ETV Bharat / city

ನೋಡ ನೋಡುತ್ತಿದ್ದಂತೆ ವೇದಿಕೆ ಮೇಲೆ ಉರುಳಿದ ಲೈಟಿಂಗ್ ಟ್ರೇಸ್: ಈರಣ್ಣ ಕಡಾಡಿ ಪಾರು - ರಸಮಂಜರಿ ಕಾರ್ಯಕ್ರಮ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಚೂನಮ್ಮ ದೇವಿ ಜಾತ್ರೆಯ ಅಂಗವಾಗಿ ನಿನ್ನೆ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟನೆಗೊಳ್ಳುತ್ತಿದ್ದಾಗಲೇ ವೇದಿಕೆ ಮೇಲೆ ಹಾಕಿದ್ದ ಲೈಟಿಂಗ್ ಟ್ರೇಸ್ ಮುರಿದು ಬಿದ್ದಿದೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ರಾಜ್ಯಸಭಾ ಸದಸ್ಯ ಕಡಾಡಿ ಅವಘಡದಿಂದ ಪಾರಾಗಿದ್ದಾರೆ.

Lighting trace
Lighting trace
author img

By

Published : May 13, 2022, 10:35 AM IST

Updated : May 13, 2022, 12:08 PM IST

ಬೆಳಗಾವಿ: ರಸಮಂಜರಿ ಕಾರ್ಯಕ್ರಮ ನಡೆಯುತ್ತಿರುವಾಗ ನೋಡ ನೋಡುತ್ತಿದ್ದಂತೆ ವೇದಿಕೆ ಮೇಲೆ ಲೈಟಿಂಗ್ ಟ್ರೇಸ್ ಉರುಳಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆಯಿತು. ವೇದಿಕೆ ಮೇಲಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅದೃಷ್ಟವಶಾತ್ ಅವಘಡದಿಂದ ಪಾರಾಗಿದ್ದಾರೆ.

ವಿವರ: ರಾಜಾಪುರ ಗ್ರಾಮದಲ್ಲಿ ಚೂನಮ್ಮ ದೇವಿ ಜಾತ್ರೆಯ ಅಂಗವಾಗಿ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟನೆಗೊಳ್ಳುತ್ತಿದ್ದಾಗಲೇ ಲೈಟಿಂಗ್ ಟ್ರೇಸ್ ಮುರಿದುಬಿತ್ತು. ಸುಮಾರು 20 ಮಂದಿ ಗಣ್ಯರು ವೇದಿಕೆಯ ಮೇಲೆ ಕುಳಿತಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ. ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅವಘಡದ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, 'ಲೈಟಿಂಗ್ ಅಳವಡಿಸಿದ್ದ ಕಂಬ ವೇದಿಕೆ ಮೇಲೆ ಉರುಳಿ ಆಕಸ್ಮಿಕ ಅವಘಡ ಸಂಭವಿಸಿತು. ಮೂವರಿಗೆ ಗಾಯಗಳಾಗಿದ್ದು, ನಾವೆಲ್ಲರೂ ಬಚಾವ್ ಆಗಿದ್ದೇವೆ. ಗ್ರಾಮದ ಜಮೀನಿನಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದಕ್ಕೆ ಅವಘಡ ಸಂಭವಿಸಿದೆ. ಸ್ವಲ್ಪ ಆಯ ತಪ್ಪಿದ್ರೂ ವೇದಿಕೆ ಮೇಲಿದ್ದ ಗಣ್ಯರ ಪ್ರಾಣಹಾನಿ ಆಗುತ್ತಿತ್ತು. ವಿದ್ಯುತ್ ಅವಘಡ ಕೂಡ ಸಂಭವಿಸುವ ಸಾಧ್ಯತೆ ಇತ್ತು. ದೇವಿಯ ಆಶೀರ್ವಾದದಿಂದ ನಾವೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದೇವೆ' ಎಂದರು.

ಇದನ್ನೂ ಓದಿ: ಉದಯ್‌ಪುರದಲ್ಲಿ ಇಂದಿನಿಂದ 3 ದಿನ ಕಾಂಗ್ರೆಸ್‌ 'ಚಿಂತನ್‌ ಶಿಬಿರ': ಚರ್ಚೆಗೆ ಬರುವ ವಿಷಯಗಳೇನು?

Last Updated : May 13, 2022, 12:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.