ಬೆಳಗಾವಿ : ಲಾಕ್‌ಡೌನ್ ಸಂದರ್ಭದಲ್ಲಿ ಬೆದರಿಕೆ ಹಾಕಿ ವ್ಯಾಪಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಕೆಎಸ್‌ಆರ್‌ಪಿ ಪೇದೆಯನ್ನು ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ. ಕೆಎಸ್‌ಆರ್‌ಪಿ ಪೇದೆಯಾಗಿದ್ರೂ ಸಿವಿಲ್ ಡ್ರೆಸ್ ಹಾಕಿ ಕ್ರೈಮ್ ಬ್ರ್ಯಾಂಚ್ ಪೊಲೀಸ್ ಅಂತ ಪೋಸ್ ಕೊಡ್ತಿದ್ದ ಆಸಾಮಿ ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರಸ್ಥರನ್ನು ಬೆದರಿಸಿ ಅವರ ಬಳಿ ಹಣ ವಸೂಲಿ ಮಾಡುತ್ತಿದ್ದ.
ನಗರದ ಕೆಎಸ್‌ಆರ್‌ಪಿ 2ನೇ ಬಟಾಲಿಯನ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ಧಾರೂಢ ವಡ್ಡರ್ ಬಂಧಿತ ಆರೋಪಿ. ಲಾಕ್‌ಡೌನ್ ಸಂದರ್ಭದಲ್ಲಿ ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರಸ್ಥರನ್ನು ಬೆದರಿಸಿ ಅವರ ಬಳಿ ಹಣ ವಸೂಲಿ ಮಾಡುತ್ತಿದ್ದ.
ಈ ಬಗ್ಗೆ ಸಂಶಯಗೊಂಡ ವ್ಯಾಪಾರಸ್ಥರು ಆತನನ್ನು ಹಿಡಿದು ಪ್ರಶ್ನಿಸಿದಾಗ ನಿಜಾಂಶ ಬಯಲಾಗಿದೆ. ಸ್ವತಃ ಸಾರ್ವಜನಿಕರೇ ಪೊಲೀಸರಿಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.