ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲಾ ಪಂಚಾಯತ್ ಸದಸ್ಯರು ಬೆಳಗಾವಿಗೆ ಆಗಮಿಸಿದಾಗ ಪೊಲೀಸರು ಅವರಿಗೆ ಬಿಗಿ ಭದ್ರತೆ ಕಲ್ಪಿಸಿದರು.
ಇಂದು ಕೊಲ್ಹಾಪುರ ಜಿ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಇರುವ ಹಿನ್ನೆಲೆ ಸದಸ್ಯರನ್ನು ಬಿಜೆಪಿ ಆಪರೇಷನ್ ಮಾಡಬಹುದೆಂಬ ಉದ್ದೇಶದಿಂದ ಸಚಿವ ಹಸನ್ ಮುಶ್ರೀಫ್, ಜಿಲ್ಲಾ ಪಂಚಾಯತ್ ಸದಸ್ಯರನ್ನು ನಿನ್ನೆ ರಾತ್ರಿ ಬೆಳಗಾವಿಗೆ ಕರೆತಂದಿದ್ದರು ಎನ್ನಲಾಗ್ತಿದೆ. ಇಂದು ಕರ್ನಾಟಕ ರಾಜ್ಯ ಸಾರಿಗೆ ಬಸ್ನಲ್ಲಿ ಅವರು ಕೊಲ್ಹಾಪುರಕ್ಕೆ ಪ್ರಯಾಣ ಬೆಳೆಸಿದರು. ಈ ವೇಳೆ ಪೊಲೀಸರು ಅವರಿಗೆ ಭದ್ರತೆ ಒದಗಿಸಿದ್ದಾರೆ.
ಈಗಾಗಲೇ ಗಡಿ ವಿಚಾರವಾಗಿ ಮಹಾರಾಷ್ಟ್ರದ ವಿರುದ್ಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರು ಗಡಿ ಜಿಲ್ಲೆಗೆ ಬಂದು ಹೋಗಿದ್ದು, ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿದೆ.