ಬೆಳಗಾವಿ : ಮೈಸೂರು ಸಂಸದ ಪ್ರತಾಪ್ ಸಿಂಹ (MP Pratap Simha) ಬಿಟ್ ಕಾಯಿನ್ ಬಗ್ಗೆ ರಾತ್ರಿಯೆಲ್ಲ ಸ್ಟಡಿ ಮಾಡಿರಬಹುದು. ಹೀಗಾಗಿ, ಬಿಟ್ ಕಾಯಿನ್ (Karnataka Bitcoin scam) ಎಂದರೇನು ಎಂದು ನಮ್ಮನ್ನು ಕೇಳುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (KPCC Working President Satish Jarakiholi) ಲೇವಡಿ ಮಾಡಿದರು.
ಗೋಕಾಕ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಿಷಯಗಳು ಎಲ್ಲರಿಗೂ ಗೊತ್ತಿರುವುದಿಲ್ಲ. ಏಕಾಏಕಿ ಬಿಟ್ ಕಾಯಿನ್ (Karnataka Bitcoin scam) ಬಗ್ಗೆ ಹೇಳಿ ಎಂದರೆ ಎಲ್ಲ ರಾಜಕಾರಣಿಗಳಿಗೂ ಹೇಳಲು ಆಗುವುದಿಲ್ಲ. ಬಿಟ್ ಕಾಯಿನ್ (Bitcoin) ಬಗ್ಗೆ ಹೊಸದಾಗಿ ಕೇಳುತ್ತಿದ್ದೇವೆ. ಇನ್ನು ಮುಂದೆ ಇದರ ಬಗ್ಗೆ ಎಲ್ಲರೂ ತಿಳಿದುಕೊಳ್ಳಲು ಪ್ರಯತ್ನ ಮಾಡುತ್ತಾರೆ ಎಂದು ತಿರುಗೇಟು ನೀಡಿದರು.
ಬಿಟ್ ಕಾಯಿನ್ ಹಗರಣದಲ್ಲಿ (Karnataka Bitcoin scam) ಆರೋಪ- ಪ್ರತ್ಯಾರೋಪದಿಂದ ಯಾವುದೇ ಪ್ರಯೋಜನವಿಲ್ಲ. ಈ ಬಗ್ಗೆ ಕೂಡಲೇ ತನಿಖೆ ಕೈಗೊಂಡು, ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹಲಗಾ-ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿ : ಹಲಗಾ-ಮಚ್ಚೆ ಬೈಪಾಸ್ ರಸ್ತೆ (Halga-Macche Bypass Road) ಕಾಮಗಾರಿ ನಡೆಸಲು ಉಂಟಾಗಿರುವ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳು ರೈತರೊಂದಿಗೆ ಚರ್ಚಿಸಿ ಬಗೆಹರಿಸಬೇಕು. ರೈತರ ಪ್ರತಿಭಟನೆಯ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ, ಜಿಲ್ಲಾಧಿಕಾರಿಗಳು ರೈತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಭೆ ನಡೆಸಿ, ಸಂಧಾನದ ಮೂಲಕ ಸಮಸ್ಯೆ ಪರಿಹರಿಸಬೇಕು ಎಂದರು.
ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರ : ವಿಧಾನ ಪರಿಷತ್ ಚುನಾವಣೆಯ (Karnataka Council Election) ಅಭ್ಯರ್ಥಿಗಳ ಆಯ್ಕೆ ಕುರಿತು ನ.14ರಂದು ಬೆಂಗಳೂರಿನಲ್ಲಿ ಕೆಪಿಸಿಸಿಯಿಂದ ಸಭೆ (KPCC Meeting) ಕರೆಯಲಾಗಿದೆ. ಈ ಬಗ್ಗೆ ಸಭೆಯಲ್ಲಿ ಪಕ್ಷದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಓದಿ: Bitcoin ಪ್ರಕರಣ.. ರಾಜ್ಯ ಬಿಜೆಪಿ ಸರ್ಕಾರಕ್ಕೆ ಕೈ ಶಾಸಕ ಪ್ರಿಯಾಂಕ್ ಖರ್ಗೆ ಪಂಚ ಪ್ರಶ್ನೆ