ETV Bharat / city

ಚಳಿಗಾಲ ಅಧಿವೇಶನ: ಕೋವಿಡ್ ವರದಿ, ಲಸಿಕೆ ಪ್ರಮಾಣ ಪತ್ರ ಇದ್ದರೆ ಮಾತ್ರ ಸುವರ್ಣ ಸೌಧಕ್ಕೆ ಎಂಟ್ರಿ - ವಿಧಾನಮಂಡಳ ಚಳಿಗಾಲದ ಅಧಿವೇಶನಕ್ಕೆ ಆರ್​ಟಿಪಿಸಿಆರ್, ಲಸಿಕೆ ಕಡ್ಡಾಯ

ಅಧಿವೇಶನದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು. ಆರ್​ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕೂಡ ಹೊಂದಿರಬೇಕಾಗುತ್ತದೆ. ಅದೇ ರೀತಿ ‌ಅಧಿವೇಶನದ ಕೆಲಸ ಕಾರ್ಯಗಳಿಗೆ ನಿಯೋಜಿತ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಎರಡು ಡೋಸ್ ಲಸಿಕೆ ಪಡೆದಿರಬೇಕು. ಒಂದು ವೇಳೆ ಪಡೆದಿರದಿದ್ದರೆ ಅಂತಹವರಿಗೆ ಕೂಡಲೇ ಲಸಿಕೆ ನೀಡಬೇಕು ಎಂದು ಡಿಸಿ ಸೂಚನೆ ನೀಡಿದರು.

ವಿಧಾನಮಂಡಲ ಚಳಿಗಾಲ ಅಧಿವೇಶನ,RTPCR, Vaccination mandate for Karnataka Legislature Winter Session,ವಿಧಾನಮಂಡಳ ಚಳಿಗಾಲದ ಅಧಿವೇಶನಕ್ಕೆ ಆರ್​ಟಿಪಿಸಿಆರ್, ಲಸಿಕೆ ಕಡ್ಡಾಯ
ವಿಧಾನಮಂಡಲ ಚಳಿಗಾಲ ಅಧಿವೇಶನ
author img

By

Published : Dec 9, 2021, 5:52 PM IST

Updated : Dec 9, 2021, 6:53 PM IST

ಬೆಳಗಾವಿ: ಈ ಬಾರಿ ಕೋವಿಡ್ ಸೋಂಕು ಹರಡುವಿಕೆ ಭೀತಿ ಹಾಗೂ ಚುನಾವಣಾ ಪ್ರಕ್ರಿಯೆಗಳ ಮಧ್ಯೆಯೂ ವಿಧಾನಮಂಡಲ ಚಳಿಗಾಲ ಅಧಿವೇಶನದ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕೋವಿಡ್ ಮಾರ್ಗಸೂಚಿ ಪಾಲಿಸುವ ಮೂಲಕ ಸಮರ್ಪಕ ವಸತಿ, ಸಾರಿಗೆ ಹಾಗೂ ಊಟೋಪಾಹಾರ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಪಂ ಸಭಾಂಗಣದಲ್ಲಿ ನಡೆದ ಗಣ್ಯರು, ಉನ್ನತ ಅಧಿಕಾರಿಗಳು ಮತ್ತು ಸಂಪರ್ಕಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ಹಿನ್ನೆಲೆಯಲ್ಲಿ ಈ‌ ಬಾರಿಯ ಅಧಿವೇಶನ ಸಂದರ್ಭದಲ್ಲಿ ಹೆಚ್ಚಿನ ಜವಾಬ್ದಾರಿ ಇದೆ. ಕೆಲ ರಾಜ್ಯಗಳಲ್ಲಿ ಒಮಿಕ್ರಾನ್ ಪ್ರಕರಣಗಳು ವರದಿಯಾಗುತ್ತಿರುವುದರಿಂದ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ.

ಸಂದರ್ಭಕ್ಕೆ ಅನುಗುಣವಾಗಿ ಸರ್ಕಾರ ಪ್ರಕಟಿಸುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆಯಾಗಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಅಧಿವೇಶನದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆಯನ್ನು ಹಾಕಿಸಿಕೊಂಡಿರಬೇಕು. ಆರ್​ಟಿಪಿಸಿಆರ್ ನೆಗೆಟಿವ್ ವರದಿ ಕೂಡ ಹೊಂದಿರಬೇಕಾಗುತ್ತದೆ. ಅದೇ ರೀತಿ ‌ಅಧಿವೇಶನದ ಕೆಲಸ ಕಾರ್ಯಗಳಿಗೆ ನಿಯೋಜಿತ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಎರಡು ಡೋಸ್ ಲಸಿಕೆ ಪಡೆದಿರಬೇಕು. ಒಂದು ವೇಳೆ ಪಡೆದಿರದಿದ್ದರೆ ಅಂತಹವರಿಗೆ ಕೂಡಲೇ ಲಸಿಕೆ ನೀಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

(ಇದನ್ನೂ ಓದಿ: ಪರಂಪರಾಗತ ಆಹಾರ ಕ್ರಮ ಬದಲಿಸಬಾರದು : ಮೊಟ್ಟೆ ವಿತರಣೆಗೆ ಪೇಜಾವರ ಶ್ರೀಗಳ ಆಕ್ಷೇಪ)

ಶಿಷ್ಟಾಚಾರ ಪಾಲನೆಗೆ ಕಟ್ಟುನಿಟ್ಟಿನ ಸೂಚನೆ:
ಸಚಿವರುಗಳು, ಇಲಾಖೆಯ ಉನ್ನತ ಅಧಿಕಾರಿಗಳು ಬಂದಾಗ ಶಿಷ್ಟಾಚಾರ ಪಾಲಿಸುವುದು ಆಯಾ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳ ಹೊಣೆಗಾರಿಕೆಯಾಗಿದೆ. ಆದ್ದರಿಂದ ಯಾವುದೇ ರೀತಿಯ ಲೋಪ ಅಥವಾ ನಿರ್ಲಕ್ಷ್ಯ ಉಂಟಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು.

ವಸತಿ ಹಾಗೂ ಊಟೋಪಹಾರಕ್ಕೆ ಸಂಬಂಧಿಸಿದಂತೆ ಅಧಿವೇಶನದ ಮೊದಲ ಎರಡು‌ ದಿನಗಳ ಕಾಲ ಸ್ವಲ್ಪಮಟ್ಟಿಗೆ ಅನಾನುಕೂಲ ಎನಿಸಬಹುದು. ಆದರೆ, ಅದಕ್ಕೆ ಆಸ್ಪದ ನೀಡದಂತೆ ಸಮಿತಿಯ ಉಸ್ತುವಾರಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದರು.

ವಿಧಾನಮಂಡಳ ಚಳಿಗಾಲದ ಅಧಿವೇಶನಕ್ಕೆ ಆರ್​ಟಿಪಿಸಿಆರ್, ಲಸಿಕೆ ಕಡ್ಡಾಯ
ಜಿಪಂ ಸಭಾಂಗಣದಲ್ಲಿ ಸಭೆ

ಸಮರ್ಪಕ ಸಾರಿಗೆ ವ್ಯವಸ್ಥೆಗೆ ಕ್ರಮ:
ಅಧಿವೇಶನಕ್ಕೆ ಆಗಮಿಸುವ ಸಚಿವರು, ಪ್ರಧಾನ‌ ಕಾರ್ಯದರ್ಶಿಗಳು, ಉನ್ನತ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಶಿಷ್ಟಾಚಾರದ ಪ್ರಕಾರ ಸಮರ್ಪಕ ಸಾರಿಗೆ ವ್ಯವಸ್ಥೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ವಿವರಿಸಿದರು.

ಪ್ರವಾಸ ಕಾರ್ಯಕ್ರಮ ಪಟ್ಟಿಯನ್ನು ಆಧರಿಸಿ ವಸತಿ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆದ್ದರಿಂದ ಕಡ್ಡಾಯವಾಗಿ ಪ್ರವಾಸ ಕಾರ್ಯಕ್ರಮ ಪಟ್ಟಿ ಲಭಿಸಿದ ತಕ್ಷಣವೇ ಸೂಕ್ತ ವ್ಯವಸ್ಥೆ ಕಲ್ಪಿಸುವುದು ಆಯಾ ಸಂಪರ್ಕಾಧಿಕಾರಿಗಳ ಹೊಣೆಗಾರಿಕೆಯಾಗಿದೆ. ಆದ್ದರಿಂದ ಅವರೇ ಸಮನ್ವಯ ಸಾಧಿಸಿಕೊಂಡು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದರು.

ವಸತಿ ವ್ಯವಸ್ಥೆ, ಪ್ರತಿದಿನ ಪರಿಶೀಲನೆಗೆ ಸೂಚನೆ:
ಅಧಿವೇಶನ ಸಂದರ್ಭದಲ್ಲಿ ಸಚಿವರು, ಶಾಸಕರು ಮತ್ತಿತರ ಗಣ್ಯರಿಗೆ ಹಾಗೂ‌ ಉನ್ನತಮಟ್ಟದ ಅಧಿಕಾರಿಗಳಿಗೆ ಮೀಸಲಿರಿಸಿದ ಕೊಠಡಿಗಳನ್ನು ಕಡ್ಡಾಯವಾಗಿ ಅವರಿಗೆ ಮಾತ್ರ ಒದಗಿಸಬೇಕು. ಒಂದು ವೇಳೆ, ಅವರು ಬಾರದಿದ್ದರೆ ಅಥವಾ ಒಂದೆರಡು ದಿನಗಳ ಬಳಿಕ ಹಿಂದಿರುಗಿದರೆ ಆ ಬಗ್ಗೆ ವಸತಿ ಸಮಿತಿಗೆ ಸಂಪರ್ಕಾಧಿಕಾರಿಗಳು ಮಾಹಿತಿಯನ್ನು ನೀಡಬೇಕು. ಹೋಟೆಲ್​​ಗಳಿಗೆ ನಿಯೋಜಿಸಿದ ಸಂಪರ್ಕಾಧಿಕಾರಿಗಳು ನಿತ್ಯ ಎರಡು ಬಾರಿ ಕಡ್ಡಾಯವಾಗಿ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದು ಅಧಿವೇಶನದ ವಿಶೇಷ ಅಧಿಕಾರಿ ಡಾ.ಸುರೇಶ್ ಇಟ್ನಾಳ ಸೂಚನೆ ನೀಡಿದರು.

Last Updated : Dec 9, 2021, 6:53 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.