ಬೆಳಗಾವಿ: ತಾಲೂಕಿನ ಶಿಂಧೊಳ್ಳಿ ಇಂಡಾಲ ನಗರದ ಗಣಪತಿ ದೇವಸ್ಥಾನದ ಆವರಣದಲ್ಲಿ 'ಉಡಾಳ್ ಕಂಪನಿ' ಚಲನಚಿತ್ರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕ್ಲ್ಯಾಪ್ ಹಾಕುವ ಮೂಲಕ ಚಾಲನೆ ನೀಡಿದರು.
ಈ ಚಲನಚಿತ್ರಕ್ಕೆ ನಿರಂಜನ ಸ್ವಾಮೀಜಿ ನಿರ್ಮಾಪಕರಾಗಿದ್ದು, ನಿರ್ದೇಶನದ ಜವಾಬ್ದಾರಿಯನ್ನು ಸಂಜಯ ಹೆಚ್ ವಹಿಸಿಕೊಂಡಿದ್ದಾರೆ. ಸದ್ಯದಲ್ಲೇ ಚಲನಚಿತ್ರದ ಶೂಟಿಂಗ್ ಪ್ರಾರಂಭವಾಗುತ್ತಿದ್ದು, ಸಂಪೂರ್ಣ ಶೂಟಿಂಗ್ ಉತ್ತರ ಕರ್ನಾಟಕದಲ್ಲೇ ನಡೆಯಲಿದೆ.
ಚಲನಚಿತ್ರಗಳು ಬೆಂಗಳೂರಿಗಷ್ಟೇ ಸೀಮಿತವಾಗದೇ, ಉತ್ತರ ಕರ್ನಾಟಕಕ್ಕೂ ಬರಬೇಕು. ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಜನ ಕಲಾವಿದರಿದ್ದು, ಅವಕಾಶಗಳು ಸಿಗದೇ ವಂಚಿತರಾಗುತ್ತಿದ್ದಾರೆ. ಅಂತಹ ಪ್ರತಿಭೆಗಳನ್ನು ಗುರುತಿಸಿ, ಉತ್ತರ ಕರ್ನಾಟಕವು ಕೂಡ ಯಾವ ಕ್ಷೇತ್ರದಲ್ಲಿಯೂ ಕಡಿಮೆ ಇಲ್ಲ ಎನ್ನುವುದನ್ನು ತೋರಿಸಿಕೊಡಬೇಕಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಇದನ್ನೂ ಓದಿ: ಪೆಗಾಸಸ್ ಸಾಫ್ಟ್‌ವೇರ್ ಬಳಸಿಕೊಂಡು ನೂರಕ್ಕೂ ಹೆಚ್ಚು ಭಾರತೀಯರ ಮೊಬೈಲ್ ಹ್ಯಾಕ್