ
author img

By

Published : Dec 21, 2021, 3:53 PM IST

Updated : Dec 21, 2021, 4:45 PM IST

ಸುವರ್ಣಸೌಧ(ಬೆಳಗಾವಿ): ಬೆಳಗಾವಿ: ಬಹುನಿರೀಕ್ಷಿತ ಮತಾಂತರ ನಿಷೇಧ ವಿಧೇಯಕ ಇಂದು ವಿಧಾನಸಭೆಯಲ್ಲಿ ಮಂಡನೆ ಮಾಡಲಾಯಿತು. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021 ಅನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸಿದರು.

ವಿಪಕ್ಷಗಳ ವಿರೋಧದ ನಡುವೆ ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ

ಭೋಜನ ವಿರಾಮದ ನಂತರ ಸದನ ಆರಂಭ ಆಗುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿಧೇಯಕವನ್ನು ತರಾತುರಿಯಲ್ಲಿ ಮಂಡಿಸಿದರು. ವಿಧಾನಸಭೆ ಸದಸ್ಯರು ಧ್ವನಿ ಮತಗಳ ಮೂಲಕ ಮಸೂದೆಗೆ ಬೆಂಬಲ ಸೂಚಿಸಲಾಯಿತು. ವಿಧೇಯಕ ಮಂಡನೆ ಬಳಿಕ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021 ಮಂಡನೆ ಆಗಿದೆ. ನಾಳೆ ಪ್ರಶ್ನೋತ್ತರ ಅವಧಿಯ ಬಳಿಕ ವಿಧೇಯಕದ ಬಗ್ಗೆ ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ಸದನಕ್ಕೆ ತಿಳಿಸಿದರು.

ಕಾಂಗ್ರೆಸ್ ನಾಯಕರ ಗದ್ದಲ: ಸರ್ಕಾರ ತರಾಟೆಗೆ

ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸದನದ ಗಮನಕ್ಕೆ ತರದೇ ತರಾತುರಿಯಲ್ಲಿ ವಿಧೇಯಕ ಮಂಡಿಸುವ ಅವಶ್ಯಕತೆ ಏನಿತ್ತು? ವಿಧೇಯಕ ಜಾರಿಗೆ ನಮ್ಮ ವಿರೋಧವಿದೆ ಎಂದರು. ನಾವೇನು ತರಾತುರಿಯಲ್ಲಿ ವಿಧೇಯಕ ಮಂಡಿಸಿಲ್ಲ. ಸದನಕ್ಕೆ ಬರುವುದಕ್ಕೆ ನೀವೇ ತಡ ಮಾಡಿದ್ದೀರಿ ಎಂದು ಬಿಜೆಪಿ ಶಾಸಕರು ಹೇಳುತ್ತಿದ್ದಂತೆ ಪ್ರತಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜನ ವಿರೋಧಿ ವಿಧೇಯಕವನ್ನು ತರಾತುರಿಯಲ್ಲಿ ಮಂಡಿಸಿರುವುದನ್ನು ನಾವು ಖಂಡಿಸುತ್ತೇವೆ. ಇದು ಅತ್ಯಂತ ಕೆಟ್ಟ ಸರ್ಕಾರ. ಕದ್ದುಮುಚ್ಚಿ ಏಕೆ ಬಿಲ್ ಮಂಡಿಸಿದಿರಿ. ಸರ್ಕಾರಕ್ಕೆ ಅಷ್ಟೊಂದು ಆಸಕ್ತಿ ಇದ್ದಿದ್ದರೆ ರಾಜಾರೋಷವಾಗಿ ಮಂಡಿಸಬೇಕಿತ್ತು ಎಂದು ಟಾಂಗ್ ಕೊಟ್ಟರು. ವಿಧೇಯಕದ ಪ್ರತಿ ಹರಿದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಆರ್. ಅಶೋಕ, ಮತಾಂತರ ನಿಷೇಧ ವಿಧೇಯಕ ಮಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆದಿಯಾಗಿ ಎಲ್ಲರೂ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021 ವನ್ನು ನಾವು ಯಾರೂ ಇಲ್ಲದ ಜಾಗದಲ್ಲಿ ಮಂಡಿಸಿಲ್ಲ. ವಿಧಾನಸಭೆಯಲ್ಲಿ ರಾಜಾರೋಷವಾಗಿ ವಿಧೇಯಕವನ್ನು ಮಂಡಿಸಿದ್ದೇವೆ ಎಂದು ಕೈ ನಾಯಕರಿಗೆ ತಿರುಗೇಟು ನೀಡಿದರು.

ಬಿಲ್ ಮಂಡನೆ ಬಳಿಕ ಸ್ಪೀಕರ್ ಹೇಳಿದ್ದೇನು?

ಮತಾಂತರ ನಿಷೇಧ ವಿಧೇಯಕವನ್ನು ಬೆಳಗ್ಗೆ ಏಕೆ ಮಂಡಿಸಲಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿರುವುದು ಸಮಂಜವಾಗಿದೆ. ಇಂದು ಸದನದ ವೇಳಾ ಪಟ್ಟಿ ನಿನ್ನೆಯೇ ಸಿದ್ಧಗೊಳ್ಳುತ್ತದೆ. ನಿನ್ನೆ ಅಜೆಂಡಾ ಸಿದ್ಧಗೊಳ್ಳುವ ವೇಳೆ ವಿಧೇಯಕದ ಪ್ರತಿ ಸಿದ್ಧವಾಗಿರಲಿಲ್ಲ. ಅಜೆಂಡಾ ಸಿದ್ಧಪಡಿಸುವುದು ಹಾಗೂ ಅಜೆಂಡಾದಲ್ಲಿ ಏನಿರಬೇಕು ಎಂಬುವುದನ್ನು ನಾನೇ ನಿರ್ಧರಿಸುತ್ತೇನೆ. ಇಂದು ಬೆಳಗ್ಗೆ ವಿಧೇಯಕದ ಪ್ರತಿ ಸಿದ್ಧವಾಗಿರುವ ಮಾಹಿತಿ ಬಂತು. ಅದಕ್ಕೆ ನಿಯಮಾವಳಿ ಪ್ರಕಾರ ಇಂದು ವಿಧೇಯಕವನ್ನು ಮಂಡಿಸಲಾಗಿದೆ. ಈ ಬಗ್ಗೆ ನಾಳೆ ಚರ್ಚೆಗೆ ಅವಕಾಶ ನೀಡುತ್ತೇನೆ ಎಂದರು.

ಮತಾಂತರ ನಿಷೇಧ ವಿಧೇಯಕದಲ್ಲಿನ ಪ್ರಮುಖ ಅಂಶಗಳಿವು!

  1. ಬಲವಂತ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧ.‌
  2. ವ್ಯಕ್ತಿಯು ಆತನ ನಿಕಟ ಪೂರ್ವ ಧರ್ಮಕ್ಕೆ ಮರು ಮತಾಂತರಗೊಂಡರೆ ಅದನ್ನು ಈ ಅಧಿನಿಯಮದ ಅಡಿಯಲ್ಲಿ ಮತಾಂತರವೆಂದು ಪರಿಗಣಿಸಲಾಗುವುದಿಲ್ಲ
  3. ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳಿಗೂ ಮತಾಂತರದ ಬಗ್ಗೆ ದೂರು ನೀಡಬಹುದಾಗಿದೆ
  4. ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಇಪ್ಪತ್ತೈದು ಸಾವಿರ ರೂಪಾಯಿಗಳ ದಂಡ‌ ವಸೂಲಾತಿಗೆ ಅವಕಾಶವಿದೆ.
  5. ಅಪ್ರಾಪ್ತ ವ್ಯಕ್ತಿ, ಮಹಿಳೆ, ಎಸ್ ಸಿ, ಎಸ್ ಟಿ ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಹತ್ತು ವರ್ಷಗಳ ವರೆಗೆ ಜೈಲು ಶಿಕ್ಷೆ
    ಜೊತೆಗೆ 50 ಸಾವಿರ ದಂಡ
  6. ಮತಾಂತರಕ್ಕೆ ಬಲಿಯಾದವರಿಗೆ ಆಪಾದಿತನಿಂದ ಸಂದಾಯವಾಗುವಂತೆ ಗರಿಷ್ಠ ಐದು ಲಕ್ಷ ರೂಪಾಯಿ ಪರಿಹಾರ ಕೊಡಿಸಲು ಅವಕಾಶ ಕಲ್ಪಿಸಲಾಗಿದೆ.
  7. ಅಪರಾಧ ಪುನರಾವರ್ತನೆ ಆದಲ್ಲಿ ಐದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ರೂ. ದಂಡ ವಸೂಲಿ
  8. ಮತಾಂತರದ ಉದ್ದೇಶದಿಂದ ಆದ ಮದುವೆಯನ್ನು ಅಸಿಂಧು ಎಂದು ಘೋಷಿಸಲು ನ್ಯಾಯಾಲಯಕ್ಕೆ ಅಧಿಕಾರ
  9. ಮತಾಂತರ ಅಪರಾಧ ಜಾಮೀನು ರಹಿತಗಿರಲಿದೆ.
  10. ಮತಾಂತರವಾಗಲು‌ ಮುಂದಾಗಿರುವ ವ್ಯಕ್ತಿ ಕನಿಷ್ಠ ಮೂವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು.
  11. ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆ ಮಾಹಿತಿ ಕೊಡಬೇಕು.
  12. ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ30 ದಿನಗಳ ಒಳಗಾಗಿ ಆಕ್ಷೇಪಣೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಮೂಲಕ ವಿಚಾರಣೆ ನಡೆಸಬೇಕು.
  13. ವಿಚಾರಣೆ ಸಂದರ್ಭದಲ್ಲಿ ತಪ್ಪು ಕಂಡು ಬಂದಲ್ಲಿ ಜಿಲ್ಲಾ ದಂಡಾಧಿಕಾರಿ ಕ್ರಿಮಿನಲ್‌ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.
  14. ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ‌ ಹಿಡಿದು ಮೂಲ ಧರ್ಮ, ಮತಾಂತರಗೊಂಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು.
  15. ಮತಾಂತರಗೊಂಡ ವ್ಯಕ್ತಿ ತನ್ನ ಗುರುತನ್ನು ಸ್ಥಾಪಿಸಲು ಮತ್ತು ಘೋಷಣೆ ಅಂಶಗಳನ್ನು ಸ್ವೀಕರಿಸಲು ಘೋಷಣೆ ಕಳುಹಿಸಿರುವ/ಸಲ್ಲಿಸಿರುವ ದಿನಾಂಕದಿಂದ 20 ದಿನದೊಳಗೆ ಜಿಲ್ಲಾ ದಂಡಾಧಿಕಾರಿ ಮುಂದೆ ಹಾಜರಾಗಬೇಕು
  16. ಬಲವಂತದ ಮತಾಂತರ ಅಲ್ಲ ಎಂಬುದನ್ನು ರುಜುವಾತು ಮಾಡುವ ಹೊಣೆ ಮತಾಂತರ ಮಾಡಿದ ವ್ಯಕ್ತಿ, ಮತಾಂತರಕ್ಕೆ ನೆರವು ನೀಡಿದ ವ್ಯಕ್ತಿ ಮೇಲಿರಲಿದೆ
  17. ಅಪರಾಧಕ್ಕೆ ನೆರವು ಹಾಗೂ ದುಷ್ಪ್ರೇರಣೆ ನೀಡಿ ವ್ಯಕ್ತಿಯನ್ನು ಆರೋಪಿಯನ್ನಾಗಿ ಪರಿಗಣಿಸುವ ಅವಕಾಶವೂ ಇದೆ.
    ಇದನ್ನೂ ಓದಿ: ಬೆಳಗಾವಿಯ ಅಧಿವೇಶನದಲ್ಲಿ ಇಂದು ಮತಾಂತರ ನಿಷೇಧ ಕಾಯ್ದೆ ಮಂಡನೆ

Last Updated : Dec 21, 2021, 4:45 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.